Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 11:18 - ಕನ್ನಡ ಸತ್ಯವೇದವು J.V. (BSI)

18 ಅದನ್ನು ಮಹಾಯಾಜಕರೂ ಶಾಸ್ತ್ರಿಗಳೂ ಕೇಳಿ ಅವನನ್ನು ಯಾವ ಉಪಾಯದಿಂದ ಕೊಲ್ಲೋಣ ಎಂದು ಸಂದರ್ಭ ನೋಡುತ್ತಿದ್ದರು; ಯಾಕಂದರೆ ಜನರೆಲ್ಲಾ ಆತನ ಉಪದೇಶವನ್ನು ಕೇಳಿ ಅತ್ಯಾಶ್ಚರ್ಯಪಟ್ಟದ್ದರಿಂದ ಅವರು ಆತನಿಗೆ ಹೆದರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅದನ್ನು ಮುಖ್ಯಯಾಜಕರೂ, ಶಾಸ್ತ್ರಿಗಳೂ ಕೇಳಿ ಅವನನ್ನು ಯಾವ ಉಪಾಯದಿಂದ ಕೊಲ್ಲೋಣ ಎಂದು ಕಾದು ನೋಡುತ್ತಿದ್ದರು; ಏಕೆಂದರೆ ಜನರೆಲ್ಲರೂ ಆತನ ಉಪದೇಶವನ್ನು ಕೇಳಿ ಅತ್ಯಾಶ್ಚರ್ಯಪಟ್ಟಿದ್ದರಿಂದ ಅವರು ಆತನಿಗೆ ಹೆದರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ನಡೆದ ಈ ಸಂಗತಿಯನ್ನು ಕೇಳಿ ಯೇಸುವನ್ನು ಕೊಲ್ಲಿಸುವ ಮಾರ್ಗವನ್ನು ಹುಡುಕತೊಡಗಿದರು. ಏಕೆಂದರೆ, ಯೇಸುವನ್ನು ಕಂಡರೆ ಅವರಿಗೆ ಭಯವಿತ್ತು. ಕಾರಣ - ಜನರೆಲ್ಲರೂ ಅವರ ಬೋಧನೆಗೆ ಮಾರುಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಮಹಾಯಾಜಕರು ಹಾಗೂ ಧರ್ಮೋಪದೇಶಕರು ಈ ಸಂಗತಿಗಳನ್ನು ಕೇಳಿ ಯೇಸುವನ್ನು ಕೊಲ್ಲಿಸಲು ತಕ್ಕ ಮಾರ್ಗವನ್ನು ಕಂಡುಹಿಡಿಯಲು ಪ್ರಯತ್ನಿಸತೊಡಗಿದರು. ಜನರೆಲ್ಲರೂ ಯೇಸುವಿನ ಉಪದೇಶವನ್ನು ಕೇಳಿ ಅತ್ಯಾಶ್ಚರ್ಯಪಟ್ಟಿದ್ದರಿಂದ ಅವರು ಯೇಸುವಿಗೆ ಭಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಮುಖ್ಯಯಾಜಕರೂ ನಿಯಮ ಬೋಧಕರೂ ಅದನ್ನು ಕೇಳಿ ಯೇಸುವನ್ನು ಹೇಗೆ ಕೊಲ್ಲಬೇಕೆಂದು ಆಲೋಚಿಸಿದರು. ಆದರೆ ಜನರೆಲ್ಲರೂ ಯೇಸುವಿನ ಬೋಧನೆಗೆ ಅತ್ಯಾಶ್ಚರ್ಯಪಟ್ಟದ್ದರಿಂದ ಅವರು ಯೇಸುವಿಗೆ ಭಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಯಾಜಕಾಂಚಿ ಮುಖಂಡಾ ಅನಿ ಖಾಯ್ದೆ ಶಿಕ್ವುತಲ್ಯಾನಿ ಜೆಜುಚ್ಯಾ ಗೊಸ್ಟಿಯಾ ಆಯ್ಕುನ್, ತೆಕಾ ಕಶೆ ಕರುನ್ ಜಿವಾನಿ ಮಾರುಚೆ ಮನುನ್ ವಾಟ್ ಹುಡ್ಕುಕ್ ಲಾಗಲ್ಲ್ಯಾನಿ. ಖರೆ ಲೊಕಾ, ಜೆಜು ಸಿಕ್ವುತಲೆ ಮಾನುನ್ ಘೆಯ್ತ್ ಅನಿ ಅಜಾಪ್ ಹೊಯ್ತ್. ತಸೆ ಮನುನ್ ತೆನಿ ತೆಕಾ ಭಿಂಯ್ತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 11:18
26 ತಿಳಿವುಗಳ ಹೋಲಿಕೆ  

ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ಮೇಲೆ ಆ ಜನರ ಗುಂಪುಗಳು ಆತನ ಉಪದೇಶಕ್ಕೆ ಅತ್ಯಾಶ್ಚರ್ಯಪಟ್ಟವು.


ಇವನು ತಮ್ಮನ್ನೇ ಕುರಿತು ಈ ಸಾಮ್ಯವನ್ನು ಹೇಳಿದನು ಎಂದು ಅವರು ತಿಳುಕೊಂಡು ಆತನನ್ನು ಹಿಡಿಯುವದಕ್ಕೆ ಸಂದರ್ಭನೋಡುತ್ತಿದ್ದರು. ಆದರೆ ಜನರಿಗೆ ಭಯಪಟ್ಟು ಆತನನ್ನು ಬಿಟ್ಟುಹೋದರು.


ಪೌಲನು ಸುನೀತಿ ದಯೆ ಮುಂದಣ ನ್ಯಾಯವಿಚಾರಣೆ ಇವುಗಳ ವಿಷಯವಾಗಿ ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ಭಯಗ್ರಸ್ತನಾಗಿ ಅವನಿಗೆ - ಸದ್ಯಕ್ಕೆ ಹೋಗು; ಸಮಯ ದೊರಕಿದಾಗ ನಿನ್ನನ್ನು ಕರಿಸುವೆನು ಎಂದು ಹೇಳಿದನು.


ಆ ಓಲೇಕಾರರು - ಈ ಮನುಷ್ಯನು ಮಾತಾಡುವ ರೀತಿಯಲ್ಲಿ ಯಾರೂ ಎಂದೂ ಮಾತಾಡಿದ್ದಿಲ್ಲ ಎಂದು ಉತ್ತರಕೊಟ್ಟರು.


ಶಾಸ್ತ್ರಿಗಳೂ ಮಹಾಯಾಜಕರೂ ಈ ಮಾತುಗಳನ್ನು ಕೇಳಿ ತಮ್ಮನ್ನೇ ಕುರಿತು ಈ ಸಾಮ್ಯವನ್ನು ಹೇಳಿದನು ಎಂದು ತಿಳುಕೊಂಡು ಅದೇ ಗಳಿಗೆಯಲ್ಲಿ ಆತನನ್ನು ಹಿಡಿಯುವದಕ್ಕೆ ಸಂದರ್ಭನೋಡಿದರು; ಆದರೆ ಜನರಿಗೆ ಭಯಪಟ್ಟರು.


ಮತ್ತು ಆತನು ದಿನಾಲು ದೇವಾಲಯದಲ್ಲಿ ಉಪದೇಶಮಾಡುತ್ತಿದ್ದನು. ಅಷ್ಟರಲ್ಲಿ ಮಹಾಯಾಜಕರೂ ಶಾಸ್ತ್ರಿಗಳೂ ಪ್ರಜೆಗಳಲ್ಲಿ ಮುಖ್ಯಸ್ಥರೂ ಆತನನ್ನು ಕೊಲ್ಲುವದಕ್ಕೆ ಸಂದರ್ಭನೋಡುತ್ತಿದ್ದರು.


ಎಲ್ಲರು ಆತನನ್ನು ಹೊಗಳಿ ಆತನ ಬಾಯಿಂದ ಹೊರಡುವ ಇಂಪಾದ ಮಾತುಗಳಿಗೆ ಆಶ್ಚರ್ಯಪಟ್ಟು ಇವನು ಯೋಸೇಫನ ಮಗನಲ್ಲವೇ ಎಂದು ಮಾತಾಡಿಕೊಂಡರು.


ಮನುಷ್ಯರಿಂದ ಬಂತೆಂದು ಹೇಳಿದರೆ ಏನಾಗುವದೋ ಎಂಬದಾಗಿ ತಮ್ಮ ತಮ್ಮೊಳಗೆ ಮಾತಾಡಿಕೊಳ್ಳುತ್ತಿದ್ದರು. ಯೋಹಾನನು ಪ್ರವಾದಿಯೆಂದು ಜನರೆಲ್ಲರೂ ಅನುಮಾನವಿಲ್ಲದೆ ತಿಳುಕೊಂಡಿದ್ದದರಿಂದ ಇವರಿಗೆ ಜನರ ಭಯವಿತ್ತು.


ಹೆರೋದನು ಯೋಹಾನನನ್ನು ನೀತಿವಂತನೆಂದೂ ದೇವಭಕ್ತನೆಂದೂ ತಿಳಿದು ಅಂಜಿಕೊಂಡು ಅವನಿಗೆ ಯಾವ ಅಪಾಯವೂ ಬಾರದಂತೆ ಇಟ್ಟಿದ್ದನು. ಇದಲ್ಲದೆ ಯೋಹಾನನು ಹೇಳಿದ್ದನ್ನು ಅವನು ಕೇಳಿದಾಗ ಮನಸ್ಸಿನಲ್ಲಿ ಬಹು ಗಲಿಬಿಲಿ ಹುಟ್ಟಿದರೂ ಅವನ ಮಾತನ್ನು ಸಂತೋಷದಿಂದ ಕೇಳುತ್ತಿದ್ದನು.


ಫರಿಸಾಯರು ಹೊರಕ್ಕೆ ಹೋಗಿ ಕೂಡಲೆ ಹೆರೋದ್ಯರನ್ನು ಕೂಡಿಕೊಂಡು ಇವನನ್ನು ಯಾವ ಉಪಾಯದಿಂದ ಕೊಲ್ಲೋಣ ಎಂದು ಆತನಿಗೆ ವಿರೋಧವಾಗಿ ಆಲೋಚನೆ ಮಾಡಿಕೊಂಡರು.


ಜನರು ಆತನ ಉಪದೇಶಕ್ಕೆ ಅತ್ಯಾಶ್ಚರ್ಯಪಟ್ಟರು; ಯಾಕಂದರೆ ಆತನು ಶಾಸ್ತ್ರಿಗಳಂತೆ ಉಪದೇಶಮಾಡದೆ ಅಧಿಕಾರವಿದ್ದವನಂತೆ ಅವರಿಗೆ ಉಪದೇಶ ಮಾಡುತ್ತಿದ್ದನು.


ಆದರೆ ಮಹಾಯಾಜಕರೂ ಶಾಸ್ತ್ರಿಗಳೂ ಆತನು ಮಾಡಿದ ಆಶ್ಚರ್ಯಕರವಾದ ಕಾರ್ಯಗಳನ್ನೂ ದಾವೀದನ ಕುಮಾರನಿಗೆ ಜಯ ಜಯವೆಂದು ದೇವಾಲಯದಲ್ಲಿ ಕೂಗುತ್ತಿರುವ ಹುಡುಗರನ್ನೂ ನೋಡಿ ಸಿಟ್ಟುಗೊಂಡು


ಮನಃಪೂರ್ವಕವಾಗಿ ತಿರಸ್ಕರಿಸಲ್ಪಟ್ಟವನೂ ಅನ್ಯಜನಾಂಗಕ್ಕೆ ಅಸಹ್ಯನೂ ಜನದೊಡೆಯರ ಸೇವಕನೂ ಆದವನಿಗೆ ಇಸ್ರಾಯೇಲಿನ ವಿಮೋಚಕನೂ ಸದಮಲಸ್ವಾವಿುಯೂ ಆದ ಯೆಹೋವನು ಹೀಗೆ ಹೇಳುತ್ತಾನೆ - ಯೆಹೋವನ ಪ್ರಾಮಾಣಿಕತೆಯನ್ನೂ ಇಸ್ರಾಯೇಲಿನ ಸದಮಲಸ್ವಾವಿುಯು ನಿನ್ನನ್ನು ಪರಿಗ್ರಹಿಸಿರುವದನ್ನೂ ಅರಸರು ನೋಡಿ ಎದ್ದು ನಿಲ್ಲುವರು, ಅಧಿಪತಿಗಳು ಅಡ್ಡಬೀಳುವರು.


ಆಗ ಇಸ್ರಾಯೇಲ್ಯರ ಅರಸನು ಯೆಹೋಷಾಫಾಟನಿಗೆ - ಇವನು ನನಗೆ ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ ಮುಂತಿಳಿಸುತ್ತಾನೆಂದು ನಾನು ನಿನಗೆ ಹೇಳಲಿಲ್ಲವೋ ಎಂದನು.


ನಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿಯಿರುತ್ತಾನೆ; ಅವನು ಇಮ್ಲನ ಮಗನಾದ ಮೀಕಾಯೆಹು ಎಂಬವನು. ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಅವನು ನನ್ನನ್ನು ಕುರಿತು ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ ಮುಂತಿಳಿಸುತ್ತಾನೆ ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು - ಅರಸನು ಹಾಗನ್ನದಿರಲಿ ಅಂದನು.


ಅಹಾಬನು ಎಲೀಯನನ್ನು ಕಂಡು ಅವನನ್ನು - ನನ್ನ ವೈರಿಯೇ, ನೀನು ನನ್ನನ್ನು ಕಂಡುಕೊಂಡಿಯಾ ಎಂದು ಕೇಳಲು ಅವನು - ಹೌದು, ಕಂಡುಕೊಂಡೆನು; ನೀನು ನಿನ್ನನ್ನು ಪಾಪಕ್ಕೆ ಮಾರಿಬಿಟ್ಟು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದಿಯಲ್ಲಾ.


ಆತನು ಆಡಿದ ಮಾತುಗಳನ್ನು ಕೇಳಿದವರೆಲ್ಲರು ಆತನ ಬುದ್ಧಿಗೂ ಉತ್ತರಗಳಿಗೂ ಆಶ್ಚರ್ಯಪಟ್ಟರು.


ಈ ಸಂಗತಿಗಳಾದ ಮೇಲೆ ಯೇಸು ಗಲಿಲಾಯದಲ್ಲಿ ಸಂಚಾರಮಾಡುತ್ತಿದ್ದನು; ಯೆಹೂದ್ಯರು ಆತನನ್ನು ಕೊಲ್ಲುವ ಪ್ರಯತ್ನದಲ್ಲಿದ್ದದರಿಂದ ಆತನಿಗೆ ಯೂದಾಯದಲ್ಲಿ ಸಂಚಾರಮಾಡುವ ಮನಸ್ಸಿರಲಿಲ್ಲ.


ಮೋಶೆಯು ನಿಮಗೆ ಧರ್ಮಶಾಸ್ತ್ರವನ್ನು ಕೊಟ್ಟಿದ್ದರೂ ನಿಮ್ಮಲ್ಲಿ ಒಬ್ಬನಾದರೂ ಧರ್ಮಶಾಸ್ತ್ರದಂತೆ ನಡೆಯುವದಿಲ್ಲವಲ್ಲಾ; ಯಾಕೆ ನನ್ನನ್ನು ಕೊಲ್ಲುವದಕ್ಕೆ ನೋಡುತ್ತೀರಿ? ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು