Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 13:9 - ಕನ್ನಡ ಸತ್ಯವೇದವು J.V. (BSI)

9 ಆದರೆ ನಿಮ್ಮ ವಿಷಯದಲ್ಲಿ ನೋಡಿಕೊಳ್ಳಿರಿ. ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳಕೊಂಡುಹೋಗುವರು; ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು; ನನ್ನ ನಿವಿುತ್ತವಾಗಿ ನಿಮ್ಮನ್ನು ಅಧಿಪತಿಗಳ ಮುಂದೆಯೂ ಅರಸುಗಳ ಮುಂದೆಯೂ ಸಾಕ್ಷಿಗಳಾಗಿ ನಿಲ್ಲಿಸುವರು. ಹೀಗೆ ಅವರಿಗೆ ಸಾಕ್ಷಿಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ಆದರೆ ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಜನರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳೆದುಕೊಂಡು ಹೋಗುವರು. ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು, ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸುಗಳ ಮುಂದೆ ಅವರಿಗೆ ಸಾಕ್ಷಿಗಳಾಗಿ ನಿಲ್ಲಿಸುವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ನಿಮ್ಮ ವಿಷಯದಲ್ಲೂ ಎಚ್ಚರಿಕೆಯಿಂದಿರಿ. ನಿಮ್ಮನ್ನು ನ್ಯಾಯಸ್ಥಾನಗಳಿಗೆ ಎಳೆಯುವರು; ಪ್ರಾರ್ಥನಾಮಂದಿರಗಳಲ್ಲಿ ಹೊಡೆಯುವರು. ನನ್ನ ನಿಮಿತ್ತ ನೀವು ಅಧಿಕಾರಿಗಳ ಮತ್ತು ಅರಸರ ಮುಂದೆ ನಿಲ್ಲಬೇಕಾಗುವುದು. ಅವರ ಮುಂದೆ ನೀವು ನನಗೆ ಸಾಕ್ಷಿಗಳಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಎಚ್ಚರಿಕೆಯಿಂದಿರಿ! ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರು ನಿಮ್ಮನ್ನು ಬಂಧಿಸಿ, ನ್ಯಾಯವಿಚಾರಣೆಗೆ ಕೊಂಡೊಯ್ಯುವರು. ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು. ರಾಜರ ಮತ್ತು ಅಧಿಪತಿಗಳ ಮುಂದೆ ನಿಮ್ಮನ್ನು ನಿಲ್ಲಿಸಿ ನನ್ನ ವಿಷಯದಲ್ಲಿ ಸಾಕ್ಷಿಕೊಡಲು ನಿಮ್ಮನ್ನು ಬಲವಂತಪಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಜನರು ನಿಮ್ಮನ್ನು ನ್ಯಾಯಸ್ಥಾನಗಳಿಗೆ ಒಪ್ಪಿಸುವರು, ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು. ನನ್ನ ನಿಮಿತ್ತವಾಗಿ ಅಧಿಕಾರಿಗಳ ಮತ್ತು ಅರಸರ ಮುಂದೆ ನಿಲ್ಲಿಸುವರು. ಹೀಗೆ ಇದು ಅವರಿಗೆ ಸಾಕ್ಷಿಯಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಅನಿ ತುಮಿ ಉಶಾರ್ಕಿನ್ ರ್‍ಹಾವಾ! ತುಮಿ ಮಾಜ್ಯಾ ಫಾಟ್ನಾ ಹಾಸಿ ಮನುನ್ ಲೊಕಾ ತುಮ್ಕಾ ಧರುನ್ ನ್ಯಾಯ್ ಕರ್‍ತಲ್ಯಾ ಜಾಗ್ಯಾಕ್ ಘೆವ್ನ್ ಜಾತ್ಯಾತ್, ತೆಂಚ್ಯಾ ಸಿನಾಗೊಗಾತ್ನಿ ನ್ಹೆವ್ನ್ ಮಾರುಕ್ ಲಾವ್ತ್ಯಾತ್, ಮಾಜ್ಯಾ ಬದಲ್ ಸಾಕ್ಷಿ ಸಾಂಗುಕ್ ಮನುನ್ ಅದಿಕಾರ್‍ಯಾಂಚ್ಯಾ ಅನಿ ರಾಜಾಂಚ್ಯಾ ಇದ್ರಾಕ್ ತುಮ್ಕಾ ಇಬೆ ಕರ್‍ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 13:9
37 ತಿಳಿವುಗಳ ಹೋಲಿಕೆ  

ನಿಮಗೆ ಬಹಿಷ್ಕಾರ ಹಾಕುವರು; ಅದಲ್ಲದೆ ನಿಮ್ಮನ್ನು ಕೊಲ್ಲುವವನು ತಾನು ದೇವರಿಗೆ ಯಜ್ಞವನ್ನು ಮಾಡಿದ್ದೇನೆಂದು ನೆನಸುವ ಕಾಲ ಬರುತ್ತದೆ.


ಯೇಸು ಅವರಿಗೆ ಹೇಳಿದ್ದೇನಂದರೆ - ಯಾರಾದರೂ ನಿಮ್ಮನ್ನು ಮೋಸಗೊಳಿಸಾರು ನೋಡಿಕೊಳ್ಳಿರಿ.


ಹದವಾದ ಇಬ್ಬಾಯಿಕತ್ತಿಯನ್ನು ಹಿಡಿದಾತನು ಹೇಳುವದೇನಂದರೆ - ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು; ಅದು ಸೈತಾನನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ಬಿಡದೇ ಹಿಡಿದುಕೊಂಡಿದ್ದೀ; ನೀನು ಇರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತನೂ ಸಾಕ್ಷಿಯೂ ಆದ ಅಂತಿಪನು ಕೊಲ್ಲಲ್ಪಟ್ಟ ದಿನಗಳಲ್ಲಿಯಾದರೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ಮರೆಮಾಡಲಿಲ್ಲ.


ನಿನಗೆ ಸಂಭವಿಸುವದಕ್ಕಿರುವ ಬಾಧೆಗಳಿಗೆ ಹೆದರಬೇಡ. ಇಗೋ ನೀವು ದುಷ್ಪ್ರೇರಣೆಗೆ ಒಳಗಾಗುವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವದಕ್ಕಿದ್ದಾನೆ; ಮತ್ತು ಹತ್ತು ದಿವಸಗಳ ತನಕ ನಿಮಗೆ ಸಂಕಟವಿರುವದು. ನೀನು ಸಾಯಬೇಕಾದರೂ ನಂಬಿಗಸ್ತನಾಗಿರು; ನಾನು ನಿನಗೆ ಜೀವವೆಂಬ ಜಯಮಾಲೆಯನ್ನು ಕೊಡುವೆನು.


ನಿಮ್ಮ ಸಹೋದರನೂ ಯೇಸುವಿನ ನಿವಿುತ್ತ ಹಿಂಸೆಯಲ್ಲಿಯೂ ರಾಜ್ಯದಲ್ಲಿಯೂ ತಾಳ್ಮೆಯಲ್ಲಿಯೂ ನಿಮ್ಮೊಂದಿಗೆ ಪಾಲುಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರವೂ ಯೇಸುವಿನ ವಿಷಯವಾದ ಸಾಕ್ಷಿಗೋಸ್ಕರವೂ ಪತ್ಮೊಸ್ ದ್ವೀಪದಲ್ಲಿದ್ದೆನು.


ದೇವರು ನ್ಯಾಯವಾದ ತೀರ್ಪುಮಾಡುತ್ತಾನೆಂಬದಕ್ಕೆ ನಿಮ್ಮ ತಾಳ್ಮೆಯು ಸ್ಪಷ್ಟವಾದ ನಿದರ್ಶನವಾಗಿದೆ. ಯಾವ ದೇವರಾಜ್ಯಕ್ಕೋಸ್ಕರ ನೀವು ಕಷ್ಟವನ್ನನುಭವಿಸುತ್ತೀರೋ ಅದಕ್ಕೆ ನೀವು ಯೋಗ್ಯರಾಗಬೇಕೆಂಬದೇ ದೇವರ ಅಭಿಪ್ರಾಯ.


ಹೇಗಂದರೆ ಕ್ರಿಸ್ತನ ಮೇಲೆ ನಂಬಿಕೆಯಿಡುವದೂ ಆತನಿಗೋಸ್ಕರ ಬಾಧೆಯನ್ನನುಭವಿಸುವದೂ ನಿಮಗೆ ಅನುಗ್ರಹವಾಗಿ ದೊರೆಯಿತು.


ಪೌಲನ ನಡುಕಟ್ಟನ್ನು ತೆಗೆದು ತನ್ನ ಕೈಕಾಲುಗಳನ್ನು ಕಟ್ಟಿಕೊಂಡು - ಈ ನಡುಕಟ್ಟು ಯಾವನದೋ ಆ ಮನುಷ್ಯನನ್ನು ಯೆಹೂದ್ಯರು ಇದೇ ರೀತಿಯಾಗಿ ಯೆರೂಸಲೇವಿುನಲ್ಲಿ ಕಟ್ಟಿ ಅನ್ಯಜನರ ಕೈಗೆ ಒಪ್ಪಿಸಿಕೊಡುವರು, ಹೀಗೆ ಪವಿತ್ರಾತ್ಮನು ಹೇಳುತ್ತಾನೆಂಬದಾಗಿ ಹೇಳಿದನು.


ಅವನು ನನ್ನ ಹೆಸರಿನ ನಿವಿುತ್ತ ಎಷ್ಟು ಹಿಂಸೆ ಅನುಭವಿಸಬೇಕೆಂಬದನ್ನು ನಾನೇ ಅವನಿಗೆ ತೋರಿಸುವೆನು ಎಂದು ಹೇಳಿದನು.


ಈ ಮಾತುಗಳನ್ನು ಕೇಳಿ ಅವರು ರೌದ್ರಮನಸ್ಸುಳ್ಳವರಾಗಿ ಅವನ ಮೇಲೆ ಹಲ್ಲು ಕಡಿದರು.


ದಣಿಗಿಂತ ಆಳು ದೊಡ್ಡವನಲ್ಲವೆಂಬದಾಗಿ ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಳ್ಳಿರಿ. ಅವರು ನನ್ನನ್ನು ಹಿಂಸೆಪಡಿಸಿದರೆ ನಿಮ್ಮನ್ನು ಸಹ ಹಿಂಸೆಪಡಿಸುವರು; ಅವರು ನನ್ನ ಮಾತನ್ನು ಕೈಕೊಂಡು ನಡೆದರೆ ನಿಮ್ಮ ಮಾತನ್ನು ಸಹ ಕೈಕೊಂಡು ನಡೆಯುವರು.


ಮತ್ತು ಯಾವ ಊರಿನವರಾದರೂ ನಿಮ್ಮನ್ನು ಸೇರಿಸಿಕೊಳ್ಳದೆ ಹೋದರೆ ಆ ಊರನ್ನು ನೀವು ಬಿಟ್ಟು ಹೊರಡುವಾಗ ನಿಮ್ಮ ಕಾಲಿಗೆ ಹತ್ತಿದ ಧೂಳನ್ನು ಝಾಡಿಸಿ ಬಿಡಿರಿ; ಅದು ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರಲಿ ಅಂದನು.


ಮತ್ತು ಯಾವ ಸ್ಥಳದವರಾದರೂ ನಿಮ್ಮನ್ನು ಸೇರಿಸಿಕೊಳ್ಳದೆಯೂ ನೀವು ಹೇಳುವದನ್ನು ಕೇಳದೆಯೂ ಹೋದರೆ ಆ ಸ್ಥಳದಿಂದ ಹೊರಟುಹೋಗುವಾಗ ನಿಮ್ಮ ಕಾಲಿಗೆ ಹತ್ತಿದ ದೂಳನ್ನು ಝಾಡಿಸಿಬಿಡಿರಿ; ಅದು ಅವರಿಗೆ ಸಾಕ್ಷಿಯಾಗಿರಲಿ ಎಂದು ಹೇಳಿದನು.


ಆದರೆ ನಾನು ನಿಮಗೆ ಹೇಳುವದೇನಂದರೆ - ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿ ಮನುಷ್ಯನು ನ್ಯಾಯವಿಚಾರಣೆಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ - ಛೀ ನೀಚಾ ಅನ್ನುವವನು ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು; ಮೂರ್ಖಾ ಅನ್ನುವವನು ಅಗ್ನಿನರಕಕ್ಕೆ ಗುರಿಯಾಗುವನು.


ಜನಕ್ಕೆ ವಿರೋಧವಾಗಿ ಜನವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಮತ್ತು ಭೂಕಂಪಗಳು ಅಲ್ಲಲ್ಲಿ ಆಗುವವು; ಬರಗಳು ಬರುವವು; ಇವೆಲ್ಲಾ [ನೂತನ ಕಾಲವು ಹುಟ್ಟುವ] ಪ್ರಸವವೇದನೆಯ ಪ್ರಾರಂಭ.


ನಾವು ಪ್ರಯಾಸಪಟ್ಟು ಮಾಡಿದವುಗಳನ್ನು ನೀವು ಕಳಕೊಳ್ಳದೆ ಪೂರ್ಣಫಲವನ್ನು ಹೊಂದುವಂತೆ ಜಾಗರೂಕರಾಗಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು