Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 12:24 - ಕನ್ನಡ ಸತ್ಯವೇದವು J.V. (BSI)

24 ಯೇಸು ಅವರಿಗೆ - ನೀವು ಶಾಸ್ತ್ರವನ್ನಾದರೂ ದೇವರ ಶಕ್ತಿಯನ್ನಾದರೂ ತಿಳಿಯದಿರುವದರಿಂದಲೇ ತಪ್ಪುವವರಾಗಿದ್ದೀರಲ್ಲವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅದಕ್ಕೆ ಯೇಸು, “ನೀವು ಶಾಸ್ತ್ರವಚನಗಳನ್ನಾದರೂ, ದೇವರ ಶಕ್ತಿಯನ್ನಾದರೂ ತಿಳಿಯದೆ ಇರುವುದರಿಂದಲೇ ತಪ್ಪುವವರಾಗಿದ್ದೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಅದಕ್ಕೆ ಯೇಸು, “ನಿಮ್ಮದು ಎಂಥಾ ತಪ್ಪು ಅಭಿಪ್ರಾಯ! ಪವಿತ್ರಗ್ರಂಥವನ್ನು ಆಗಲಿ, ದೇವರ ಶಕ್ತಿಯನ್ನಾಗಲೀ ನೀವು ಅರ್ಥಮಾಡಿಕೊಂಡಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಯೇಸು, “ನೀವು ಇಂಥಾ ತಪ್ಪನ್ನು ಮಾಡುವುದೇಕೆ? ಪವಿತ್ರಗ್ರಂಥವಾಗಲಿ, ದೇವರ ಶಕ್ತಿಯಾಗಲಿ ನಿಮಗೆ ಗೊತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಅದಕ್ಕೆ ಯೇಸು, “ನೀವು ಪವಿತ್ರ ವೇದವನ್ನಾಗಲಿ ದೇವರ ಶಕ್ತಿಯನ್ನಾಗಲಿ ಅರ್ಥ ಮಾಡಿಕೊಳ್ಳದೆ ತಪ್ಪುತ್ತಿದ್ದಿರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ತನ್ನಾ ಜೆಜುನ್ ತೆಂಕಾ “ತುಮಿ ಕವ್ಡೆ ಚುಕುನ್ ಪಡ್ಲ್ಯಾಸಿ? ತುಮ್ಕಾ ಪವಿತ್ರ್ ಪುಸ್ತಕಾಚಿ ಉಲ್ಲಿಬಿ ಸಮ್ಜನ್‍ ನಾ, ಅನಿ ದೆವಾಚ್ಯಾ ತಾಕ್ತಿಚ್ಯಾ ವಿಶಯಾತ್ ತುಮ್ಕಾ ಗೊತ್ತುಚ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 12:24
25 ತಿಳಿವುಗಳ ಹೋಲಿಕೆ  

ಆತನು ಸತ್ತ ಮೇಲೆ ಜೀವದಿಂದೆದ್ದು ಬರಬೇಕೆಂಬದಾಗಿ ಶಾಸ್ತ್ರದಲ್ಲಿ ಬರೆದಿರುವ ಮಾತು ಅವರಿಗೆ ಇನ್ನೂ ತಿಳಿದಿರಲಿಲ್ಲ.


ಅದಕ್ಕೆ ಯೇಸು ಉತ್ತರವಾಗಿ ಅವರಿಗೆ - ನೀವು ಶಾಸ್ತ್ರವನ್ನಾದರೂ ದೇವರ ಶಕ್ತಿಯನ್ನಾದರೂ ತಿಳಿಯದೆ ತಪ್ಪುವವರಾಗಿದ್ದೀರಿ;


ನಂಬುವವರಾದ ನಮ್ಮಲ್ಲಿ ಆತನು ಸಾಧಿಸುವ ಪರಾಕ್ರಮವು ಎಷ್ಟು ಅತಿಶಯವಾದದ್ದೆಂಬದನ್ನೂ ನೀವು ತಿಳುಕೊಳ್ಳುವಂತೆ ಅನುಗ್ರಹಿಸಲಿ.


ಆತನು ಎಲ್ಲವನ್ನೂ ತನಗೆ ಅಧೀನಮಾಡಿಕೊಳ್ಳಲಾಗುವ ಪರಾಕ್ರಮವನ್ನು ಸಾಧಿಸಿ ದೀನಾವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸಿ ಪ್ರಭಾವವುಳ್ಳ ತನ್ನ ದೇಹದ ಸಾರೂಪ್ಯವಾಗುವಂತೆ ಮಾಡುವನು.


ಪೂರ್ವದಲ್ಲಿ ಬರೆದದ್ದೆಲ್ಲಾ ನಮ್ಮನ್ನು ಉಪದೇಶಿಸುವದಕ್ಕಾಗಿ ಬರೆಯಲ್ಪಟ್ಟಿತು. ನಾವು ಓದಿ ಸ್ಥಿರಚಿತ್ತವನ್ನೂ ಆದರಣೆಯನ್ನೂ ಹೊಂದಿ ರಕ್ಷಣೆಯ ನಿರೀಕ್ಷೆಯುಳ್ಳವರಾಗಿರುವಂತೆ ಆ ಗ್ರಂಥಗಳು ಬರೆಯಲ್ಪಟ್ಟವು.


ಆ ಸಭೆಯವರು ಥೆಸಲೋನಿಕದವರಿಗಿಂತ ಸದ್ಗುಣವುಳ್ಳವರಾಗಿದ್ದು ದೇವರ ವಾಕ್ಯವನ್ನು ಶುದ್ಧಮನಸ್ಸಿನಿಂದ ಅಂಗೀಕರಿಸಿ ಇವರು ಹೇಳುವ ಮಾತು ಹೌದೋ ಏನೋ ಎಂಬ ವಿಷಯದಲ್ಲಿ ಪ್ರತಿದಿನವೂ ಶಾಸ್ತ್ರಗ್ರಂಥಗಳನ್ನು ಶೋಧಿಸುತ್ತಿದ್ದರು.


ಯೇಸು ಅವರನ್ನು ದೃಷ್ಟಿಸಿ ನೋಡಿ - ಇದು ಮನುಷ್ಯರಿಗೆ ಅಸಾಧ್ಯ; ದೇವರಿಗೆ ಅಸಾಧ್ಯವಲ್ಲ; ದೇವರಿಗೆ ಎಲ್ಲವು ಸಾಧ್ಯವೇ ಅಂದನು.


ಒಂದೆರಡು ದಿನದ ಮೇಲೆ ಆತನು ನಮ್ಮನ್ನು ಬದುಕಿಸುವನು; ಮೂರನೆಯ ದಿನದಲ್ಲಿ ಆತನು ನಮ್ಮನ್ನೆಬ್ಬಿಸಲು ಆತನ ಸಾನ್ನಿಧ್ಯದಲ್ಲಿ ಬಾಳುವೆವು.


ಎಲೈ, ಕರ್ತನಾದ ಯೆಹೋವನೇ! ಆಹಾ, ನೀನು ಭುಜವನ್ನೆತ್ತಿ ನಿನ್ನ ಮಹಾ ಶಕ್ತಿಯಿಂದ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದೀ; ಯಾವ ಕಾರ್ಯವೂ ನಿನಗೆ ಅಸಾಧ್ಯವಲ್ಲ.


ಮರಣವನ್ನು ಶಾಶ್ವತವಾಗಿ ನಿರ್ನಾಮ ಮಾಡುವನು; ಕರ್ತನಾದ ಯೆಹೋವನು ಎಲ್ಲರ ಮುಖದಲ್ಲಿನ ಕಣ್ಣೀರನ್ನು ಒರಸಿಬಿಡುವನು; ತನ್ನ ಪ್ರಜೆಯ ಅವಮಾನವನ್ನು ಭೂಮಂಡಲದಿಂದಲೇ ತೊಲಗಿಸುವನು; ಯೆಹೋವನೇ ಇದನ್ನು ನುಡಿದಿದ್ದಾನೆ.


ಶಾಸ್ತ್ರಗಳಿಂದ ನಿತ್ಯಜೀವವು ದೊರೆಯುತ್ತದೆಂದು ನೀವು ನೆನಸಿ ಅವುಗಳನ್ನು ವಿಚಾರಿಸುತ್ತೀರಲ್ಲಾ; ಅವುಗಳೂ ನನ್ನ ವಿಷಯದಲ್ಲಿ ಸಾಕ್ಷಿಕೊಡುವವುಗಳಾಗಿವೆ.


ದೇವರಿಂದ ಬರುವ ಯಾವ ಮಾತಾದರೂ ನಿಷ್ಫಲವಾಗುವದಿಲ್ಲ ಅಂದನು.


ನಾನು ಅದನ್ನು ಪಾತಾಳದ ಅಧಿಕಾರದಿಂದ ಬಿಡಿಸಲೋ? ಮರಣದಿಂದ ಉದ್ಧರಿಸಲೋ? ಮರಣವೇ, ನಿನ್ನ ಉಪದ್ರವಗಳೆಲ್ಲಿ? ಪಾತಾಳವೇ, ನೀನು ಮಾಡುವ ನಾಶನವೆಲ್ಲಿ? ಕನಿಕರವು ನನಗೆ ಕಾಣಿಸದು.


ನನಗೆ ಯಜ್ಞವು ಬೇಡ, ಕರುಣೆಯೇ ಬೇಕು; ಹೋಮಗಳಿಗಿಂತ ದೇವಜ್ಞಾನವೇ ಇಷ್ಟ.


ಮೃತರಾದ ನಿನ್ನ ಜನರು ಬದುಕುವರು, ನನ್ನವರ ಹೆಣಗಳು ಜೀವದಿಂದೇಳುವವು, ಮಣ್ಣಿನಲ್ಲಿ ಪವಳಿಸಿರುವವರೇ, ಎಚ್ಚತ್ತು ಹರ್ಷಧ್ವನಿಗೈಯಿರಿ! [ಯೆಹೋವನೇ,] ನೀನು ಸುರಿಯುವ ಇಬ್ಬನಿಯು ಜ್ಯೋತಿರ್ಮಯವಾದದ್ದು, ಭೂವಿುಯು ಸತ್ತವರನ್ನು ಹೊರಪಡಿಸುವದು.


ಧೂಳಿನ ನೆಲದೊಳಗೆ ದೀರ್ಘನಿದ್ರೆಮಾಡುವವರಲ್ಲಿ ಅನೇಕರು ಎಚ್ಚತ್ತು ಕೆಲವರು ನಿತ್ಯಜೀವವನ್ನು, ಕೆಲವರು ನಿಂದನ ನಿತ್ಯತಿರಸ್ಕಾರಗಳನ್ನು ಅನುಭವಿಸುವರು.


ದೇವರ ಉಪದೇಶವನ್ನೂ ದೇವರ ಬೋಧನೆಯನ್ನೂ ವಿಚಾರಿಸುವ ಎಂದು ಅವರು ಹೇಳದಿದ್ದರೆ ಅವರಿಗೆ ಎಂದಿಗೂ ಬೆಳಗಾಗುವದಿಲ್ಲ.


ಯೆಹೋವನಿಗೆ ಅಸಾಧ್ಯವಾದದ್ದುಂಟೋ? ನಾನು ಹೇಳಿದಂತೆಯೇ ಬರುವ ವರುಷದ ಇದೇ ಕಾಲದಲ್ಲಿ ನಾನು ನಿನ್ನ ಬಳಿಗೆ ಬಂದಾಗ ಸಾರಳಿಗೆ ಮಗನಿರುವನು ಎಂದು ಹೇಳಿದನು.


ನಾನು ನನ್ನ ಧರ್ಮವನ್ನು ಲಕ್ಷಾಂತರ ವಿಧಿಗಳ ರೂಪವಾಗಿ ಅದಕ್ಕೆ ಬರೆಯಿಸಿಕೊಟ್ಟರೂ ಅವುಗಳು ತನಗೆ ಸಂಬಂಧಪಟ್ಟವುಗಳಲ್ಲವೆಂದು ಅದು ಭಾವಿಸುತ್ತದೆ.


ಪುನರುತ್ಥಾನದಲ್ಲಿ ಆಕೆ ಯಾರ ಹೆಂಡತಿಯಾಗಿರುವಳು? ಆಕೆಯನ್ನು ಏಳುಮಂದಿಯೂ ಮದುವೆ ಮಾಡಿಕೊಂಡಿದ್ದರಲ್ಲಾ ಅಂದರು.


ಸತ್ತವರು ಬದುಕಿ ಎದ್ದ ಮೇಲೆ ಮದುವೆ ಮಾಡಿಕೊಳ್ಳುವದೂ ಇಲ್ಲ, ಮಾಡಿಕೊಡುವದೂ ಇಲ್ಲ; ಪರಲೋಕದಲ್ಲಿರುವ ದೇವದೂತರಂತೆ ಇರುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು