Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 10:52 - ಕನ್ನಡ ಸತ್ಯವೇದವು J.V. (BSI)

52 ಯೇಸು ಅವನಿಗೆ - ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿ ಅದೆ ಎಂದು ಹೇಳಿದನು; ಕೂಡಲೇ ಅವನಿಗೆ ಕಣ್ಣು ಬಂದವು; ಅವನು ಆ ದಾರಿಯಲ್ಲಿ ಆತನ ಹಿಂದೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

52 ಯೇಸು ಅವನಿಗೆ, “ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಗುಣಪಡಿಸಿದೆ” ಎಂದು ಹೇಳಿದನು. ಕೂಡಲೇ ಅವನಿಗೆ ಕಣ್ಣಿನ ದೃಷ್ಟಿ ಬಂದಿತು. ಅವನು ಆ ದಾರಿಯಲ್ಲಿ ಆತನನ್ನು ಹಿಂಬಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

52 ಯೇಸು ಅವನಿಗೆ, “ಹೋಗು, ನಿನ್ನ ವಿಶ್ವಾಸವೇ ನಿನ್ನನ್ನು ಸ್ಪಸ್ಥಮಾಡಿದೆ,” ಎಂದರು. ಆ ಕ್ಷಣವೇ ಅವನಿಗೆ ದೃಷ್ಟಿಬಂದಿತು. ಅವನೂ ಯೇಸುವನ್ನು ಹಿಂಬಾಲಿಸಿ ಹಿಂದೆಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

52 ಯೇಸು, “ಹೋಗು, ನೀನು ನಂಬಿದ್ದರಿಂದ ನಿನಗೆ ಗುಣವಾಯಿತು” ಎಂದನು. ಆಗ ಅವನಿಗೆ ದೃಷ್ಟಿ ಬಂದಿತು. ಅವನು ಯೇಸುವನ್ನು ಆ ದಾರಿಯಲ್ಲಿ ಹಿಂಬಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

52 ಅದಕ್ಕೆ ಯೇಸು ಅವನಿಗೆ, “ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಪಡಿಸಿದೆ,” ಎಂದರು. ಕೂಡಲೇ ಅವನು ತನ್ನ ದೃಷ್ಟಿಯನ್ನು ಪಡೆದು, ದಾರಿಯಲ್ಲಿ ಯೇಸುವನ್ನು ಹಿಂಬಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

52 ತನ್ನಾ ಜೆಜುನ್ ತೆಕಾ “ತುಜ್ಯಾ ವಿಶ್ವಾಸಾನುಚ್ ತುಕಾ ಬರೆ ಕರ್‍ಲ್ಯಾನ್, ಜಾ” ಮಟ್ಲ್ಯಾನ್, ತನ್ನಾಚ್ ತೆಚಿ ದಿಸ್ಟ್ ಯೆಲಿ ಅನಿ ತೊ ತ್ಯಾ ರಸ್ತ್ಯಾನಿ ಜೆಜುಚ್ಯಾ ಫಾಟ್ನಾ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 10:52
22 ತಿಳಿವುಗಳ ಹೋಲಿಕೆ  

ಆಗ ಯೇಸು ಹಿಂತಿರುಗಿ ಆಕೆಯನ್ನು ನೋಡಿ - ಮಗಳೇ, ಧೈರ್ಯವಾಗಿರು; ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು ಅಂದನು. ಆ ಕ್ಷಣವೇ ಆ ಹೆಂಗಸು ಸ್ವಸ್ಥವಾದಳು.


ಆದರೆ ಆತನು ಆ ಹೆಂಗಸಿಗೆ - ನಿನ್ನ ನಂಬಿಕೆಯೇ ನಿನ್ನನ್ನು ರಕ್ಷಿಸಿ ಅದೆ; ಸಮಾಧಾನದಿಂದ ಹೋಗು ಎಂದು ಹೇಳಿದನು.


ಆಗ ಆತನು ಅವನ ಕಣ್ಣುಗಳ ಮೇಲೆ ತಿರಿಗಿ ಕೈಯಿಟ್ಟನು; ಅವನು ಕಣ್ಣು ಬಿಟ್ಟು ನೋಡಲು ಅವನಿಗೆ ಗುಣವಾಗಿತ್ತು; ಎಲ್ಲವೂ ಸ್ಪಷ್ಟವಾಗಿ ಕಾಣಿಸಿತು.


ಆತನು ಆಕೆಗೆ - ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು; ಸಮಾಧಾನದಿಂದ ಹೋಗು; ನಿನ್ನನ್ನು ಕಾಡಿದ ರೋಗವು ಹೋಗಿ ನಿನಗೆ ಗುಣವಾಗಲಿ ಎಂದು ಹೇಳಿದನು.


ಹುಟ್ಟುಕುರುಡನಿಗೆ ಯಾರಾದರೂ ಕಣ್ಣು ಕೊಟ್ಟ ಸಂಗತಿಯನ್ನು ಲೋಕಾದಿಯಿಂದ ಒಬ್ಬರೂ ಕೇಳಿದ್ದಿಲ್ಲ;


ಆಗ ಯೇಸು ಆಕೆಗೆ - ಅಮ್ಮಾ, ನಿನ್ನ ನಂಬಿಕೆ ಬಹಳ; ನಿನ್ನ ಮನಸ್ಸಿನಂತೆ ಆಗಲಿ ಎಂದು ಉತ್ತರಕೊಟ್ಟನು. ಅದೇ ಗಳಿಗೆಯಲ್ಲಿ ಆಕೆಯ ಮಗಳು ಸ್ವಸ್ಥಳಾದಳು.


ಅವರು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು ನನ್ನಲ್ಲಿ ನಂಬಿಕೆಯಿಡುವದರಿಂದ ಪಾಪಪರಿಹಾರವನ್ನೂ ಪವಿತ್ರರಾದವರಲ್ಲಿ ಹಕ್ಕನ್ನೂ ಹೊಂದುವಂತೆ ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ ಅಂದನು.


ಆತನು ಹತ್ತಿರಕ್ಕೆ ಬಂದು ಆಕೆಯ ಕೈಯನ್ನು ಹಿಡಿದು ಎಬ್ಬಿಸಲು ಜ್ವರವು ಆಕೆಯನ್ನು ಬಿಟ್ಟು ಹೋಯಿತು; ಆಕೆಯು ಅವರಿಗೆ ಉಪಚಾರಮಾಡಿದಳು.


ಆಗ ಕುರುಡರೂ ಕುಂಟರೂ ದೇವಾಲಯದಲ್ಲಿ ಆತನ ಬಳಿಗೆ ಬರಲು ಅವರನ್ನು ಸ್ವಸ್ಥಮಾಡಿದನು.


ದೆವ್ವಹಿಡಿದು ಕುರುಡನೂ ಮೂಕನೂ ಆಗಿರುವ ಒಬ್ಬನನ್ನು ಆತನ ಬಳಿಗೆ ಕರತಂದರು; ಆತನು ಅವನನ್ನು ಸ್ವಸ್ಥಮಾಡಲು ಆ ಮೂಕನಿಗೆ ಬಾಯಿ ಕಣ್ಣು ಎರಡೂ ಬಂದವು.


ಆಗ ಯೇಸು - ನಾನು ನ್ಯಾಯತೀರ್ಪಿಗಾಗಿ ಈ ಲೋಕಕ್ಕೆ ಬಂದಿದ್ದೇನೆ; ಆ ತೀರ್ಪು ಏನಂದರೆ, ಕಣ್ಣಿಲ್ಲದವರಿಗೆ ಕಣ್ಣುಬರುವವು. ಕಣ್ಣಿದ್ದವರು ಕುರುಡರಾಗುವರು ಅಂದನು.


ಆಗ ಕುರುಡರ ಕಣ್ಣು ಕಾಣುವದು, ಕಿವುಡರ ಕಿವಿ ಕೇಳುವದು, ಕುಂಟನು ಜಿಂಕೆಯಂತೆ ಹಾರುವನು, ಮೂಕನ ನಾಲಿಗೆಯು ಹರ್ಷಧ್ವನಿಗೈಯುವದು;


ಯೆಹೋವನು ಕುರುಡರಿಗೆ ಕಣ್ಣು ಕೊಡುತ್ತಾನೆ. ಯೆಹೋವನು ಕುಗ್ಗಿದವರನ್ನು ಉದ್ಧರಿಸುತ್ತಾನೆ. ಯೆಹೋವನು ನೀತಿವಂತರನ್ನು ಪ್ರೀತಿಸುತ್ತಾನೆ.


ಆತನು ನುಡಿದ ಮಾತ್ರಕ್ಕೆ ಸಮಸ್ತವೂ ಉಂಟಾಯಿತು; ಆತನು ಆಜ್ಞಾಪಿಸುತ್ತಲೇ ಸರ್ವವೂ ಸ್ಥಾಪನೆಯಾಯಿತು.


ಯಾವನಾದರೂ ನನ್ನ ಹೆಸರಿನಲ್ಲಿ ಈ ಚಿಕ್ಕ ಮಗುವನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು; ಮತ್ತು ಯಾವನಾದರೂ ನನ್ನನ್ನು ಸೇರಿಸಿಕೊಂಡರೆ ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಂಡ ಹಾಗಾಯಿತು; ಯಾಕಂದರೆ ನಿಮ್ಮೆಲ್ಲರಲ್ಲಿ ಯಾವನು ಚಿಕ್ಕವನೋ ಅವನೇ ದೊಡ್ಡವನು ಎಂದು ಹೇಳಿದನು.


ಆತನು ಕೈನೀಡಿ ಅವನನ್ನು ಮುಟ್ಟಿ - ನನಗೆ ಮನಸ್ಸುಂಟು; ಶುದ್ಧವಾಗು ಅಂದನು. ಕೂಡಲೆ ಅವನ ಕುಷ್ಠವು ವಾಸಿಯಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು