Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 13:33 - ಕನ್ನಡ ಸತ್ಯವೇದವು J.V. (BSI)

33 ಆ ಕಾಲವು ಯಾವಾಗ ಬರುವದೋ ನಿಮಗೆ ಗೊತ್ತಿಲ್ಲವಾದ್ದರಿಂದ ನೋಡಿಕೊಳ್ಳಿರಿ, ಜಾಗರೂಕರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆ ಕಾಲವು ಯಾವಾಗ ಬರುವುದು ಎಂದು ನಿಮಗೆ ತಿಳಿಯದೆ ಇರುವುದರಿಂದ ನೀವು ಎಚ್ಚರವಾಗಿರಿ, ಜಾಗರೂಕರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಆ ಕಾಲ ಯಾವಾಗ ಬರುವುದು ಎಂದು ನಿಮಗೆ ತಿಳಿಯದ್ದರಿಂದ ಎಚ್ಚರಿಕೆಯಿಂದಿರಿ, ಜಾಗರೂಕರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಎಚ್ಚರಿಕೆಯಿಂದಿರಿ! ಯಾವಾಗಲೂ ಸಿದ್ಧರಾಗಿರಿ! ಆ ಸಮಯ ಯಾವಾಗ ಬರುತ್ತದೆಂದು ನಿಮಗೆ ತಿಳಿದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ನೀವು ಎಚ್ಚರವಾಗಿರಿ, ಜಾಗರೂಕರಾಗಿರಿ. ಏಕೆಂದರೆ ಆ ಕಾಲವು ಬರುವುದು ಯಾವಾಗ ಎಂದು ನಿಮಗೆ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ಕನ್ನಾಬಿ, ರಾಕುನ್ಗೆತ್ “ಉಶಾರ್ಕಿನ್ ರ್‍ಹಾವಾ, ತೊ ಎಳ್ ಕನ್ನಾ ಯೆತಾ ಮನುನ್ ತುಮ್ಕಾ ಗೊತ್ತ್ ನಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 13:33
19 ತಿಳಿವುಗಳ ಹೋಲಿಕೆ  

ನೀವು ಪವಿತ್ರಾತ್ಮಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ದೇವರನ್ನು ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ದೇವಜನರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ.


ನೀವು ಸಹ ಸಿದ್ಧವಾಗಿರ್ರಿ. ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ ಅಂದನು.


(ಇಗೋ, ಕಳ್ಳನು ಬರುವಂತೆ ಬರುತ್ತೇನೆ; ತಾನು ನಿರ್ವಾಣನಾಗಿ ತಿರುಗಾಡಿ ಅವಮಾನಕ್ಕೆ ಗುರಿಯಾದೇನೆಂದು ಎಚ್ಚರವಾಗಿದ್ದು ತನ್ನ ವಸ್ತ್ರಗಳನ್ನು ಕಾಪಾಡಿಕೊಳ್ಳುವವನು ಧನ್ಯನು.)


ಸ್ವಸ್ಥಚಿತ್ತರಾಗಿರಿ, ಎಚ್ಚರವಾಗಿರಿ; ನಿಮ್ಮ ವಿರೋಧಿಯಾಗಿರುವ ಸೈತಾನನು ಗರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.


ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ; ಆದದರಿಂದ ನೀವು ಜಿತೇಂದ್ರಿಯರಾಗಿಯೂ ಪ್ರಾರ್ಥನೆಗೆ ಸಿದ್ಧವಾಗಿರುವಂತೆ ಸ್ವಸ್ಥಚಿತ್ತರಾಗಿಯೂ ಇರ್ರಿ.


ಆದಕಾರಣ ಆ ದಿನವಾದರೂ ಗಳಿಗೆಯಾದರೂ ನಿಮಗೆ ಗೊತ್ತಿಲ್ಲವಾದದರಿಂದ ಎಚ್ಚರವಾಗಿರ್ರಿ.


ಎಚ್ಚರವಾಗಿರು; ಸಾಯುವ ಹಾಗಿದ್ದ ಉಳಿದವುಗಳನ್ನು ದೃಢಪಡಿಸು. ನನ್ನ ದೇವರ ಮುಂದೆ ನಿನ್ನ ಕೃತ್ಯಗಳಲ್ಲಿ ಒಂದಾದರೂ ಸಂಪೂರ್ಣವಾದದ್ದೆಂದು ನಾನು ಕಾಣಲಿಲ್ಲ.


ಎಚ್ಚರವಾಗಿರಿ, ಕ್ರಿಸ್ತನಂಬಿಕೆಯಲ್ಲಿ ದೃಢವಾಗಿ ನಿಲ್ಲಿರಿ.


ನೀವಂತು ನೋಡಿಕೊಳ್ಳಿರಿ; ನಿಮಗೆ ಎಲ್ಲವನ್ನೂ ಮುಂದಾಗಿ ಹೇಳಿದ್ದೇನೆ.


ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವದಿಲ್ಲ. ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹಿಂಜರಿಯದಂತೆ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಸಭೆಯವರನ್ನು ಕೆಡಿಸದಂತೆ


ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.


ಪ್ರಾರ್ಥನೆಯನ್ನು ತಪ್ಪದೆ ಮಾಡುವವರಾಗಿ ಅದರಲ್ಲಿ ಎಚ್ಚರವಾಗಿದ್ದು ದೇವರಿಗೆ ಕೃತಜ್ಞತಾಸ್ತುತಿ ಮಾಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು