Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 11:14 - ಕನ್ನಡ ಸತ್ಯವೇದವು J.V. (BSI)

14 ಆಗ ಯೇಸು ಆ ಮರಕ್ಕೆ - ಇನ್ನು ಮೇಲೆ ಒಬ್ಬರೂ ನಿನ್ನಲ್ಲಿ ಹಣ್ಣನ್ನು ಎಂದೆಂದಿಗೂ ತಿನ್ನದ ಹಾಗಾಗಲಿ ಎಂದು ಹೇಳಿದನು. ಆತನ ಶಿಷ್ಯರು ಅದನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಯೇಸು ಆ ಮರಕ್ಕೆ, “ಇನ್ನೆಂದಿಗೂ ಒಬ್ಬರೂ ನಿನ್ನಲ್ಲಿ ಹಣ್ಣನ್ನು ತಿನ್ನದಿರಲಿ” ಎಂದು ಹೇಳಿದನು. ಆತನ ಶಿಷ್ಯರು ಅದನ್ನು ಕೇಳಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಯೇಸು ಆ ಮರಕ್ಕೆ, “ಇನ್ನು ಮುಂದೆ ನಿನ್ನ ಹಣ್ಣನ್ನು ಯಾರೂ ಎಂದಿಗೂ ತಿನ್ನದಂತಾಗಲಿ,” ಎಂದರು. ಶಿಷ್ಯರು ಈ ಮಾತುಗಳನ್ನು ಕೇಳಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದ್ದರಿಂದ ಯೇಸು ಆ ಮರಕ್ಕೆ, “ಇನ್ನು ಮೇಲೆ ನಿನ್ನ ಹಣ್ಣನ್ನು ಯಾರೂ ತಿನ್ನದಂತಾಗಲಿ” ಎಂದನು. ಯೇಸುವಿನ ಶಿಷ್ಯರಿಗೂ ಈ ಮಾತು ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೇಸು ಅದಕ್ಕೆ, “ಇನ್ನೆಂದಿಗೂ ಯಾರೂ ನಿನ್ನಿಂದ ಹಣ್ಣನ್ನು ತಿನ್ನದಿರಲಿ,” ಎಂದರು. ಅದನ್ನು ಅವರ ಶಿಷ್ಯರು ಕೇಳಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತಸೆ ಮನುನ್ ಜೆಜುನ್ ತ್ಯಾ ಝಾಡಾಕ್ “ಹೆಚೆನ್ ಫಿಡೆ ತುಜಿ ಹನ್ನಾ ಕೊನ್ಬಿ ಖಾವ್ನಸುಂದಿತ್ ” ಮಟ್ಲ್ಯಾನ್. ಹೆ ಜೆಜುಚ್ಯಾ ಶಿಸಾನಿಬಿ ಆಯ್ಕಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 11:14
15 ತಿಳಿವುಗಳ ಹೋಲಿಕೆ  

ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಹತ್ತಿರಕ್ಕೆ ಹೋಗಿ ಅದರಲ್ಲಿ ಬರೀ ಎಲೆಗಳನ್ನೇ ಹೊರತು ಮತ್ತೇನೂ ಕಾಣದೆ ಅದಕ್ಕೆ - ಇನ್ನು ಮೇಲೆ ನಿನ್ನಲ್ಲಿ ಫಲವು ಎಂದೆಂದಿಗೂ ಆಗದೆಹೋಗಲಿ ಎಂದು ಹೇಳಿದನು. ಆ ಕ್ಷಣವೇ ಆ ಅಂಜೂರದ ಮರವು ಒಣಗಿಹೋಯಿತು.


ಯಾವನು ನನ್ನಲ್ಲಿ ನೆಲೆಗೊಂಡಿರುವದಿಲ್ಲವೋ ಅವನು ಆ ಕೊಂಬೆಯಂತೆ ಹೊರಕ್ಕೆ ಬಿಸಾಡಲ್ಪಟ್ಟು ಒಣಗಿಹೋಗುವನು; ಅಂಥ ಕೊಂಬೆಗಳನ್ನು ಕೂಡಿಸಿ ಬೆಂಕಿಯಲ್ಲಿ ಹಾಕುತ್ತಾರೆ, ಅವು ಸುಟ್ಟುಹೋಗುತ್ತವೆ.


ಒಳ್ಳೇ ಫಲವನ್ನು ಕೊಡದ ಎಲ್ಲಾ ಮರಗಳನ್ನು ಕಡಿದು ಬೆಂಕಿಯಲ್ಲಿ ಹಾಕುತ್ತಾರೆ.


ಈಗಲೇ ಮರಗಳ ಬೇರಿಗೆ ಕೊಡಲಿ ಹಾಕಿದೆ; ಒಳ್ಳೇ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕುವರು.


ಅನ್ಯಾಯ ಮಾಡುವವನು ಇನ್ನೂ ಅನ್ಯಾಯಮಾಡಲಿ; ಮೈಲಿಗೆಯಾದವನು ತನ್ನನ್ನು ಇನ್ನೂ ಮೈಲಿಗೆಮಾಡಿಕೊಳ್ಳಲಿ; ನೀತಿವಂತನು ಇನ್ನೂ ನೀತಿಯನ್ನು ಅನುಸರಿಸಲಿ; ಪವಿತ್ರನು ತನ್ನನ್ನು ಇನ್ನೂ ಪವಿತ್ರಮಾಡಿಕೊಳ್ಳಲಿ.


ಈ ಕಲ್ಲಿನ ಮೇಲೆ ಬೀಳುವವನು ತುಂಡುತುಂಡಾಗುವನು; ಇದು ಯಾರ ಮೇಲೆ ಬೀಳುತ್ತದೋ ಅವನನ್ನು ಪುಡಿಪುಡಿಮಾಡುವದು ಎಂದು ಹೇಳಿದನು.


ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ.


ಮತ್ತೊಂದು ಸಾಮ್ಯವನ್ನು ಕೇಳಿರಿ - ಒಬ್ಬ ಮನೆಯ ಯಜಮಾನನಿದ್ದನು. ಅವನು ಒಂದು ದ್ರಾಕ್ಷೇತೋಟವನ್ನು ಮಾಡಿ ಅದರ ಸುತ್ತಲೂ ಬೇಲಿಹಾಕಿಸಿ ಅದರಲ್ಲಿ ದ್ರಾಕ್ಷೆಯ ಆಲೆಯನ್ನು ಮಾಡಿಸಿ ಹೂಡೆಯನ್ನು ಕಟ್ಟಿಸಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ಬೇರೊಂದು ದೇಶಕ್ಕೆ ಹೋದನು.


ಮತ್ತು ಎಲೆಬಿಟ್ಟಿದ್ದ ಒಂದು ಅಂಜೂರದ ಮರವನ್ನು ದೂರದಲ್ಲಿ ಕಂಡು ಅದರಲ್ಲಿ ತನಗೇನಾದರೂ ಹಣ್ಣು ಸಿಕ್ಕೀತೆಂದು ಅಲ್ಲಿಗೆ ಹೋದನು. ಅದರ ಹತ್ತಿರಕ್ಕೆ ಬಂದಾಗ ಅದರಲ್ಲಿ ಬರೀ ಎಲೆಗಳನ್ನೇ ಹೊರತು ಮತ್ತೇನೂ ಕಾಣಲಿಲ್ಲ; ಅದು ಅಂಜೂರದ ಹಣ್ಣಿನ ಕಾಲವಲ್ಲ.


ಅವರು ಯೆರೂಸಲೇವಿುಗೆ ಬಂದಾಗ ಯೇಸು ದೇವಾಲಯಕ್ಕೆ ಹೋಗಿ ಅದರಲ್ಲಿ ಮಾರುವವರನ್ನೂ ಕೊಳ್ಳುವವರನ್ನೂ ಹೊರಡಿಸಿಬಿಡುವದಕ್ಕೆ ಪ್ರಾರಂಭಿಸಿ ಚಿನಿವಾರರ ಮೇಜುಗಳನ್ನೂ ಪಾರಿವಾಳಮಾರುವವರ ಕಾಲ್ಮಣೆಗಳನ್ನೂ ಕೆಡವಿದನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು