Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 11:23 - ಕನ್ನಡ ಸತ್ಯವೇದವು J.V. (BSI)

23 ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾವನಾದರೂ ಈ ಬೆಟ್ಟಕ್ಕೆ - ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು ಎಂದು ಹೇಳಿ ತನ್ನ ಮನಸ್ಸಿನಲ್ಲಿ ಸಂಶಯಪಡದೆ ತಾನು ಹೇಳಿದ್ದು ಆಗುವದೆಂದು ನಂಬಿದರೆ ಅವನು ಹೇಳಿದಂತೆಯೇ ಆಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರಾದರೂ ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು!’ ಎಂದು ಹೇಳಿ ತನ್ನ ಮನಸ್ಸಿನಲ್ಲಿ ಸಂಶಯಪಡದೆ ತಾನು ಹೇಳಿದ್ದು ಆಗುವುದೆಂದು ನಂಬಿದರೆ ಅವನು ಹೇಳಿದಂತೆಯೇ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆಗ ಯಾವನಾದರೂ ಈ ಬೆಟ್ಟಕ್ಕೆ, ‘ನೀನು ಇಲ್ಲಿಂದ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು!’ ಎಂದು ಹೇಳಿ, ಮನಸ್ಸಿನಲ್ಲಿ ಸಂದೇಹಪಡದೆ, ಅದು ಸಂಭವಿಸುವುದೆಂದು ವಿಶ್ವಾಸಿಸಿದರೆ, ನಾನು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ, ಅವನು ಹೇಳಿದಂತೆಯೇ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಈ ಬೆಟ್ಟಕ್ಕೆ, ‘ನೀನು ಹೋಗಿ ಸಮುದ್ರದೊಳಗೆ ಬೀಳು’ ಎಂದು ಹೇಳಿ, ಸಂಶಯವನ್ನೇಪಡದೆ, ನೀವು ಹೇಳಿದ್ದು ಖಂಡಿತವಾಗಿ ನೆರವೇರುತ್ತದೆ ಎಂದು ನಂಬಿದರೆ, ದೇವರು ಅದನ್ನು ನಿಮಗಾಗಿ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಏಕೆಂದರೆ ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಯಾರಾದರೂ ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು,’ ಎಂದು ಹೇಳಿ ತಮ್ಮ ಹೃದಯದಲ್ಲಿ ಸಂಶಯಪಡದೆ ತಾವು ಹೇಳಿದಂತೆಯೇ ಆಗುವುದೆಂದು ನಂಬಿದರೆ ಅವರು ಹೇಳಿದಂತೆಯೇ ಅವರಿಗೆ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಮಿಯಾ ತುಮ್ಕಾ ಖರೆಚ್ ಸಾಂಗ್ತಾ, ತುಮ್ಚ್ಯಾತ್ಲೊ ಕೊನ್ಬಿ, ಹ್ಯಾ ಮಡ್ಡಿಕ್ ಸಮುಂದರಾತ್ ಜಾವ್ನ್ ಪಡ್ ಮನುನ್, ತುಮ್ಚ್ಯಾ ಮನಾತ್ ಸಂಶೆವ್ ಕರಿನಾಸ್ತಾನಾ ಸಾಂಗ್ಲ್ಯಾರ್, ತೆ, ದೆವ್, ತೆಂಚೆ ಸಾಟ್ನಿ ಕರ್‍ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 11:23
11 ತಿಳಿವುಗಳ ಹೋಲಿಕೆ  

ನಿಮ್ಮ ನಂಬಿಕೆ ಕಡಿಮೆಯಾಗಿರುವದರಿಂದಲೇ ಆಗಲಿಲ್ಲ; ನಿಮಗೆ ಸತ್ಯವಾಗಿ ಹೇಳುತ್ತೇನೆ, ಸಾಸಿವೇಕಾಳಷ್ಟು ನಂಬಿಕೆ ನಿಮಗೆ ಇರುವದಾದರೆ ನೀವು ಈ ಬೆಟ್ಟಕ್ಕೆ -


ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ಏನು ಬೇಕಾದರೂ ಬೇಡಿಕೊಳ್ಳಿರಿ, ಅದು ನಿಮಗೆ ದೊರೆಯುವದು.


ಅದಕ್ಕೆ ಯೇಸು - ನಿಮಗೆ ಸತ್ಯವಾಗಿ ಹೇಳುತ್ತೇನೆ ನೀವು ಸಂಶಯಪಡದೆ ನಂಬಿದರೆ ನಾನು ಅಂಜೂರದ ಮರಕ್ಕೆ ಮಾಡಿದಂಥದನ್ನು ನೀವು ಮಾಡುವಿರಿ. ಇದು ಮಾತ್ರವಲ್ಲದೆ ಈ ಬೆಟ್ಟಕ್ಕೆ - ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು ಎಂದು ಹೇಳಿದರೆ ಅದೂ ಆಗುವದು.


ಆಗ ಯೆಹೋವನಲ್ಲಿ ಸಂತೋಷಿಸುವಿ; ಮತ್ತು ಆತನು ನಿನ್ನ ಇಷ್ಟಾರ್ಥಗಳನ್ನು ನೆರವೇರಿಸುವನು.


ಇದಲ್ಲದೆ ನೀವು ನನ್ನ ಹೆಸರಿನಲ್ಲಿ ಏನೇನು ಬೇಡಿಕೊಳ್ಳುವಿರೋ, ಅದನ್ನು ನೆರವೇರಿಸುವೆನು; ಹೀಗೆ ಮಗನ ಮೂಲಕವಾಗಿ ತಂದೆಗೆ ಮಹಿಮೆ ಉಂಟಾಗುವದು.


ಸ್ವಾವಿುಯು - ಸಾಸಿವೇ ಕಾಳಷ್ಟು ನಂಬಿಕೆ ನಿಮಗಿದ್ದರೆ ನೀವು ಈ ಅತ್ತೀಮರಕ್ಕೆ - ನೀನು ಬೇರು ಸಹಿತ ಕಿತ್ತುಕೊಂಡುಹೋಗಿ ಸಮುದ್ರದಲ್ಲಿ ನಾಟಿಕೋ ಎಂದು ಹೇಳಿದರೂ ಅದು ನಿಮ್ಮ ಮಾತನ್ನು ಕೇಳುವದು.


ನನಗೆ ಪ್ರವಾದನವರವಿದ್ದರೂ ಎಲ್ಲಾ ರಹಸ್ಯಗಳೂ ಸಕಲ ವಿಧವಾದ ವಿದ್ಯೆಯೂ ತಿಳಿದರೂ, ಬೆಟ್ಟಗಳನ್ನು ತೆಗೆದಿಡುವದಕ್ಕೆ ಬೇಕಾದಷ್ಟು ನಂಬಿಕೆಯಿದ್ದರೂ ನಾನು ಪ್ರೀತಿಯಿಲ್ಲದವನಾಗಿದ್ದರೆ ಏನೂ ಅಲ್ಲದವನಾಗಿದ್ದೇನೆ.


ಯೇಸು ಅದನ್ನು ಕೇಳಿ ದೋಣಿಯನ್ನು ಹತ್ತಿ ಆ ಸ್ಥಳವನ್ನು ಬಿಟ್ಟು ವಿಂಗಡವಾಗಿ ಅಡವಿಗೆ ಹೋದನು. ಇದನ್ನು ಕೇಳಿದ ಜನರು ಗುಂಪುಗುಂಪಾಗಿ ತಮ್ಮ ತಮ್ಮ ಊರುಗಳಿಂದ ಕಾಲುನಡಿಗೆಯಿಂದ ಆತನ ಹಿಂದೆ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು