Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 12:14 - ಕನ್ನಡ ಸತ್ಯವೇದವು J.V. (BSI)

14 ಇವರು ಬಂದು - ಬೋಧಕನೇ, ನೀನು ಸತ್ಯವಂತನು, ಯಾರಿಗೂ ಹೆದರದವನು; ನೀನು ಜನರ ಮುಖದಿಚ್ಫೆಗೆ ಮಾತಾಡದೆ ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನಾಗಿದ್ದೀ ಎಂದು ಬಲ್ಲೆವು. ಕೈಸರನಿಗೆ ತೆರಿಗೆ ಕೊಡುವದು ಸರಿಯೋ ಸರಿಯಲ್ಲವೋ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇವರು ಬಂದು, “ಬೋಧಕನೇ ನೀನು ಸತ್ಯವಂತನು, ಯಾವ ಮನುಷ್ಯನನ್ನು ಲಕ್ಷಿಸದವನೂ, ಮುಖದಾಕ್ಷಿಣ್ಯ ತೋರಿಸದವನೂ, ಸತ್ಯಕ್ಕನುಸಾರವಾಗಿ ದೈವಮಾರ್ಗವನ್ನು ಬೋಧಿಸುವವನೂ ಎಂದು ನಾವು ಬಲ್ಲೆವು. ಕೈಸರನಿಗೆ ಸುಂಕ ಕೊಡುವುದು ಧರ್ಮಸಮ್ಮತವೋ? ಅಲ್ಲವೋ? ನಾವದನ್ನು ಕೊಡಬೇಕೋ ಬೇಡವೋ?” ಎಂದು ಆತನನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇವರು ಬಂದು, “ಬೋಧಕರೇ, ತಾವು ಸತ್ಯವಂತರು, ಸ್ಥಾನಮಾನಕ್ಕೆ ಮಣಿಯದವರು, ಮುಖದಾಕ್ಷಿಣ್ಯಕ್ಕೆ ಎಡೆಕೊಡದವರು, ಸತ್ಯಕ್ಕನುಸಾರ ದೈವಮಾರ್ಗವನ್ನು ಬೋಧಿಸುವವರು ಎಂದು ನಾವು ಬಲ್ಲೆವು. ಹೀಗಿರುವಲ್ಲಿ ರೋಮ್‍ಚಕ್ರಾಧಿಪತಿಗೆ ತೆರಿಗೆ ಕೊಡುವುದು ಧರ್ಮಸಮ್ಮತವೋ, ಅಲ್ಲವೋ? ನಾವದನ್ನು ಕೊಡಬೇಕೋ, ಬೇಡವೋ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಫರಿಸಾಯರು ಮತ್ತು ಹೆರೋದ್ಯರು ಯೇಸುವಿನ ಬಳಿಗೆ ಬಂದು, ಆತನಿಗೆ, “ಉಪದೇಶಕನೇ, ನೀನು ಯಥಾರ್ಥನೆಂಬುದು ನಮಗೆ ತಿಳಿದಿದೆ. ನಿನ್ನ ಬಗ್ಗೆ ಜನರು ಏನು ಯೋಚಿಸುತ್ತಾರೆಂಬುದರ ಬಗ್ಗೆ ನಿನಗೆ ಹೆದರಿಕೆಯಿಲ್ಲ. ಜನರೆಲ್ಲರೂ ನಿನಗೆ ಒಂದೇ. ಮತ್ತು ನೀನು ದೇವರ ಮಾರ್ಗವನ್ನು ಕುರಿತು ಸತ್ಯವನ್ನೇ ಉಪದೇಶಿಸುತ್ತಿರುವೆ ಎಂದು ನಮಗೆ ಗೊತ್ತಿದೆ. ಆದ್ದರಿಂದ ನಮಗೆ ಹೇಳು: ಸೀಸರನಿಗೆ ತೆರಿಗೆ ಕೊಡುವುದು ಸರಿಯೋ? ಅಥವಾ ತಪ್ಪೋ? ನಾವು ತೆರಿಗೆಗಳನ್ನು ಕೊಡಬೇಕೇ ಅಥವಾ ಕೊಡಬಾರದೇ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವರು ಬಂದು ಯೇಸುವಿಗೆ, “ಬೋಧಕರೇ, ನೀವು ಸತ್ಯವಂತರು ಮತ್ತು ಯಾವ ಮನುಷ್ಯನನ್ನೂ ಲಕ್ಷಿಸದವರೂ ನೀವು ಮನುಷ್ಯರ ಮುಖದಾಕ್ಷಿಣ್ಯ ಮಾಡದೆ ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುತ್ತೀರಿ ಎಂದೂ ನಾವು ಬಲ್ಲೆವು. ಕೈಸರನಿಗೆ ತೆರಿಗೆ ಕೊಡುವುದು ಧರ್ಮಸಮ್ಮತವೋ ಇಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಅನಿ “ಗುರುಜಿ, ತಿಯಾ ಲೊಕಾ ಕಾಯ್ ಯೌವಜ್ತ್ಯಾತ್ ಮನುನ್ ಪರ್ವಾ ಕರಿನಸ್ತಾನಾ ಖರೆ ಅಸಲ್ಲೆ ಸಾಂಗ್ತೆ, ಅನಿ ಕೊನಾಚೆ ತೊಂಡ್ ಬಗಿನಸ್ತಾನಾ ಬೊಲ್ತೆ, ತಿಯಾ ಮಾನ್ಸಾ ಸಾಟ್ನಿ ದೆವಾಚಿ ಯವ್ಜನ್ ಕಾಯ್ ಮನುನ್ ಅಮ್ಕಾ ಸಾಂಗ್, ಅಮಿ ರೊಮಾಚ್ಯಾ ಚಕ್ರವರ್ತಿಕ್ ತೆರ್‍ಗಿ ದಿತಲೆ ಅಮ್ಚ್ಯಾ ಧರ್ಮಾಚ್ಯಾ ಖಾಯ್ದ್ಯಾ ಪರ್ಕಾರ್ ಸಮಾ ಹಾಯ್ ಕಾಯ್, ನಾ?” ಮನುನ್ ತೆಕಾ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 12:14
36 ತಿಳಿವುಗಳ ಹೋಲಿಕೆ  

ಸುವಾರ್ತೆಯನ್ನು ನಮ್ಮ ವಶಕ್ಕೆ ಒಪ್ಪಿಸಿದನಲ್ಲಾ ಎಂದು ಯೋಚಿಸುವವರಾಗಿ ಮನುಷ್ಯರನ್ನು ಮೆಚ್ಚಿಸಬೇಕೆನ್ನದೆ ಹೃದಯವನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತಾಡುತ್ತೇವೆ.


ಆದರೆ ಮಾನಿಷ್ಠರೆನಿಸಿಕೊಂಡವರಿಂದ ನನಗೇನೂ ದೊರೆಯಲಿಲ್ಲ. ಅವರು ಹಿಂದಿನ ಕಾಲದಲ್ಲಿ ಎಂಥವರಾಗಿದ್ದರೋ ನನಗೆ ಲಕ್ಷ್ಯವಿಲ್ಲ. ದೇವರು ಮುಖದಾಕ್ಷಿಣ್ಯ ಮಾಡುವವನಲ್ಲ. ಮಾನಿಷ್ಠರೆನಿಸಿಕೊಂಡವರು ನನ್ನ ಮಾತಿಗೆ ಒಪ್ಪಿದರೇ ಹೊರತು ನನಗೇನೂ ಕಲಿಸಲಿಲ್ಲ.


ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯರನ್ನು ಮೆಚ್ಚಿಸುವದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ದಾಸನಲ್ಲ.


ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಶರೀರಸಂಬಂಧವಾಗಿ ಅರಿತುಕೊಳ್ಳುವದಿಲ್ಲ; ಕ್ರಿಸ್ತನನ್ನು ಕೂಡ ನಾವು ಶರೀರಸಂಬಂಧವಾಗಿ ತಿಳಿದಿದ್ದರೂ ಇನ್ನು ಮುಂದೆ ಆತನನ್ನು ಹಾಗೆ ತಿಳುಕೊಳ್ಳುವದಿಲ್ಲ.


ಕರ್ತನ ಭಯವು ನಮಗಿರುವದರಿಂದ ನಾವು ಮನುಷ್ಯರನ್ನು ಒಡಂಬಡಿಸುತ್ತೇವೆ. ನಾವು ಯಥಾರ್ಥರೆಂಬದು ದೇವರಿಗೆ ಗೊತ್ತುಂಟು; ನಿಮ್ಮ ಮನಸ್ಸಿಗೆ ಕೂಡ ಗೊತ್ತಾಗಿದೆ ಎಂದು ನಂಬಿಕೊಂಡಿದ್ದೇನೆ.


ಆದರೆ ನಾವು ದೇವರ ವಾಕ್ಯವನ್ನು ಕಲಬೆರಿಕೆಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಉಪದೇಶ ಹೊಂದಿದವರಿಗೆ ತಕ್ಕ ಹಾಗೆ ಕ್ರಿಸ್ತನ ಅನ್ಯೋನ್ಯತೆಯಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತಾಡುತ್ತೇವೆ.


ನಾನು ನಿಮ್ಮನ್ನು ದುಃಖಪಡಿಸಿದರೆ ನನ್ನನ್ನು ಆನಂದಪಡಿಸುವದಕ್ಕೆ ಯಾರಿದ್ದಾರೆ? ನನ್ನಿಂದ ದುಃಖ ಹೊಂದಿದವರೇ ಹೊರತು ಬೇರೆ ಯಾರೂ ಇಲ್ಲವಲ್ಲಾ.


ಕಲ್ಪಿಸಿ ಹೇಳುವವನು ತನಗೆ ಮಾನ ಬರಬೇಕೆಂದು ಅಪೇಕ್ಷಿಸುತ್ತಾನೆ; ತನ್ನನ್ನು ಕಳುಹಿಸಿದವನಿಗೆ ಮಾನಬರಬೇಕೆಂದು ಅಪೇಕ್ಷಿಸುವವನು ಸತ್ಯವಂತನು, ಅಧರ್ಮವು ಅವನಲ್ಲಿ ಇಲ್ಲ.


ಈ ಕಾರಣದಿಂದಲೇ ನೀವು ಕಂದಾಯವನ್ನು ಕೂಡ ಕೊಡುತ್ತೀರಿ. ಯಾಕಂದರೆ ಕಂದಾಯ ಎತ್ತುವವರು ದೇವರ ಉದ್ಯೋಗಿಗಳಾಗಿದ್ದು ಆ ಕೆಲಸದಲ್ಲಿಯೇ ನಿರತರಾಗಿರುತ್ತಾರೆ.


ಇವನು ತಾನೇ ಕ್ರಿಸ್ತನೆಂಬ ಒಬ್ಬ ಅರಸನಾಗಿದ್ದೇನೆಂದು ಹೇಳುತ್ತಾ ಕೈಸರನಿಗೆ ತೆರಿಗೆಕೊಡಬಾರದೆಂದು ಬೋಧಿಸುತ್ತಾ ನಮ್ಮ ದೇಶದವರ ಮನಸ್ಸು ಕೆಡಿಸುವದನ್ನು ನಾವು ಕಂಡೆವು ಎಂಬದಾಗಿ ಆತನ ಮೇಲೆ ದೂರು ಹೇಳುವದಕ್ಕೆ ತೊಡಗಿದರು.


ಕೈಸರನಿಗೆ ಕಂದಾಯ ಕೊಡುವದು ಸರಿಯೋ ಸರಿಯಲ್ಲವೋ ಎಂದು ಆತನನ್ನು ಕೇಳಿದರು.


ಅಲ್ಲಿಗೆ ಬಂದ ಕೂಡಲೆ ಅವನು ಯೇಸುವಿನ ಬಳಿಗೆ ಹೋಗಿ - ಗುರುವೇ ಎಂದು ಹೇಳಿ


ಹೀಗಿರಲಾಗಿ ಕೈಸರನಿಗೆ ತೆರಿಗೆ ಕೊಡುವದು ಸರಿಯೋ ಸರಿಯಲ್ಲವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು ಅಂದರು.


ನಾನಾದರೋ ಯೆಹೋವನ ಆತ್ಮಾವೇಶದಿಂದ ಬಲಪರಾಕ್ರಮನ್ಯಾಯಭರಿತನಾಗಿ ಯಾಕೋಬಿಗೆ ಅದರ ದ್ರೋಹವನ್ನು ಇಸ್ರಾಯೇಲಿಗೆ ಅದರ ಪಾಪವನ್ನು ಸಾರಲು ಶಕ್ತನಾಗಿದ್ದೇನೆ.


ನಿಮ್ಮನ್ನು ನೀವೇ ಮೋಸಪಡಿಸಿಕೊಂಡಿದ್ದೀರಿ; ನೀವು ನನ್ನ ಬಳಿಗೆ ಬಂದು - ನಮ್ಮ ದೇವರಾದ ಯೆಹೋವನನ್ನು ನಮಗಾಗಿ ಪ್ರಾರ್ಥಿಸು; ನಮ್ಮ ದೇವರಾದ ಯೆಹೋವನು ಯಾವ ಅಪ್ಪಣೆಕೊಡುತ್ತಾನೋ ಅದನ್ನು ನಮಗೆ ತಿಳಿಸು, ಅದರಂತೆಯೇ ನಡೆಯುವೆವು ಎಂಬದಾಗಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸುವದಕ್ಕೆ ನನ್ನನ್ನು ಕಳುಹಿಸಿದಿರಲ್ಲಾ.


ಯೆಹೋವನೇ, ಸುಳ್ಳುಬಾಯಿಯೂ ವಂಚಿಸುವ ನಾಲಿಗೆಯೂ ಉಳ್ಳವರಿಂದ ನನ್ನನ್ನು ಬಿಡಿಸು.


ಅವನ ಬಾಯಿ ಬೆಣ್ಣೆಯಂತೆ ನುಣುಪು; ಹೃದಯವೋ ಕಲಹಮಯವೇ. ಅವನ ನುಡಿಗಳು ಎಣ್ಣೆಗಿಂತ ನಯವಾಗಿದ್ದರೂ ಬಿಚ್ಚುಕತ್ತಿಗಳೇ ಸರಿ.


ನಮ್ಮ ಕಾಯಗಳ ಮೇಲೆಯೂ ಪಶುಗಳ ಮೇಲೆಯೂ ಅವರು ಅಧಿಕಾರ ನಡಿಸುತ್ತಾರೆ. ನಾವು ಮಹಾಸಂಕಟದಲ್ಲಿರುತ್ತೇವೆ ಅಯ್ಯೋ ಎಂದು ಪ್ರಾರ್ಥಿಸಿದರು.


ಹೀಗಿರುವಲ್ಲಿ ನಿಮಗೆ ಯೆಹೋವನ ಭಯವು ಇರಲಿ. ನಿಮ್ಮ ದೇವರಾದ ಯೆಹೋವನಲ್ಲಿ ಅನ್ಯಾಯವೂ ಮುಖದಾಕ್ಷಿಣ್ಯವೂ ಲಂಚತಿನ್ನುವದೂ ಇಲ್ಲವಾದದರಿಂದ ಜಾಗರೂಕತೆಯಿಂದ ಕೆಲಸಮಾಡಿರಿ ಎಂದು ಎಚ್ಚರಿಸಿದನು.


ಅದಕ್ಕೆ ಮೀಕಾಯೆಹುವು - ಯೆಹೋವನಾಣೆ, ನನ್ನ ದೇವರು ಹೇಳುವದನ್ನೇ ನುಡಿಯುತ್ತೇನೆ ಎಂದು ಉತ್ತರಕೊಟ್ಟನು.


ನೀವು ನ್ಯಾಯವನ್ನು ಬಿಟ್ಟು ತೀರ್ಮಾನಮಾಡಬಾರದು; ಪಕ್ಷಪಾತಮಾಡಬಾರದು; ಲಂಚತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರಂತೆ ಮಾಡುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ.


ಆದದರಿಂದ ನಾವು ದೇವರ ಕರುಣೆಯಿಂದ ಈ ಸೇವೆಯನ್ನು ಹೊಂದಿದವರಾಗಿರಲಾಗಿ ಧೈರ್ಯಗೆಟ್ಟು ಹಿಂದೆಗೆಯುವದಿಲ್ಲ.


ಆತನ ಬಳಿಗೆ ತಮ್ಮ ಶಿಷ್ಯರನ್ನು ಹೆರೋದಿಯರ ಕೂಡ ಕಳುಹಿಸಿದರು. ಇವರು ಬಂದು - ಗುರುವೇ, ನೀನು ಸತ್ಯವಂತನು, ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನು, ಯಾರಿಗೂ ಹೆದರದವನು; ನೀನು ಜನರ ಮುಖದಿಚ್ಫೆಗೆ ಮಾತಾಡುವವನಲ್ಲ ಎಂದು ಬಲ್ಲೆವು.


ಆಮೇಲೆ ಅವರು ಆತನನ್ನು ಮಾತಿನಲ್ಲಿ ಹಿಡಿಯುವದಕ್ಕೆ ಫರಿಸಾಯರಲ್ಲಿಯೂ ಹೆರೋದ್ಯರಲ್ಲಿಯೂ ಕೆಲವರನ್ನು ಆತನ ಬಳಿಗೆ ಕಳುಹಿಸಿದರು.


ಕೊಡಬೇಕೋ ಬೇಡವೋ ಎಂದು ಆತನನ್ನು ಕೇಳಿದರು. ಆತನು ಅವರ ಕಪಟವನ್ನು ತಿಳಿದು - ನನ್ನನ್ನು ಯಾಕೆ ಪರೀಕ್ಷೆ ಮಾಡುತ್ತೀರಿ? ನನಗೆ ಒಂದು ಹಣವನ್ನು ತಂದು ತೋರಿಸಿರಿ ಅನ್ನಲು ಅವರು ತಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು