Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 12:9 - ಕನ್ನಡ ಸತ್ಯವೇದವು J.V. (BSI)

9 ಹಾಗಾದರೆ ದ್ರಾಕ್ಷೆಯ ತೋಟದ ಧಣಿಯು ಏನು ಮಾಡುವನು? ಅವನು ಬಂದು ಆ ಒಕ್ಕಲಿಗರನ್ನು ಸಂಹರಿಸಿ ತನ್ನ ತೋಟವನ್ನು ಬೇರೆ ಜನರಿಗೆ ಮಾಡುವದಕ್ಕೆ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಹಾಗಾದರೆ ಆ ದ್ರಾಕ್ಷಾ ತೋಟದ ಯಜಮಾನನು ಏನು ಮಾಡುವನು? ಅವನು ಬಂದು ಆ ಗುತ್ತಿಗೆದಾರರನ್ನು ಸಂಹರಿಸಿ ತನ್ನ ದ್ರಾಕ್ಷಾತೋಟವನ್ನು ಬೇರೆಯವರಿಗೆ ಒಪ್ಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಇಂತಹ ಪರಿಸ್ಥಿತಿಯಲ್ಲಿ ಆ ತೋಟದ ಯಜಮಾನ ಏನು ಮಾಡುವನು? ಅವನು ಬಂದು ಆ ಗೇಣಿದಾರರನ್ನು ಸಂಹರಿಸಿ ತೋಟವನ್ನು ಬೇರೆ ಗೇಣಿದಾರರಿಗೆ ಒಪ್ಪಿಸುವನು. ಪವಿತ್ರಗ್ರಂಥದಲ್ಲಿ :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಹೀಗಿರುವಾಗ ಆ ದಾಕ್ಷಿತೋಟದ ಯಜಮಾನನು ಏನು ಮಾಡುತ್ತಾನೆ? ಅವನು ತೋಟಕ್ಕೆ ಹೋಗಿ, ಆ ರೈತರನ್ನು ಕೊಂದು ತೋಟವನ್ನು ಬೇರೆ ರೈತರಿಗೆ ಒಪ್ಪಿಸಿಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ಹಾಗಾದರೆ ದ್ರಾಕ್ಷಿತೋಟದ ಯಜಮಾನನು ಅವರಿಗೆ ಏನು ಮಾಡುವನು? ಅವನು ಬಂದು ಆ ರೈತರನ್ನು ಸಂಹರಿಸಿ ದ್ರಾಕ್ಷಿಯ ತೋಟವನ್ನು ಬೇರೆಯವರಿಗೆ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 “ಅಸೆಹೊಲ್ಲ್ಯಾತನ್ನಾ, ತೊ ದರಾಕ್ಷಿಚ್ಯಾ ಮಳ್ಯಾಚೊ ಸಾವ್ಕಾರ್ ಯೆವ್ನ್ ಕಾಯ್ ಕರಿಲ್ ಮನುನ್ ತುಮಿ ಮನ್ತ್ಯಾಶಿ?” ಮನುನ್ ಇಚಾರ್‍ಲ್ಯಾನ್, ತೊ ಸಾವ್ಕಾರ್ ಯೆತಾ ಅನಿ ತ್ಯಾ ಮಾನ್ಸಾಕ್ನಿ ಜಿವಾನಿ ಮಾರುನ್ ತೊ ಮಳೊ ದುಸ್ರ್ಯಾಕ್ನಿ ಗುತ್ಕ್ಯಾಕ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 12:9
33 ತಿಳಿವುಗಳ ಹೋಲಿಕೆ  

ಇದಲ್ಲದೆ ಯೆಶಾಯನು ಧೈರ್ಯವಾಗಿ ಮಾತಾಡಿ - ನನ್ನನ್ನು ಹುಡುಕದವರಿಗೂ ಸಿಕ್ಕಿದೆನು, ನನ್ನ ವಿಷಯ ವಿಚಾರಮಾಡದವರಿಗೂ ಪ್ರತ್ಯಕ್ಷನಾದೆನು ಎಂದು ಹೇಳುತ್ತಾನೆ.


ಮತ್ತು ತಮ್ಮ ಮೇಲೆ ನಾನು ದೊರೆತನ ಮಾಡುವದು ಇಷ್ಟವಿಲ್ಲವೆಂದು ಹೇಳಿದ ಆ ನನ್ನ ವೈರಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಬೇಕು ಅಂದನು.


ಆದದರಿಂದ ದೇವರರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಕ್ಕೆ ಕೊಡಲಾಗುವದು.


ಅರಸನು ಸಿಟ್ಟುಗೊಂಡು ತನ್ನ ದಂಡುಗಳನ್ನು ಕಳುಹಿಸಿ ಆ ಕೊಲೆಗಾರರನ್ನು ನಾಶಮಾಡಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.


ತನಗಿಂತ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ತನ್ನೊಂದಿಗೆ ಕರಕೊಂಡು ಬರುವದು. ಅವು ಒಳಹೊಕ್ಕು ಅಲ್ಲಿ ವಾಸಮಾಡುವವು. ಆಗ ಆ ಮನುಷ್ಯನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗುವದು. ಇದರಂತೆಯೇ ಈ ಕೆಟ್ಟ ಸಂತತಿಗೆ ಆಗುವದು ಅಂದನು.


ಸೂರ್ಯನು ಮೂಡುವ ದಿಕ್ಕಿನಿಂದ ಮುಣುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನೂ ಶುದ್ಧನೈವೇದ್ಯವನ್ನೂ ಅರ್ಪಿಸುತ್ತಾರೆ; ಹೌದು, ಅನ್ಯಜನಾಂಗಗಳಲ್ಲಿಯೇ ನನ್ನ ನಾಮವು ಘನವಾಗಿದೆ; ಇದು ಸೇನಾಧೀಶ್ವರ ಯೆಹೋವನ ನುಡಿ.


ಬೈಲಿನ ನನ್ನ ಪರ್ವತದ ಜನರೇ, ನಿಮ್ಮ ಸಕಲ ಪ್ರಾಂತಗಳಲ್ಲಿ ನೀವು ಮಾಡಿದ ಪಾಪದ ನಿವಿುತ್ತ ನಾನು ನಿಮ್ಮ ಎಲ್ಲಾ ಸೊತ್ತು ಸಂಪತ್ತುಗಳನ್ನೂ ಪೂಜಾಸ್ಥಳಗಳನ್ನೂ ಸೂರೆಗೆ ಈಡುಮಾಡುವೆನು.


ಕರ್ತನಾದ ಯೆಹೋವನು ನಿಮ್ಮನ್ನು ಕೊಂದುಹಾಕುವನು, ನಿಮ್ಮ ಹೆಸರು ನನ್ನ ಆಪ್ತಜನರು ಶಪಿಸುವ ಶಾಪದ ಮಾತಾಗಿಯೇ ಉಳಿಯುವದು; ನಾನು ನನ್ನ ಸೇವಕರಿಗೆ ಹೊಸ ಹೆಸರನ್ನು ಕೊಡುವೆನು.


ಅತ್ಯಲ್ಪಕಾಲದೊಳಗೆ ಲೆಬನೋನ್ ಅರಣ್ಯವು ತೋಟವಾಗುವದು, [ಈಗಿನ] ತೋಟವು [ಆಗಿನವರಿಗೆ] ಅರಣ್ಯವಾಗಿ ಕಾಣಿಸುವದು.


ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನಕ್ಕನುಸಾರವಾಗಿ ಈಗ ನಿಮಗೆ ಎಲ್ಲಾ ತರದ ಮೇಲನ್ನು ಅನುಗ್ರಹಿಸಿದಂತೆಯೇ ನಿಮ್ಮ ಮೇಲೆ ಸಕಲವಿಧವಾದ ಕೇಡುಗಳನ್ನೂ ಬರಮಾಡಿ ತಾನು ಕೊಟ್ಟಿರುವ ಈ ಉತ್ತಮದೇಶದಿಂದ ನಿಮ್ಮನ್ನು ತೆಗೆದು ನಾಶಮಾಡಿಬಿಡುವನು.


ಫಲಕಾಲ ಹತ್ತರವಾದಾಗ ತನಗೆ ಬರಬೇಕಾದ ಹಣ್ಣುಗಳನ್ನು ತೆಗೆದುಕೊಂಡು ಬರುವದಕ್ಕಾಗಿ ಆ ಒಕ್ಕಲಿಗರ ಬಳಿಗೆ ತನ್ನ ಆಳುಗಳನ್ನು ಕಳುಹಿಸಲು


ಅವನನ್ನು ಹಿಡಿದು ಕೊಂದುಹಾಕಿ ದ್ರಾಕ್ಷೆಯ ತೋಟದಿಂದ ಹೊರಕ್ಕೆ ಬಿಸಾಟುಬಿಟ್ಟರು.


ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. ಇದು ಕರ್ತನಿಂದಲೇ ಆಯಿತು; ನಮಗೆ ಆಶ್ಚರ್ಯವಾಗಿ ತೋರುತ್ತದೆ ಎಂಬುವ ಶಾಸ್ತ್ರವಚನವನ್ನು ನೀವು ಓದಿಲ್ಲವೇ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು