Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 12:32 - ಕನ್ನಡ ಸತ್ಯವೇದವು J.V. (BSI)

32 ಆಗ ಆ ಶಾಸ್ತ್ರಿಯು - ಬೋಧಕನೇ, ಚೆನ್ನಾಗಿ ಹೇಳಿದೆ; ಒಬ್ಬನೇ ಇದ್ದಾನೆ, ಆತನ ಹೊರತು ಮತ್ತೊಬ್ಬ ದೇವರಿಲ್ಲ ಎಂದು ನೀನು ಹೇಳಿದ್ದು ಸತ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆಗ ಆ ಶಾಸ್ತ್ರಿಯು, “ಬೋಧಕನೇ, ನೀನು ಚೆನ್ನಾಗಿ ಹೇಳಿದೆ. ಸತ್ಯವನ್ನೇ ಹೇಳಿದಿ ದೇವರು ಒಬ್ಬನೇ, ಆತನ ಹೊರತು ಬೇರೊಬ್ಬ ದೇವರಿಲ್ಲ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಇದನ್ನು ಕೇಳಿದ ಆ ಧರ್ಮಶಾಸ್ತ್ರಿ, “ಬೋಧಕರೇ, ಚೆನ್ನಾಗಿ ಹೇಳಿದಿರಿ. ದೇವರು ಒಬ್ಬರೇ, ಅವರ ಹೊರತು ಬೇರೆ ದೇವರಿಲ್ಲ, ಎಂದು ನೀವು ಹೇಳಿದ್ದು ಸತ್ಯ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಆಗ ಅವನು, “ಉಪದೇಶಕನೇ, ಅದು ಒಳ್ಳೆಯ ಉತ್ತರ. ನೀನು ಸರಿಯಾಗಿ ಹೇಳಿದೆ. ದೇವರೊಬ್ಬನೇ ಪ್ರಭು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಅದಕ್ಕೆ ಆ ನಿಯಮ ಬೋಧಕನು ಯೇಸುವಿಗೆ, “ಬೋಧಕರೇ, ಚೆನ್ನಾಗಿ ಹೇಳಿದಿರಿ. ನೀವು ಹೇಳಿದ್ದು ಸತ್ಯವೇ; ಏಕೆಂದರೆ ದೇವರು ಒಬ್ಬರೇ, ಅವರ ಹೊರತು ಬೇರೊಬ್ಬರು ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ತನ್ನಾ ತೊ ಖಾಯ್ದೆ ಸಿಕ್ವುತಲೊ ಜೆಜುಕ್ “ಗುರುಜಿ, ಬರಬ್ಬರ್ ಸಾಂಗ್ಲೆ ತಿಯಾ, ದೆವ್ ಎಕ್ಲೊಚ್, ತೆಚ್ಯಾ ಶಿವಾಯ್ ಅನಿ ದುಸ್ರೊ ದೆವ್ ನಾ. ಹೆ ಖರೆ ಹಾಯ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 12:32
13 ತಿಳಿವುಗಳ ಹೋಲಿಕೆ  

ನೀವು ಇದನ್ನೆಲ್ಲಾ ಆಲೋಚಿಸಿ ಆಕಾಶದಲ್ಲಿಯೂ ಭೂವಿುಯಲ್ಲಿಯೂ ಯೆಹೋವನೊಬ್ಬನೇ ದೇವರು, ಬೇರೆ ಯಾವ ದೇವರೂ ಇಲ್ಲವೆಂಬದನ್ನು ಈಗ ಗ್ರಹಿಸಿಕೊಂಡು ಜ್ಞಾಪಕದಲ್ಲಿಡಬೇಕು.


ಇಸ್ರಾಯೇಲ್ ಜನವೇ ಕೇಳು, ನಮ್ಮ ದೇವರಾದ ಕರ್ತನು ಒಬ್ಬನೇ ದೇವರು;


ಪುರಾತನದ ಹಳೇ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ; ನಾನೇ ದೇವರು, ಇನ್ನು ಯಾರೂ ಅಲ್ಲ; ನಾನೇ ಪರಮದೇವರು, ನನಗೆ ಸರಿಸಮಾನರಿಲ್ಲ.


ಆಕಾಶಮಂಡಲವನ್ನು ಸೃಷ್ಟಿಸಿದ ಯೆಹೋವನ ಮಾತನ್ನು ಕೇಳಿರಿ; ಆತನೇ ದೇವರು, ಭೂಲೋಕವನ್ನು ನಿರ್ಮಿಸಿ ರೂಪಿಸಿ ಸ್ಥಾಪಿಸಿದನು; ಅದನ್ನು ಶೂನ್ಯಸ್ಥಾನವಾಗಿರಲೆಂದು ಸೃಷ್ಟಿಸದೆ ಜನನಿವಾಸಕ್ಕಾಗಿಯೇ ರೂಪಿಸಿದನು. ಈತನು ಹೀಗನ್ನುತ್ತಾನೆ - ನಾನೇ ಯೆಹೋವನು, ಇನ್ನು ಯಾವನೂ ಅಲ್ಲ.


ಯೆಹೋವನ ಈ ಮಾತನ್ನು ಕೇಳಿರಿ - ಐಗುಪ್ತದ ಆದಾಯವೂ ಕೂಷಿನ ವ್ಯಾಪಾರವೂ ಎತ್ತರದ ಮನುಷ್ಯರಾದ ಸೆಬಾಯರೂ ನಿಮ್ಮಲ್ಲಿಗೆ ಸೇರಿ ನಿಮ್ಮವರಾಗಿ ನಿಮ್ಮನ್ನು ಅನುಸರಿಸುವರು; ಸಂಕೋಲೆಗಳನ್ನು ಕಟ್ಟಿಕೊಂಡು ಬಂದು ನಿಮ್ಮ ಮುಂದೆ ಅಡ್ಡಬಿದ್ದು ಹೀಗೆ ಅರಿಕೆಮಾಡುವರು - ದೇವರು ನಿಜವಾಗಿ ನಿಮ್ಮಲ್ಲಿದ್ದಾನೆ. ಇನ್ನು ಯಾವ ದೇವರೂ ಇಲ್ಲವೇ ಇಲ್ಲ.


ಹೆದರಬೇಡಿರಿ, ಅಂಜದಿರಿ! ನಾನು ಪೂರ್ವದಿಂದಲೂ ನಿಮಗೆ ಹೇಳಿ ಪ್ರಕಟಿಸಿಕೊಂಡೆನಷ್ಟೆ. ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರಿದ್ದಾನೋ? ಇನ್ನು ಯಾವ ಶರಣನೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.


ಇಸ್ರಾಯೇಲ್ಯರೇ, ಕೇಳಿರಿ; ನಮ್ಮ ದೇವರಾದ ಯೆಹೋವನು ಒಬ್ಬನೇ ದೇವರು;


ಯೆಹೋವನೊಬ್ಬನೇ ದೇವರು, ಬೇರೆ ದೇವರೇ ಇಲ್ಲವೆಂದು ನೀವು ತಿಳಿದುಕೊಳ್ಳುವದಕ್ಕಾಗಿ ಇದೆಲ್ಲಾ ನಿಮಗೆ ಮಾತ್ರ ತೋರಿಸಲ್ಪಟ್ಟಿತು.


ನಾನಲ್ಲದೆ ನಿನಗೆ ಬೇರೆ ದೇವರುಗಳು ಇರಬಾರದು.


ಆತನನ್ನು ಪೂರ್ಣಮನಸ್ಸಿನಿಂದಲೂ ಪೂರ್ಣಬುದ್ಧಿಯಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸುವದು ಮತ್ತು ತನ್ನನ್ನು ಪ್ರೀತಿಸಿಕೊಳ್ಳುವಂತೆ ತನ್ನ ನೆರೆಯವನನ್ನು ಪ್ರೀತಿಸುವದು ಇವೆರಡೂ ಎಲ್ಲಾ ಸರ್ವಾಂಗಹೋಮಗಳಿಗಿಂತಲೂ ಎಲ್ಲಾ ಯಜ್ಞಗಳಿಗಿಂತಲೂ ಹೆಚ್ಚಿನವು ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು