Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 11:17 - ಕನ್ನಡ ಸತ್ಯವೇದವು J.V. (BSI)

17 ಮತ್ತು ಆತನು ಉಪದೇಶಮಾಡಿ - ನನ್ನ ಆಲಯವು ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯವೆನಿಸಿಕೊಳ್ಳುವದು ಎಂದು ಬರೆದಿದೆಯಲ್ಲಾ? ಆದರೆ ನೀವು ಅದನ್ನು ಕಳ್ಳರ ಗವಿ ಮಾಡಿದ್ದೀರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಮತ್ತು ಆತನು ಉಪದೇಶಮಾಡಿ, “‘ನನ್ನ ಆಲಯವು ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯವೆನಿಸಿಕೊಳ್ಳುವುದು’ ಎಂದು ಬರೆದಿದೆಯಲ್ಲಾ? ಆದರೆ ‘ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 “ ‘ಸರ್ವಜನಾಂಗಗಳಿಗೂ ಪ್ರಾರ್ಥನಾಲಯ ನನ್ನೀ ಆಲಯ’ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ ಅಲ್ಲವೇ? ನೀವು ಅದನ್ನು ಕಳ್ಳಕಾಕರ ಗುಹೆಯನ್ನಾಗಿ ಮಾಡಿದ್ದೀರಿ,” ಎಂದು ಯೇಸು ಅವರಿಗೆ ಬುದ್ಧಿಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಂತರ ಯೇಸು ಜನರಿಗೆ ಉಪದೇಶಿಸಿ, “‘ನನ್ನ ಆಲಯವು ಎಲ್ಲಾ ಜನರಿಗೂ ಪ್ರಾರ್ಥನೆಯ ಆಲಯವೆನಿಸಿಕೊಳ್ಳುವುದು’ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ. ಆದರೆ ನೀವು ದೇವರ ಆಲಯವನ್ನು ‘ಕಳ್ಳರು ಅಡಗಿಕೊಳ್ಳುವ ಸ್ಥಳವನ್ನಾಗಿ ಮಾಡಿದ್ದೀರಿ’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಯೇಸು ಅವರಿಗೆ ಬೋಧಿಸುತ್ತಾ, “ನನ್ನ ಮನೆಯು ಎಲ್ಲಾ ಜನಾಂಗಗಳಿಗೂ ‘ಪ್ರಾರ್ಥನೆಯ ಮನೆ’ ಎಂದು ಕರೆಯಿಸಿಕೊಳ್ಳುವುದೆಂದು ಬರೆದಿದೆಯಲ್ಲವೇ? ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಮಾನಾ ಲೊಕಾಕ್ನಿ ಸಿಕ್ವುನ್ಗೆತ್ “ಮಾಜಿ ಗುಡಿ ಸಗ್ಳ್ಯಾ ದೆಸಾಚ್ಯಾ ಲೊಕಾಕ್ನಿ ಮಾಗ್ನಿ ಕರ್‍ತಲೆ ಘರ್ ಮನುನ್ ಬಲ್ವುತ್ಯಾತ್ ”ಮನುನ್ ಪವಿತ್ರ್ ಪುಸ್ತಕಾತ್ ಲಿವಲ್ಲೆ ಹಾಯ್ “ಖರೆ ತುಮಿ ತೆ ಚೊರಾಂಚೊ ಅಡ್ಡೊ ಕರುನ್ ಥವ್ಲ್ಯಾಶಿ.” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 11:17
9 ತಿಳಿವುಗಳ ಹೋಲಿಕೆ  

ಅವರೆಲ್ಲರನ್ನೂ ನಾನು ನನ್ನ ಪವಿತ್ರಪರ್ವತಕ್ಕೆ ಬರಮಾಡಿ ನನ್ನ ಪ್ರಾರ್ಥನಾಲಯದಲ್ಲಿ ಉಲ್ಲಾಸಗೊಳಿಸುವೆನು; ನನ್ನ ಯಜ್ಞವೇದಿಯಲ್ಲಿ ಅವರು ಅರ್ಪಿಸುವ ಸರ್ವಾಂಗಹೋಮಗಳೂ ಯಜ್ಞಗಳೂ ನನಗೆ ಮೆಚ್ಚಿಕೆಯಾಗುವವು; ನನ್ನ ಆಲಯವು ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯವೆನಿಸಿಕೊಳ್ಳುವದು.


ನನ್ನ ಹೆಸರುಗೊಂಡಿರುವ ಈ ಆಲಯವು ನಿಮ್ಮ ದೃಷ್ಟಿಯಲ್ಲಿ ಕಳ್ಳರ ಗವಿಯಾಯಿತೋ? ಆಹಾ, ನಾನೇ, ನಾನೇ ಇದನ್ನೆಲ್ಲಾ ನೋಡಿದ್ದೇನೆ ಎಂಬದು ಯೆಹೋವನಾದ ನನ್ನ ನುಡಿ.


ನನ್ನ ಆಲಯವು ಪ್ರಾರ್ಥನಾಲಯವಾಗಿರುವದು ಎಂದು ಬರೆದದೆಯಲ್ಲಾ; ಆದರೆ ನೀವು ಅದನ್ನು ಕಳ್ಳರ ಗವಿ ಮಾಡಿದ್ದೀರಿ ಎಂದು ಹೇಳಿದನು.


ಪಾರಿವಾಳ ಮಾರುವವರಿಗೆ - ಇವುಗಳನ್ನು ಇಲ್ಲಿಂದ ತಕ್ಕೊಂಡು ಹೋಗಿರಿ; ನನ್ನ ತಂದೆಯ ಮನೆಯನ್ನು ಸಂತೆ ಮಾಡಬೇಡಿರಿ ಎಂದು ಹೇಳಿದನು.


ಕಾನಾನು! ಅದರ ಕೈಯಲ್ಲಿ ಮೋಸದ ತ್ರಾಸು ಇದೆ; ಕಸಕೊಳ್ಳಬೇಕೆಂಬದೇ ಅದರ ಆಶೆ.


ಕೇದಾರಿನ ಹಿಂಡುಗಳೆಲ್ಲಾ ನಿನ್ನಲ್ಲಿ ಕೂಡುವವು; ನೆಬಾಯೋತಿನ ಟಗರುಗಳು ನೀನು ಮಾಡುವ ಯಜ್ಞಕ್ಕೆ ಅನುಕೂಲಿಸಿ ನನ್ನ ಯಜ್ಞವೇದಿಯ ಮೇಲೆ ಸಮರ್ಪಕವಾಗಿ ಒಯ್ಯಲ್ಪಡುವವು; ನನ್ನ ಸುಂದರಾಲಯವನ್ನು ಚಂದಗೊಳಿಸುವೆನು.


ಒಬ್ಬನನ್ನಾದರೂ ಸಾಮಾನು ಹೊತ್ತುಕೊಂಡು ದೇವಾಲಯದೊಳಗೆ ಹಾದು ಹೋಗಗೊಡಿಸಲಿಲ್ಲ.


ಅಲ್ಲಿ ದೇವಾಲಯದೊಳಗೆ ದನ ಕುರಿ ಪಾರಿವಾಳ ಮಾರುವವರನ್ನೂ ಕೂತಿರುವ ಚಿನಿವಾರರನ್ನೂ ಕಂಡು ಹಗ್ಗದಿಂದ ಕೊರಡೆ ಮಾಡಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು