Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 12:2 - ಕನ್ನಡ ಸತ್ಯವೇದವು J.V. (BSI)

2 ಫಲಕಾಲ ಬಂದಾಗ ದ್ರಾಕ್ಷೆಯ ತೋಟದ ಹಣ್ಣಿನ ಪಾಲನ್ನು ಆ ಒಕ್ಕಲಿಗರಿಂದ ತೆಗೆದುಕೊಂಡು ಬರುವದಕ್ಕಾಗಿ ಒಬ್ಬ ಆಳನ್ನು ಅವರ ಬಳಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಫಲಕಾಲವು ಬಂದಾಗ ತನಗೆ ಬರತಕ್ಕ ಪಾಲನ್ನು ತೆಗೆದುಕೊಳ್ಳುವುದಕ್ಕಾಗಿ ಒಬ್ಬ ಸೇವಕನನ್ನು ಗುತ್ತಿಗೆದಾರರ ಬಳಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಫಲಕಾಲವು ಬಂದಾಗ ತನಗೆ ಬರತಕ್ಕ ಪಾಲನ್ನು ತರುವುದಕ್ಕಾಗಿ ಒಬ್ಬ ಸೇವಕನನ್ನು ಗೇಣಿದಾರರ ಬಳಿಗೆ ಕಳುಹಿಸಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ತರುವಾಯ ಫಲಕಾಲವು ಬಂದಾಗ ತನ್ನ ಪಾಲಿನ ದ್ರಾಕ್ಷಿಯನ್ನು ತರುವುದಕ್ಕಾಗಿ ಒಬ್ಬ ಸೇವಕನನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಫಲದ ಕಾಲ ಬಂದಾಗ ಅವನು ದ್ರಾಕ್ಷಿತೋಟದ ಫಲವನ್ನು ರೈತರಿಂದ ಪಡೆಯುವುದಕ್ಕಾಗಿ ಅವರ ಬಳಿಗೆ ಒಬ್ಬ ಸೇವಕನನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ದರಾಕ್ಷಿ ಗೊಳಾ ಕರ್‍ತಲಿ ಸುಗ್ಗಿಚಿ ದಿಸಾ ಯೆಲ್ಲ್ಯಾ ತನ್ನಾ; ಅಪ್ನಾಚೊ ವಾಟೊ ಮಾಗುನ್ ಹಾನುಕ್ ಮನುನ್ ತ್ಯಾ ಮಳ್ಯಾಚ್ಯಾ ಸಾವ್ಕಾರಾನ್ ಅಪ್ನಾಚ್ಯಾ ಎಕ್ ಸೆವಕಾಕ್ ಧಾಡುನ್ ದಿಲ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 12:2
18 ತಿಳಿವುಗಳ ಹೋಲಿಕೆ  

ಪುರಾತನಕಾಲದಲ್ಲಿ ನಮ್ಮ ಪಿತೃಗಳ ಸಂಗಡ ಪ್ರವಾದಿಗಳ ಬಾಯಿಂದ ಭಾಗಭಾಗವಾಗಿಯೂ ವಿಧವಿಧವಾಗಿಯೂ ಮಾತಾಡಿದ ದೇವರು


ಫಲಕಾಲ ಬಂದಾಗ ದ್ರಾಕ್ಷೆಯತೋಟದ ಹುಟ್ಟುವಳಿಯ ಪಾಲನ್ನು ತೆಗೆದುಕೊಳ್ಳುವದಕ್ಕಾಗಿ ಒಬ್ಬ ಆಳನ್ನು ಒಕ್ಕಲಿಗರ ಬಳಿಗೆ ಕಳುಹಿಸಿದನು. ಆದರೆ ಆ ಒಕ್ಕಲಿಗರು ಅವನನ್ನು ಹೊಡೆದು ಬರಿಗೈಲಿ ಕಳುಹಿಸಿಬಿಟ್ಟರು.


ತಿಳಿಯದೆ ಪೆಟ್ಟುಗಳಿಗೆ ಯೋಗ್ಯವಾದದ್ದನ್ನು ನಡಿಸಿದವನು ಸ್ವಲ್ಪ ಪೆಟ್ಟು ತಿನ್ನುವನು. ಯಾವನಿಗೆ ಬಹಳವಾಗಿ ಕೊಟ್ಟದೆಯೋ ಅವನ ಕಡೆಯಿಂದ ಬಹಳವಾಗಿ ನಿರೀಕ್ಷಿಸಲ್ಪಡುವದು; ಇದಲ್ಲದೆ ಯಾವನ ವಶಕ್ಕೆ ಬಹಳವಾಗಿ ಒಪ್ಪಿಸಿದೆಯೋ ಅವನ ಕಡೆಯಿಂದ ಇನ್ನೂ ಹೆಚ್ಚಾಗಿ ಕೇಳುವರು.


ಫಲಕಾಲ ಹತ್ತರವಾದಾಗ ತನಗೆ ಬರಬೇಕಾದ ಹಣ್ಣುಗಳನ್ನು ತೆಗೆದುಕೊಂಡು ಬರುವದಕ್ಕಾಗಿ ಆ ಒಕ್ಕಲಿಗರ ಬಳಿಗೆ ತನ್ನ ಆಳುಗಳನ್ನು ಕಳುಹಿಸಲು


ಯೆರೂಸಲೇಮು ಸುತ್ತಣ ಪಟ್ಟಣಗಳ ಸಮೇತ ಜನಭರಿತವಾಗಿಯೂ ನೆಮ್ಮದಿಯಾಗಿಯೂ ಇದ್ದು ದಕ್ಷಿಣಪ್ರಾಂತದಲ್ಲಿಯೂ ಇಳಕಲಿನ ಪ್ರದೇಶದಲ್ಲಿಯೂ ಪ್ರಜೆಯು ತುಂಬಿದ್ದಾಗ ಆ ಪೂರ್ವಕಾಲದ ಪ್ರವಾದಿಗಳ ಮೂಲಕ ಯೆಹೋವನು ಪ್ರಕಟಿಸಿದ ಮಾತುಗಳನ್ನು ನೀವು ಕೇಳಬಾರದೋ?


ಅಯ್ಯೋ, ನನ್ನ ಗತಿಯನ್ನು ಏನೆಂದು ಹೇಳಲಿ! ಮಾಗಿದ ಹಣ್ಣನ್ನು ಕೊಯ್ದು ದ್ರಾಕ್ಷೆಯ ಹಕ್ಕಲನ್ನು ಆಯ್ದ [ತೋಟದ] ಸ್ಥಿತಿಗೆ ಬಂದಿದ್ದೇನೆ; ತಿನ್ನುವದಕ್ಕೆ ಗೊಂಚಲೇ ಇಲ್ಲ, ನನಗೆ ಪ್ರಿಯವಾದ ಮೊದಲು ಮಾಗಿದ ಅಂಜೂರದ ಹಣ್ಣು ಸಿಕ್ಕದು.


ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ಅವರ ಬಳಿಗೆ ಸಾವಕಾಶಮಾಡದೆ ಕಳುಹಿಸುತ್ತಾ - ಅಹಹ, ನಾನು ಹೇಸುವ ಈ ಅಸಹ್ಯಕಾರ್ಯವನ್ನು ಮಾಡಬೇಡಿರಿ ಎಂದು ಪ್ರಕಟಿಸುತ್ತಾ ಬಂದರೂ ಅವರು ಕಿವಿಗೊಟ್ಟು ಕೇಳಲಿಲ್ಲ,


ಇದಲ್ಲದೆ ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿತ್ಯವೂ ಕಳುಹಿಸುತ್ತಾ - ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ, ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸದಿರಿ; ಹೀಗೆ ಮಾಡಿದರೆ ನಾನು ನಿಮಗೂ ನಿಮ್ಮ ಪಿತೃಗಳಿಗೂ ದಯಪಾಲಿಸಿದ ದೇಶದಲ್ಲಿ ನೀವು ಸುಖವಾಸಿಗಳಾಗಿರುವಿರಿ ಎಂದು ಹೇಳಿಸಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.


ಅವನು ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗಿರುವನು. ಅಂಥ ಮರವು ತಕ್ಕ ಕಾಲದಲ್ಲಿ ಫಲಕೊಡುತ್ತದಲ್ಲಾ; ಅದರ ಎಲೆ ಬಾಡುವದೇ ಇಲ್ಲ. ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವದು.


ನೀನು ನಿನ್ನ ಸೇವಕರಾದ ಪ್ರವಾದಿಗಳ ಮುಖಾಂತರ ನಮಗೆ - ನೀವು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗುವ ದೇಶವು ಅನ್ಯದೇಶಗಳವರ ಅಶುದ್ಧತ್ವದಿಂದಲೂ ಅವರ ವಿಗ್ರಹಗಳಿಂದಲೂ ಮಲಿನವಾಯಿತು. ಅದು ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಆ ವಿಗ್ರಹಗಳ ಅಸಹ್ಯತೆಯಿಂದ ತುಂಬಿರುತ್ತದೆ.


ಅವರ ಪಿತೃಗಳ ದೇವರಾದ ಯೆಹೋವನು ತನ್ನ ಪ್ರಜೆಯನ್ನೂ ನಿವಾಸಸ್ಥಾನವನ್ನೂ ಕನಿಕರಿಸಿ ಸಾವಕಾಶಮಾಡದೆ ತನ್ನ ದೂತರ ಮುಖಾಂತರವಾಗಿ ಅವರನ್ನು ಎಚ್ಚರಿಸುತ್ತಾ ಇದ್ದರೂ


ಯೆಹೋವನು ದರ್ಶಿಗಳೆನಿಸಿಕೊಂಡ ತನ್ನ ಪ್ರವಾದಿಗಳ ಮುಖಾಂತರವಾಗಿ ಇಸ್ರಾಯೇಲ್ಯ ಯೆಹೂದ್ಯರಿಗೆ - ನೀವು ನಿಮ್ಮ ದುರಾಚಾರವನ್ನು ಬಿಟ್ಟು ನಾನು ನಿಮ್ಮ ಪಿತೃಗಳಿಗೂ ನನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ ನಿಮಗೂ ಕೊಟ್ಟಂಥ ನನ್ನ ಎಲ್ಲಾ ಆಜ್ಞಾನಿಯಮವಿಧಿಗಳನ್ನು ಕೈಕೊಂಡು ನಡೆಯಿರಿ ಎಂದು ಖಂಡಿತವಾಗಿ ಹೇಳಿದಾಗ


ಆಗ ಯೇಸು ಅವರ ಕೂಡ ಸಾಮ್ಯರೂಪವಾಗಿ ಮಾತಾಡುವದಕ್ಕೆ ತೊಡಗಿ - ಒಬ್ಬ ಮನುಷ್ಯನು ಒಂದು ದ್ರಾಕ್ಷೆಯ ತೋಟವನ್ನು ಮಾಡಿ ಸುತ್ತಲು ಬೇಲಿಹಾಕಿಸಿ ದ್ರಾಕ್ಷೆಯ ಆಲೆಗಾಗಿ ಒಂದು ಗುಂಡಿಯನ್ನು ತೆಗಿಸಿ ಹೂಡೆಯನ್ನು ಕಟ್ಟಿಸಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ಬೇರೊಂದು ದೇಶಕ್ಕೆ ಹೋದನು.


ಅವರು ಅವನನ್ನು ಹಿಡುಕೊಂಡು ಹೊಡೆದು ಬರಿಗೈಲಿ ಕಳುಹಿಸಿಬಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು