ಮಾರ್ಕ 12:28 - ಕನ್ನಡ ಸತ್ಯವೇದವು J.V. (BSI)28 ಶಾಸ್ತ್ರಿಗಳಲ್ಲಿ ಒಬ್ಬನು ಅವರ ತರ್ಕವನ್ನು ಕೇಳಿ ಯೇಸು ಅವರಿಗೆ ಒಳ್ಳೆಯ ಉತ್ತರ ಕೊಟ್ಟನೆಂದು ತಿಳಿದು ಹತ್ತಿರಕ್ಕೆ ಬಂದು - ಎಲ್ಲಾ ಆಜ್ಞೆಗಳಲ್ಲಿ ಮೊದಲನೆಯದು ಯಾವದು ಎಂದು ಆತನನ್ನು ಕೇಳಿದ್ದಕ್ಕೆ ಯೇಸು - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಶಾಸ್ತ್ರಿಗಳಲ್ಲಿ ಒಬ್ಬನು ಅವರ ವಾದವನ್ನು ಕೇಳಿ ಯೇಸು ಅವರಿಗೆ ಸರಿಯಾಗಿ ಉತ್ತರ ಕೊಟ್ಟನೆಂದು ತಿಳಿದು ಆತನ ಹತ್ತಿರಕ್ಕೆ ಬಂದು, “ಎಲ್ಲಾ ಆಜ್ಞೆಗಳಲ್ಲಿ ಮುಖ್ಯವಾದ್ದದು ಯಾವುದು?” ಎಂದು ಆತನನ್ನು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಈ ತರ್ಕವನ್ನು ಕೇಳುತ್ತಿದ್ದ ಧರ್ಮಶಾಸ್ತ್ರಿ ಒಬ್ಬನು, ಯೇಸುಸ್ವಾಮಿ ಸದ್ದುಕಾಯರಿಗೆ ಸಮರ್ಪಕವಾದ ಉತ್ತರವನ್ನು ಕೊಟ್ಟಿದ್ದನ್ನು ಮೆಚ್ಚಿ, ಅವರ ಬಳಿಗೆ ಬಂದು, “ಆಜ್ಞೆಗಳಲ್ಲೆಲ್ಲಾ ಪ್ರಪ್ರಥಮ ಆಜ್ಞೆ ಯಾವುದು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಈ ವಾದವಿವಾದವನ್ನು ಕೇಳುತ್ತಿದ್ದ ಧರ್ಮೋಪದೇಶಕರಲ್ಲಿ ಒಬ್ಬನು ಯೇಸು ಸದ್ದುಕಾಯರಿಗೆ ಹಾಗೂ ಫರಿಸಾಯರಿಗೆ ಒಳ್ಳೆಯ ಉತ್ತರ ಕೊಟ್ಟದ್ದನ್ನು ಗಮನಿಸಿ, ಆತನ ಬಳಿಗೆ ಬಂದು, “ಆಜ್ಞೆಗಳಲ್ಲೆಲ್ಲಾ ಅತ್ಯಂತ ಮುಖ್ಯವಾದ ಆಜ್ಞೆ ಯಾವುದು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ನಿಯಮ ಬೋಧಕರಲ್ಲಿ ಒಬ್ಬನು ಬಂದು ಅವರು ಕೂಡಿಕೊಂಡು ತರ್ಕಿಸುತ್ತಿರುವುದನ್ನು ಕೇಳಿ ಯೇಸು ಅವರಿಗೆ ಸರಿಯಾಗಿ ಉತ್ತರವನ್ನು ಕೊಟ್ಟನೆಂದು ತಿಳಿದು ಅವರಿಗೆ, “ಎಲ್ಲಾ ಆಜ್ಞೆಗಳಲ್ಲಿ ಮೊದಲನೆಯದು ಯಾವುದು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್28 ಖಾಯ್ದೆ ಸಿಕ್ವುತಲ್ಯಾಂಚ್ಯಾ ಮದ್ಲ್ಯಾ ಎಕ್ ಮಾನ್ಸಾನ್ ಜೆಜು ಸಾದುಸೆವಾಕ್ನಿ ಸಮಾ ಜಬಾಬ್ ದಿತಲೆ ಅಯ್ಕ್ಲ್ಯಾನ್, ಅನಿ ಜೆಜುಕ್ಡೆ ಯೆವ್ನ್ “ಸಗ್ಳ್ಯಾ ಉಪಾದೆಸಾನ್ಕಿ ಮೊಟೊ ಉಪಾದೆಸ್ ಖಲೊ?” ಮನುನ್ ಇಚಾರ್‍ಲ್ಯಾನ್. ಅಧ್ಯಾಯವನ್ನು ನೋಡಿ |