Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:35 - ಕನ್ನಡ ಸತ್ಯವೇದವು J.V. (BSI)

35 ನೆಲದ ಮೇಲೆ ಅಡ್ಡಬಿದ್ದು ಸಾಧ್ಯವಾದರೆ ಆ ಗಳಿಗೆ ತನ್ನನ್ನು ಬಿಟ್ಟುಹೋಗುವಂತೆ ದೇವರನ್ನು ಪ್ರಾರ್ಥಿಸಿ-

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಆತನು ಸ್ವಲ್ಪ ಮುಂದೆ ಹೋಗಿ ನೆಲದ ಮೇಲೆ ಬಿದ್ದು ಸಾಧ್ಯವಾದರೆ ಆ ಗಳಿಗೆಯು ತನ್ನಿಂದ ದಾಟಿಹೋಗುವಂತೆ ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಅನಂತರ ಅಲ್ಲಿಂದ ಇನ್ನೂ ಸ್ವಲ್ಪ ಮುಂದಕ್ಕೆ ಹೋಗಿ, ನೆಲಕ್ಕೆ ಕುಸಿದು, ಪ್ರಾರ್ಥಿಸುತ್ತಾ, “ಸಾಧ್ಯವಾದರೆ, ಈ ವಿಷಮ ಗಳಿಗೆಯು ನನ್ನಿಂದ ದೂರವಾಗಲಿ,” ಎಂದು ದೇವರನ್ನು ಬಿನ್ನವಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಯೇಸು ಅವರಿಂದ ಸ್ವಲ್ಪದೂರ ನಡೆದುಹೋಗಿ ನೆಲದ ಮೇಲೆ ಬೋರಲಬಿದ್ದು, ಪ್ರಾರ್ಥಿಸುತ್ತಾ “ಸಾಧ್ಯವಾದರೆ, ಈ ಸಂಕಟದ ಗಳಿಗೆ ನನಗೆ ಬಾರದಿರಲಿ” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಯೇಸು ಸ್ವಲ್ಪ ಮುಂದೆ ಹೋಗಿ ನೆಲದ ಮೇಲೆ ಬಿದ್ದು ಸಾಧ್ಯವಾದರೆ ಆ ಗಳಿಗೆಯು ತನ್ನಿಂದ ದಾಟಿ ಹೋಗುವಂತೆ ಪ್ರಾರ್ಥಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ಅನಿ ಜೆಜು ಉಲ್ಲೆ ಫಿಡೆ ಗೆಲೊ ಅನಿ ಜಿಮ್ನಿರ್ ಡಬ್ ಪಡುನ್ “ಸಾದ್ಯ್ ರ್‍ಹಾಲ್ಯಾರ್ ಹ್ಯೊ ಸಂಕಟಾಚೊ ಎಳ್ ಮಾಜೆಕ್ನಾ ದುರ್ ಕರ್” ಮನುನ್ ಮಾಗುಕ್‍ಲಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:35
14 ತಿಳಿವುಗಳ ಹೋಲಿಕೆ  

ಆತನು ಮೂರನೆಯ ಸಾರಿ ಹೋಗಿ ಬಂದು ಅವರಿಗೆ - ನೀವು ಇನ್ನೂ ನಿದ್ದೆಮಾಡಿ ದಣುವಾರಿಸಿಕೊಳ್ಳಿರಿ; ಸಾಕು;


ಆಗ ನಾಲ್ಕು ಜೀವಿಗಳು ಆಮೆನ್ ಅಂದವು; ಮತ್ತು ಹಿರಿಯರು ಅಡ್ಡಬಿದ್ದು ನಮಸ್ಕಾರ ಮಾಡಿದರು.


ಕ್ರಿಸ್ತನು ತಾನು ಭೂಲೋಕದಲ್ಲಿದ್ದಾಗ ಮರಣಕ್ಕೆ ತಪ್ಪಿಸಿ ಕಾಪಾಡ ಶಕ್ತನಾಗಿರುವಾತನಿಗೆ ಬಲವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ದೇವರ ಮೇಲಣ ಭಯಭಕ್ತಿಯ ನಿವಿುತ್ತ ಕೇಳಲ್ಪಟ್ಟನು.


ಸ್ವಲ್ಪ ಮುಂದೆ ಹೋಗಿ ಬೋರಲಬಿದ್ದು - ನನ್ನ ತಂದೆಯೇ, ಸಾಧ್ಯವಾಗಿದ್ದರೆ ಈ ಪಾತ್ರೆಯು ನನ್ನನ್ನು ಬಿಟ್ಟುಹೋಗಲಿ; ಹೇಗೂ ನನ್ನ ಚಿತ್ತದಂತಾಗದೆ ನಿನ್ನ ಚಿತ್ತದಂತೆಯೇ ಆಗಲಿ ಎಂದು ದೇವರನ್ನು ಪ್ರಾರ್ಥಿಸಿದನು.


ಇಸ್ರಾಯೇಲ್ಯರೆಲ್ಲರೂ ಬೆಂಕಿ ಇಳಿದುಬರುವದನ್ನೂ ಯೆಹೋವನ ತೇಜಸ್ಸು ಆಲಯದಲ್ಲಿರುವದನ್ನೂ ನೋಡಿ ನೆಲಗಟ್ಟಿನ ಮೇಲೆ ಸಾಷ್ಟಾಂಗವೆರಗಿ ಆರಾಧಿಸಿ - ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾಗಿದೆ ಎಂದು ಕೃತಜ್ಞತಾಸ್ತುತಿಮಾಡಿದರು.


ನೀವು ಹೀಗೆ ಅಪರಾಧಮಾಡಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡಿಸಿ ಆತನನ್ನು ಕೋಪಗೊಳಿಸಿದ ಕಾರಣ ನಾನು ಮೊದಲಿನಂತೆ ಅನ್ನಪಾನಗಳನ್ನು ಬಿಟ್ಟು ನಾಲ್ವತ್ತು ದಿನಗಳು ಹಗಲಿರುಳು ಯೆಹೋವನ ಸನ್ನಿಧಿಯಲ್ಲೇ ಬಿದ್ದಿದ್ದೆನು.


ಅಬ್ರಾಮನು ಅಡ್ಡಬೀಳಲು ದೇವರು ಅವನ ಸಂಗಡ ಮಾತಾಡಿ -


ಆ ಇಪ್ಪತ್ತುನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕೂತಾತನ ಪಾದಕ್ಕೆ ಬಿದ್ದು ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ -


ತರುವಾಯ ಶಿಷ್ಯರ ಬಳಿಗೆ ಬಂದು ಅವರಿಗೆ - ನೀವು ಇನ್ನೂ ನಿದ್ದೆಮಾಡಿ ದಣುವಾರಿಸಿಕೊಳ್ಳಿರಿ; ಇಗೋ, ಗಳಿಗೆ ಸಮೀಪಿಸಿತು, ಈಗ ಮನುಷ್ಯಕುಮಾರನು ದುರ್ಜನರ ಕೈಗೆ ಒಪ್ಪಿಸಲ್ಪಡುತ್ತಾನೆ.


ಆಮೇಲೆ ಆತನು ಅವರನ್ನು ಬಿಟ್ಟು ಕಲ್ಲೆಸುಗೆಯಷ್ಟು ದೂರ ಹೋಗಿ


ಆಗ ಯೇಸು ಅವರಿಗೆ ಉತ್ತರಕೊಟ್ಟು ಹೇಳಿದ್ದೇನಂದರೆ - ಮನುಷ್ಯಕುಮಾರನು ತನ್ನ ಮಹಿಮೆಯ ಪದವಿಯನ್ನು ಹೊಂದುವ ಸಮಯ ಬಂದದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು