Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 12:26 - ಕನ್ನಡ ಸತ್ಯವೇದವು J.V. (BSI)

26 ಆದರೆ ಸತ್ತವರು ಬದುಕಿ ಏಳುತ್ತಾರೆಂಬ ವಿಷಯದಲ್ಲಿ ಹೇಳಬೇಕಾದರೆ - ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಎಂದು ದೇವರು ಮೋಶೆಗೆ ನುಡಿದದ್ದನ್ನು ನೀವು ಮೋಶೆಯ ಗ್ರಂಥದಲ್ಲಿ ಪೊದೆಯ ಸಂಗತಿಯಿರುವ ಅಧ್ಯಾಯದಲ್ಲಿ ಓದಲಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆದರೆ ಸತ್ತವರು ಬದುಕಿ ಬರುತ್ತಾರೆಂಬುದನ್ನು ಕುರಿತು ಹೇಳಬೇಕಾದರೆ ‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಆಗಿದ್ದೇನೆ ಎಂದು ಪೊದೆಯಲ್ಲಿ ದೇವರು ಮೋಶೆಯ ಸಂಗಡ ಮಾತನಾಡಿದನೆಂದು ನೀವು ಮೋಶೆಯ ಗ್ರಂಥದಲ್ಲಿ ಓದಲಿಲ್ಲವೋ?’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಇದಲ್ಲದೆ ಸತ್ತವರು ಪುನರುತ್ಥಾನವಾಗುವ ವಿಷಯದಲ್ಲಿ ಹೇಳುವುದಾದರೆ: ‘ನಾನು ಅಬ್ರಹಾಮನಿಗೆ ದೇವರು, ಇಸಾಕನಿಗೆ ದೇವರು, ಯಕೋಬನಿಗೆ ದೇವರು’ ಎಂದು ದೇವರು ಮೋಶೆಗೆ ಹೇಳಿದ್ದನ್ನು ಮೋಶೆಯ ಗ್ರಂಥದಲ್ಲಿ, ‘ಉರಿಯುವ ಪೊದೆ’ಯ ಪ್ರಸ್ತಾಪವಿರುವ ಭಾಗದಲ್ಲಿ, ನೀವು ಓದಿರಬೇಕಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಸತ್ತಜನರ ಪುನರುತ್ಥಾನದ ಬಗ್ಗೆ ದೇವರು ಹೇಳಿರುವುದನ್ನು ನೀವು ಖಂಡಿತವಾಗಿ ಓದಿದ್ದೀರಿ. ದೇವರು ಮೋಶೆಗೆ, ‘ನಾನೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು’ ಎಂದು ಹೇಳಿದ್ದನ್ನು ಮೋಶೆಯ ಪುಸ್ತಕದಲ್ಲಿರುವ ಉರಿಯುವ ಪೊದೆಯ ಅಧ್ಯಾಯದಲ್ಲಿ ಕಾಣಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಸತ್ತವರು ಎದ್ದು ಬರುವುದರ ವಿಷಯವಾಗಿ, ‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಆಗಿದ್ದೇನೆ’ ಎಂದು ಪೊದೆಯಲ್ಲಿ ದೇವರು ಮೋಶೆಯ ಸಂಗಡ ಹೇಗೆ ಮಾತನಾಡಿದರೆಂದು ಮೋಶೆಯ ಗ್ರಂಥದಲ್ಲಿ ನೀವು ಓದಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಮರಲ್ಲೆ ಪರ್ತುನ್ ಝಿತ್ತೆ ಹೊತಲ್ಯಾ ವಿಶಯಾತ್ ಮೊಯ್ಜೆಚ್ಯಾ ಪುಸ್ತಕಾತ್ ತ್ಯಾ ಜಳ್ತಲ್ಯಾ ಝಿಳಿಚ್ಯಾ ವಿಶಯಾತ್ ಲಿವಲ್ಲೆ ತುಮಿ ವಾಚುಕ್ನ್ಯಾಸಿ ಕಾಯ್? ಥೈ ದೆವ್ ಮೊಯ್ಜೆಕ್ “ಮಿಯಾ ಅಬ್ರಾಹಾಮಾಚೊ ದೆವ್, ಇಸಾಕಾಚೊ ದೆವ್ ಅನಿ ಜಾಕೊಬಾಚೊ ದೆವ್” ಮನ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 12:26
16 ತಿಳಿವುಗಳ ಹೋಲಿಕೆ  

ಅವನು ಪೊದೆಯ ಸಂಗತಿಯಿರುವ ಅಧ್ಯಾಯದಲ್ಲಿ ಕರ್ತನನ್ನು ಅಬ್ರಹಾಮನ ದೇವರು ಇಸಾಕನ ದೇವರು ಯಾಕೋಬನ ದೇವರು ಎಂದು ಹೇಳಿದ್ದಾನೆ. ದೇವರು ಜೀವಿತರಿಗೆ ದೇವರಾಗಿದ್ದಾನೆ ಹೊರತು ಜೀವವಿಲ್ಲದವರಿಗೆ ಅಲ್ಲ.


ಅಲ್ಲಿ ಯಾಕೋಬನು ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ ಏಲೆಲೋಹೇ ಇಸ್ರಾಯೇಲ್ ಎಂದು ಹೆಸರಿಟ್ಟನು.


ನೀನು ಹೋಗಿ ಇಸ್ರಾಯೇಲ್ಯರ ಹಿರಿಯರನ್ನು ಕೂಡಿಸಿ ಅವರಿಗೆ - ನಿಮ್ಮ ಪಿತೃಗಳ ದೇವರು ಅಂದರೆ ಅಬ್ರಹಾಮ ಇಸಾಕ ಯಾಕೋಬರ ದೇವರು ಆಗಿರುವ ಯೆಹೋವನು ನನಗೆ ದರ್ಶನಕೊಟ್ಟು ನಿಮ್ಮ ವಿಷಯದಲ್ಲಿ - ನಾನು ನಿಮ್ಮಲ್ಲಿ ಲಕ್ಷ್ಯವಿಟ್ಟು ಐಗುಪ್ತದೇಶದಲ್ಲಿ ನಿಮಗೆ ಸಂಭವಿಸಿದ್ದನ್ನೆಲ್ಲಾ ತಿಳುಕೊಂಡಿದ್ದೇನೆ;


ಇದಲ್ಲದೆ ಅವನು ದೇವರನ್ನು ಪ್ರಾರ್ಥಿಸಿ - ಯೆಹೋವನೇ, ನನ್ನ ತಂದೆತಾತಂದಿರಾದ ಇಸಾಕ ಅಬ್ರಹಾಮರ ದೇವರೇ, ಸ್ವದೇಶಕ್ಕೆ ಬಂಧುಗಳ ಬಳಿಗೆ ತಿರಿಗಿ ಹೋಗಬೇಕೆಂದು ನನಗೆ ಆಜ್ಞಾಪಿಸಿ ನಿನಗೆ ಒಳ್ಳೇದನ್ನು ಮಾಡುವೆನೆಂದು ನನಗೆ ವಾಗ್ದಾನ ಮಾಡಿದವನು ನೀನೇ ಅಲ್ಲವೇ.


ನನ್ನ ಹಿರಿಯರ ದೇವರು, ಅಂದರೆ ಅಬ್ರಹಾಮನ ದೇವರೂ ಇಸಾಕನು ಭಯಭಕ್ತಿಯಿಂದ ಸೇವಿಸುವ ದೇವರೂ ಆಗಿರುವಾತನು, ನನ್ನ ಪಕ್ಷದಲ್ಲಿ ಇರದಿದ್ದರೆ ನಿಶ್ಚಯವಾಗಿ ನೀನು ನನ್ನನ್ನು ಬರಿಗೈಯಾಗಿ ಕಳುಹಿಸುತ್ತಿದ್ದಿ. ದೇವರು ನನ್ನ ಕಷ್ಟವನ್ನೂ ನಾನು ಪಟ್ಟ ಪ್ರಯಾಸವನ್ನೂ ನೋಡಿದ್ದರಿಂದಲೇ ನಿನ್ನೆಯ ರಾತ್ರಿ ನಿನ್ನನ್ನು ಗದರಿಸಿದನು ಅಂದನು.


ಆ ರಾತ್ರಿ ಯೆಹೋವನು ಅವನಿಗೆ ಕಾಣಿಸಿಕೊಂಡು - ನಾನು ನಿನ್ನ ತಂದೆಯಾದ ಅಬ್ರಹಾಮನ ದೇವರು; ನೀನು ಭಯಪಡಬೇಡ; ನಾನು ನಿನ್ನ ಬಳಿಯಲ್ಲಿದ್ದೇನೆ; ನನ್ನ ಸೇವಕನಾದ ಅಬ್ರಹಾಮನ ನಿವಿುತ್ತ ನಿನ್ನನ್ನು ಆಶೀರ್ವದಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು ಎಂದು ಹೇಳಲಾಗಿ


ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. ಇದು ಕರ್ತನಿಂದಲೇ ಆಯಿತು; ನಮಗೆ ಆಶ್ಚರ್ಯವಾಗಿ ತೋರುತ್ತದೆ ಎಂಬುವ ಶಾಸ್ತ್ರವಚನವನ್ನು ನೀವು ಓದಿಲ್ಲವೇ ಅಂದನು.


ಇದಲ್ಲದೆ ಯೆಹೋವನು ಅವನ ಬಳಿಯಲ್ಲಿ ನಿಂತು - ನಾನು ನಿನ್ನ ತಂದೆಯಾದ ಅಬ್ರಹಾಮನ ದೇವರೂ ಇಸಾಕನ ದೇವರೂ ಆಗಿರುವ ಯೆಹೋವನು. ನೀನು ಮಲಗಿಕೊಂಡಿರುವ ಈ ದೇಶವನ್ನು ನಿನಗೂ ನಿನ್ನ ಸಂತತಿಗೂ ಕೊಡುತ್ತೇನೆ.


ಸತ್ತವರು ಬದುಕಿ ಎದ್ದ ಮೇಲೆ ಮದುವೆ ಮಾಡಿಕೊಳ್ಳುವದೂ ಇಲ್ಲ, ಮಾಡಿಕೊಡುವದೂ ಇಲ್ಲ; ಪರಲೋಕದಲ್ಲಿರುವ ದೇವದೂತರಂತೆ ಇರುತ್ತಾರೆ.


ಯೇಸು ಆಕೆಗೆ - ನನ್ನನ್ನು ಹಿಡಿಯಬೇಡ; ಯಾಕಂದರೆ ನಾನು ಇನ್ನೂ ತಂದೆಯ ಬಳಿಗೆ ಏರಿಹೋದವನಲ್ಲ. ನೀನು ನನ್ನ ಸಹೋದರರ ಬಳಿಗೆ ಹೋಗಿ - ನಾನು ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನ ಬಳಿಗೆ ಏರಿಹೋಗುತ್ತೇನೆ ಎಂದು ಅವರಿಗೆ ಹೇಳು ಅಂದನು.


ದೇವರು ತಾನು ಮುಂದಾಗಿ ತನ್ನ ಜನರಾಗುವದಕ್ಕೆ ಗೊತ್ತುಮಾಡಿಕೊಂಡಿದ್ದ ಪ್ರಜೆಯನ್ನು ತಳ್ಳಿ ಬಿಡಲಿಲ್ಲ. ಎಲೀಯನ ಚರಿತ್ರೆಯಲ್ಲಿ ಶಾಸ್ತ್ರವು ಹೇಳುವ ಮಾತು ನಿಮಗೆ ತಿಳಿಯದೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು