Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 12:36 - ಕನ್ನಡ ಸತ್ಯವೇದವು J.V. (BSI)

36 ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳ ಕೆಳಗೆ ಹಾಕುವ ತನಕ ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು ಎಂಬದಾಗಿ ದಾವೀದನೇ ಪವಿತ್ರಾತ್ಮನ ಪ್ರೇರಣೆಯಿಂದ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 “‘ನಾನು ನಿನ್ನ ಶತ್ರುಗಳನ್ನು ನಿನ್ನ ಪಾದದಡಿ ಹಾಕುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು’ ಎಂಬುದಾಗಿ ದಾವೀದನೇ ಪವಿತ್ರಾತ್ಮನ ಪ್ರೇರಣೆಯಿಂದ ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ‘ನಿನ್ನ ಶತ್ರುಗಳನ್ನು ನಾನು ನಿನ್ನ ಪಾದದಡಿಗೆ ಹಾಕುವತನಕ ನನ್ನ ಬಲಗಡೆಯಲ್ಲಿ ಆಸೀನನಾಗಿರು ಎಂದು ನನ್ನ ಪ್ರಭುವಿಗೆ ಸರ್ವೇಶ್ವರ ಹೇಳಿದ್ದಾರೆ,’ ಎಂದು ದಾವೀದನೇ ಪವಿತ್ರಾತ್ಮಪ್ರೇರಣೆಯಿಂದ ಹೇಳಿದ್ದಾನಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ‘ಪ್ರಭುವು ನನ್ನ ಪ್ರಭುವಿಗೆ, ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವನ್ನಾಗಿ ಮಾಡುವ ತನಕ ನನ್ನ ಬಲಗಡೆಯಲ್ಲಿ ನನ್ನೊಂದಿಗೆ ಕುಳಿತುಕೊಂಡಿರು’ ಎಂದು ಹೇಳಿದ್ದಾನೆ ಎಂಬುದಾಗಿ ದಾವೀದನೇ ಪವಿತ್ರಾತ್ಮ ಪ್ರೇರಣೆಯಿಂದ ಬರೆದಿದ್ದಾನಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ದಾವೀದನು ತಾನೇ ಪವಿತ್ರಾತ್ಮ ಪ್ರೇರಣೆಯಿಂದ ಹೇಳಿದ್ದೇನೆಂದರೆ: “ ‘ಕರ್ತದೇವರು ನನ್ನ ಕರ್ತದೇವರಿಗೆ ಹೇಳಿದ್ದಾರೆ: “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದದಡಿಯಲ್ಲಿ ಹಾಕುವವರೆಗೆ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು.” ’

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ಕಶ್ಯಾಕ್ ಮಟ್ಲ್ಯಾರ್ ಪವಿತ್ರ್ ಆತ್ಮೊ ದಾವಿದಾಚ್ಯಾ ಮುಕಾಂತ್ರ್ ಮಟ್ಲ್ಯಾನಾಯ್, “ಸರ್ವೆಸ್ವರಾನ್ ಮಾಜ್ಯಾ ಧನಿಯಾಕ್, ತುಜ್ಯಾ ದುಸ್ಮನಾಕ್ ತುಜ್ಯಾ ಪಾಂಯಾಂಚ್ಯಾ ಮುಳಾತ್ ಪಡಿಸರ್ಕೆ ಕರಿ ಪತರ್, ತಿಯಾ ಮಾಜ್ಯಾ ಉಜ್ವ್ಯಾಕ್ಡೆ ಬಸುನ್ ರ್‍ಹಾ” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 12:36
16 ತಿಳಿವುಗಳ ಹೋಲಿಕೆ  

ಯೆಹೋವನು ನನ್ನ ಒಡೆಯನಿಗೆ - ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವಾಗ ಮಾಡುವ ತನಕ ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ನುಡಿದನು.


ಆದರೆ ದೇವದೂತರಲ್ಲಿ ಯಾವ ವಿಷಯದಲ್ಲಿಯಾದರೂ - ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವಾಗ ಮಾಡುವತನಕ ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂಬದಾಗಿ ಎಂದಾದರೂ ಹೇಳಿದ್ದಾನೋ?


ಯಾಕಂದರೆ ತಾನು ಎಲ್ಲಾ ವಿರೋಧಿಗಳನ್ನು ತನ್ನ ಪಾದಗಳ ಕೆಳಗೆ ಹಾಕಿಕೊಳ್ಳುವ ತನಕ ರಾಜ್ಯವನ್ನಾಳುವದು ಅವಶ್ಯ.


ಸಹೋದರರೇ, ಯೇಸುವನ್ನು ಹಿಡಿದುಕೊಂಡವರಿಗೆ ದಾರೀತೋರಿಸಿದ ಯೂದನ ವಿಷಯವಾಗಿ ಪವಿತ್ರಾತ್ಮನು ದಾವೀದನ ಬಾಯಿಂದ ಮೊದಲೇ ಹೇಳಿಸಿದ ಶಾಸ್ತ್ರವಚನವು ನೆರವೇರುವದು ಅವಶ್ಯವಾಗಿತ್ತು.


ನೀನು ಅನೇಕವರ್ಷಗಳ ತನಕ ಅವರ ವಿಷಯದಲ್ಲಿ ತಾಳಿಕೊಂಡು ಪ್ರವಾದಿಗಳ ಮುಖಾಂತರ ಮಾತಾಡುತ್ತಿದ್ದ ನಿನ್ನ ಆತ್ಮನಿಂದ ಅವರನ್ನು ಎಷ್ಟು ಎಚ್ಚರಿಸುತ್ತಿದ್ದರೂ ಅವರು ಕಿವಿಗೊಡದೆ ಹೋದ ಮೇಲೆ ನೀನು ಅವರನ್ನು ಅನ್ಯದೇಶಗಳವರ ಕೈಗೆ ಒಪ್ಪಿಸಿಬಿಟ್ಟಿ.


ಯೆಹೋವನ ಆತ್ಮವು ನನ್ನಲ್ಲಿ ಉಸುರಿತು; ಆತನ ವಾಕ್ಯವು ನನ್ನ ಬಾಯಲ್ಲಿತ್ತು.


ಯಾಕಂದರೆ ಯಾವ ಪ್ರವಾದನೆಯೂ ಎಂದೂ ಮನುಷ್ಯರ ಚಿತ್ತದಿಂದ ಉಂಟಾಗಲಿಲ್ಲ; ಮನುಷ್ಯರು ಪವಿತ್ರಾತ್ಮ ಪ್ರೇರಿತರಾಗಿ ದೇವರಿಂದ ಹೊಂದಿದ್ದನ್ನೇ ಮಾತಾಡಿದರು.


ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಪ್ರಭಾವವನ್ನೂ ಮುಂದಾಗಿ ತಿಳಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವನೆಂಬದನ್ನು ಅವರು ಪರಿಶೋಧನೆ ಮಾಡಿದರು.


ಬಹುಕಾಲ ಹೋದನಂತರ ಆತನು ದಾವೀದನ ಬಾಯಿಂದ ಮಾತಾಡಿ ಈಹೊತ್ತೇ ಎಂದು ಒಂದಾನೊಂದು ದಿವಸವನ್ನು ಗೊತ್ತು ಮಾಡುತ್ತಾನೆ; ಹೇಗಂದರೆ - ನೀವು ಈಹೊತ್ತು ದೇವರ ಶಬ್ದಕ್ಕೆ ಕಿವಿಗೊಟ್ಟರೆ ನಿಮ್ಮ ಹೃದಯಗಳನ್ನು ಕಠಿನಮಾಡಿಕೊಳ್ಳಬೇಡಿರಿ ಎಂದು ಮೇಲ್ಕಂಡ ವಚನದಲ್ಲಿ ಹೇಳುತ್ತಾನಷ್ಟೆ.


ದೈವಪ್ರೇರಿತವಾದ ಪ್ರತಿಯೊಂದು ಶಾಸ್ತ್ರವು ಉಪದೇಶಕ್ಕೂ ಖಂಡನೆಗೂ ತಿದ್ದುಪಾಟಿಗೂ ನೀತಿಶಿಕ್ಷೆಗೂ ಉಪಯುಕ್ತವಾಗಿದೆ.


ಅವರಲ್ಲಿ ಐಕಮತ್ಯವಿಲ್ಲದೆ ಇರುವಾಗ ಪೌಲನು ಅವರಿಗೆ - ಪವಿತ್ರಾತ್ಮನು ಪ್ರವಾದಿಯಾದ ಯೆಶಾಯನ ಬಾಯಿಂದ


ಭೂವಿುಯ ಮೇಲೆ ಆಣೆ ಇಡಬೇಡ; ಅದು ಆತನ ಪಾದಪೀಠವು. ಯೆರೂಸಲೇವಿುನ ಮೇಲೆ ಆಣೆ ಇಡಬೇಡ; ಅದು ಆ ದೊಡ್ಡ ಅರಸನ ಪಟ್ಟಣವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು