ಮಾರ್ಕ 11:22 - ಕನ್ನಡ ಸತ್ಯವೇದವು J.V. (BSI)22 ಯೇಸು ಹೇಳಿದ್ದೇನಂದರೆ - ನಿಮಗೆ ದೇವರಲ್ಲಿ ನಂಬಿಕೆಯಿರಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಯೇಸು ಹೇಳಿದ್ದೇನಂದರೆ, “ನಿಮಗೆ ದೇವರಲ್ಲಿ ನಂಬಿಕೆಯಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅದಕ್ಕೆ ಯೇಸು, “ನಿಮಗೆ ದೇವರಲ್ಲಿ ವಿಶ್ವಾಸವಿರಲಿ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಯೇಸು, “ದೇವರಲ್ಲಿ ನಂಬಿಕೆ ಇಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಯೇಸು ಉತ್ತರವಾಗಿ ಅವರಿಗೆ ಹೇಳಿದ್ದೇನೆಂದರೆ, “ದೇವರ ನಂಬಿಕೆ ನಿಮಗಿರಲಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ತನ್ನಾ ಜೆಜುನ್ “ದೆವಾ ವರ್‍ತಿ ವಿಶ್ವಾಸ್ ಥವಾ” ಮನುನ್ ಜಬಾಬ್ ದಿಲ್ಯಾನ್. ಅಧ್ಯಾಯವನ್ನು ನೋಡಿ |
ದೇವರ ದಾಸನೂ ಯೇಸು ಕ್ರಿಸ್ತನ ಅಪೊಸ್ತಲನೂ ಆಗಿರುವ ಪೌಲನು ನಮ್ಮೆಲ್ಲರಿಗೆ ಹುದುವಾಗಿರುವ ನಂಬಿಕೆಯ ಸಂಬಂಧದಲ್ಲಿ ನನ್ನ ನಿಜಕುಮಾರನಾದ ತೀತನಿಗೆ ಬರೆಯುವದೇನಂದರೆ - ತಂದೆಯಾದ ದೇವರಿಂದಲೂ ನಮ್ಮ ರಕ್ಷಕನಾದ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಶಾಂತಿಯೂ ಆಗಲಿ. ದೇವರಾದುಕೊಂಡವರ ನಂಬಿಕೆಯೂ ಭಕ್ತಿಯನ್ನುಂಟುಮಾಡುವ ಸತ್ಯದ ಪರಿಜ್ಞಾನವೂ ವೃದ್ಧಿಯಾಗುವದಕ್ಕೋಸ್ಕರವೇ ಅಪೊಸ್ತಲನಾಗಿದ್ದೇನೆ. ಆ ನಂಬಿಕೆಗೂ ಸತ್ಯದ ಪರಿಜ್ಞಾನಕ್ಕೂ ನಿತ್ಯಜೀವದ ನಿರೀಕ್ಷೆಯೇ ಆಧಾರವಾಗಿದೆ. ಸುಳ್ಳಾಡದ ದೇವರು ಆ ನಿತ್ಯಜೀವವನ್ನು ಕೊಡುತ್ತೇನೆಂದು ಅನಾದಿಕಾಲದಲ್ಲಿ ವಾಗ್ದಾನಮಾಡಿ ತನ್ನ ಕ್ಲುಪ್ತ ಸಮಯದಲ್ಲಿ ವಾಗ್ದಾನ ನೆರವೇರಿಸಿ ಪ್ರಸಂಗದ ಮೂಲಕ ಪ್ರಕಟಿಸಿದನು. ಆ ಪ್ರಸಂಗೋದ್ಯೋಗವು ನಮ್ಮ ರಕ್ಷಕನಾದ ದೇವರ ಅಪ್ಪಣೆಯ ಪ್ರಕಾರ ನನಗೆ ಒಪ್ಪಿಸಲ್ಪಟ್ಟದೆ.