ಮಾರ್ಕ 11:25 - ಕನ್ನಡ ಸತ್ಯವೇದವು J.V. (BSI)25 ಇದಲ್ಲದೆ ನೀವು ನಿಂತುಕೊಂಡು ಪ್ರಾರ್ಥನೆಮಾಡುವಾಗೆಲ್ಲಾ ಯಾರ ಮೇಲೆ ಏನಾದರೂ ವಿರೋಧವಿದ್ದರೆ ಅದನ್ನು ಅವನಿಗೆ ಕ್ಷವಿುಸಿರಿ; ಕ್ಷವಿುಸಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪುಗಳನ್ನು ನಿಮಗೆ ಕ್ಷವಿುಸಿಬಿಡುವನು ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಇದಲ್ಲದೆ ನೀವು ನಿಂತುಕೊಂಡು ಪ್ರಾರ್ಥಿಸುವಾಗ ಯಾರ ಮೇಲೆ ಏನಾದರೂ ವಿರೋಧವಿದ್ದರೆ ಅದನ್ನು ಕ್ಷಮಿಸಿರಿ; ಆಗ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವನು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಇದಲ್ಲದೆ, ನೀವು ಪ್ರಾರ್ಥನೆ ಮಾಡುವಾಗಲೆಲ್ಲ, ಯಾರಿಗಾದರೂ ವಿರೋಧವಾಗಿ ನಿಮ್ಮ ಮನಸ್ಸಿನಲ್ಲಿ ಏನಾದರೂ ಇದ್ದರೆ, ಅದನ್ನು ಕ್ಷಮಿಸಿಬಿಡಿ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ನೀವು ಪ್ರಾರ್ಥಿಸಲು ಸಿದ್ಧರಾಗಿರುವಾಗ, ನೀವು ಇನ್ನೊಬ್ಬನ ವಿಷಯದಲ್ಲಿ ಯಾವುದೇ ಕಾರಣದಿಂದಾಗಲಿ ಕೋಪದಿಂದಿರುವುದು ನಿಮ್ಮ ನೆನಪಿಗೆ ಬಂದರೆ, ಅವನನ್ನು ಕ್ಷಮಿಸಿಬಿಡಿ. ಆಗ ಪರಲೋಕದಲ್ಲಿರುವ ನಿಮ್ಮ ತಂದೆಯೂ ನಿಮ್ಮ ಪಾಪಗಳನ್ನು ಕ್ಷಮಿಸುವನು” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ನೀವು ನಿಂತುಕೊಂಡು ಪ್ರಾರ್ಥಿಸುವಾಗ ಯಾರಿಗಾದರೂ ವಿರೋಧವಾದದ್ದು ನಿಮ್ಮಲ್ಲಿದ್ದರೆ ಕ್ಷಮಿಸಿರಿ. ಆಗ ಪರಲೋಕದಲ್ಲಿರುವ ನಿಮ್ಮ ತಂದೆಯೂ ಸಹ ನಿಮ್ಮ ಅಪರಾಧಗಳನ್ನು ಕ್ಷಮಿಸುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ತುಮಿ ಮಾಗ್ನಿ ಕರುಕ್ ಜಾತಾನಾ, ಕಸ್ಲ್ಯಾಬಿ ಕಾರನಾಕ್ ಲಾಗುನ್ ಕೊನಾ ವರ್‍ತಿ ತರ್ ತುಮ್ಕಾ ರಾಗ್ ಹೊತ್ತೆ ಯಾದ್ ಯೆಲ್ಯಾರ್. ತೆಕಾ ತುಮಿ ಮಾಪ್ ಕರುನ್ ಸೊಡಾ, ತನ್ನಾ ಸರ್ಗಾವಯ್ಲೊ ತುಮ್ಚೊ ಬಾಬಾಬಿ ತುಮ್ಚೆ ಸಗ್ಳೆ ಚುಕಾ ಮಾಪ್ ಕರ್‍ತಾ. ಅಧ್ಯಾಯವನ್ನು ನೋಡಿ |