Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 13:35 - ಕನ್ನಡ ಸತ್ಯವೇದವು J.V. (BSI)

35 ಮನೇಯಜಮಾನನು ಸಂಜೆಯಲ್ಲೋ ಸರುಹೊತ್ತಿನಲ್ಲೋ ಕೋಳಿ ಕೂಗುವಾಗಲೋ ಮುಂಜಾನೆಯಲ್ಲೋ ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲದ ಕಾರಣ ಎಚ್ಚರವಾಗಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 “ಮನೆ ಯಜಮಾನನು ಸಂಜೆಯಲ್ಲಿಯೋ, ಮಧ್ಯರಾತ್ರಿಯಲ್ಲಿಯೋ, ಕೋಳಿ ಕೂಗುವಾಗಲೋ ಬೆಳಕಾಗುವಾಗಲೋ ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲದ ಕಾರಣ ಎಚ್ಚರವಾಗಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಯಜಮಾನನು ಸಂಜೆಯಲ್ಲೋ ಮಧ್ಯರಾತ್ರಿಯಲ್ಲೋ ಕೋಳಿ ಕೂಗುವಾಗಲೋ ಬೆಳಕು ಹರಿಯುವಾಗಲೋ, ಯಾವಾಗ ಬರುವನೆಂಬುದು ನಿಮಗೆ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಯಾವಾಗಲೂ ಸಿದ್ಧವಾಗಿರಿ. ಮನೆಯ ಯಜಮಾನನು ಯಾವಾಗ ಹಿಂತಿರುಗಿ ಬರುವನೋ ನಿಮಗೆ ತಿಳಿದಿಲ್ಲ. ಅವನು ಮಧ್ಯಾಹ್ನದಲ್ಲಾಗಲಿ ಮಧ್ಯರಾತ್ರಿಯಲ್ಲಾಗಲಿ ಮುಂಜಾನೆಯಲ್ಲಾಗಲಿ ಸೂರ್ಯೋದಯದಲ್ಲಾಗಲಿ ಬರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 “ಆದ್ದರಿಂದ ಜಾಗರೂಕರಾಗಿರಿ. ಮನೆಯಜಮಾನನು ಸಂಜೆಯಲ್ಲಿಯೋ ಮಧ್ಯರಾತ್ರಿಯಲ್ಲಿಯೋ ಹುಂಜ ಕೂಗುವಾಗಲೋ ಬೆಳಕಾಗುವಾಗಲೋ, ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 “ಕನ್ನಾಬಿ ತಯಾರಿತ್ ರ್‍ಹಾವಾ, ಕಶ್ಯಾಕ್ ಮಟ್ಲ್ಯಾರ್ ಘರ್ಚೊ ವಡಿಲ್ ಕನ್ನಾ ಯೆತಾ ಮನುನ್ ತುಮ್ಕಾ ಗೊತ್ತ್ ನಾ, ಎಕ್ ಎಳಾರ್ ಸಾಂಚೆಕ್ಡೆ ರ್‍ಹಾವ್ಕ್ ಫಿರೆ, ನಾಹೊಲ್ಯಾರ್ ಅರ್ದ್ಯಾ ರಾತ್ತಿನ್ ರ್‍ಹಾವ್ಕ್ ಫಿರೆ, ನಾಹೊಲ್ಯಾರ್ ನಸ್ಕಾತ್ ನಾಹೊಲ್ಯಾರ್ ಸಕ್ಕಾಳ್ಚೆ ರಾವ್ಕ್ ಫಿರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 13:35
8 ತಿಳಿವುಗಳ ಹೋಲಿಕೆ  

ಆ ಕಾಲವು ಯಾವಾಗ ಬರುವದೋ ನಿಮಗೆ ಗೊತ್ತಿಲ್ಲವಾದ್ದರಿಂದ ನೋಡಿಕೊಳ್ಳಿರಿ, ಜಾಗರೂಕರಾಗಿರಿ.


ಹೀಗಿರಲಾಗಿ ನಿಮ್ಮ ಕರ್ತನು ಬರುವ ದಿನವು ನಿಮಗೆ ಗೊತ್ತಿಲ್ಲವಾದದರಿಂದ ಎಚ್ಚರವಾಗಿರ್ರಿ.


ಆದಕಾರಣ ನೀವು ಸಹ ಸಿದ್ಧವಾಗಿರ್ರಿ; ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ.


ಯೇಸು - ನಿನಗೆ ಸತ್ಯವಾಗಿ ಹೇಳುತ್ತೇನೆ, ಈ ಹೊತ್ತು ಈ ರಾತ್ರಿಯಲ್ಲಿಯೇ ಕೋಳಿ ಎರಡು ಸಾರಿ ಕೂಗುವದಕ್ಕಿಂತ ಮುಂಚೆ ನೀನು ನನ್ನ ವಿಷಯದಲ್ಲಿ - ಅವನನ್ನು ಅರಿಯೆನೆಂಬದಾಗಿ ಮೂರು ಸಾರಿ ಹೇಳುವಿ ಅಂದನು.


ಎದುರು ಗಾಳಿ ಬೀಸುತ್ತಿದ್ದದರಿಂದ ಶಿಷ್ಯರು ಹುಟ್ಟು ಹಾಕಿ ಹಾಕಿ ಒದ್ದಾಡುವದನ್ನು ಆತನು ಕಂಡು ಹೆಚ್ಚುಕಡಿಮೆ ರಾತ್ರಿಯ ನಾಲ್ಕನೆಯ ಜಾವದಲ್ಲಿ ಸಮುದ್ರದ ಮೇಲೆ ನಡೆದು ಅವರ ಕಡೆಗೆ ಬಂದು ಅವರನ್ನು ದಾಟಿ ಮುಂದಕ್ಕೆ ಹೋಗಬೇಕೆಂದಿದ್ದನು.


ರಾತ್ರಿಯ ನಾಲ್ಕನೆಯ ಜಾವದಲ್ಲಿ ಯೇಸು ಸಮುದ್ರದ ಮೇಲೆ ನಡೆದು ಅವರ ಕಡೆಗೆ ಬಂದನು.


ಕಳ್ಳನು ಬರುವ ಜಾವ ಮನೆಯ ಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು ತನ್ನ ಮನೆಗೆ ಕನ್ನಾಹಾಕಗೊಡಿಸುತ್ತಿರಲಿಲ್ಲವೆಂದು ತಿಳುಕೊಳ್ಳಿರಿ.


ನಾನು ನಿಮಗೆ ಹೇಳಿದ್ದನ್ನು ಎಲ್ಲರಿಗೂ ಹೇಳುತ್ತೇನೆ, ಎಚ್ಚರವಾಗಿರಿ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು