Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:36 - ಕನ್ನಡ ಸತ್ಯವೇದವು J.V. (BSI)

36 ಅಪ್ಪಾ, ತಂದೆಯೇ, ನಿನಗೆ ಎಲ್ಲವೂ ಸಾಧ್ಯ; ಈ ಪಾತ್ರೆಯನ್ನು ನನ್ನಿಂದ ತೊಲಗಿಸು; ಆದರೂ ನನ್ನ ಚಿತ್ತದಂತಾಗದೆ ನಿನ್ನ ಚಿತ್ತದಂತೆಯೇ ಆಗಲಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 “ಅಪ್ಪಾ, ತಂದೆಯೇ, ನಿನಗೆ ಎಲ್ಲವೂ ಸಾಧ್ಯ. ಈ ಪಾನಪಾತ್ರೆಯನ್ನು ನನ್ನಿಂದ ತೆಗೆದುಬಿಡು ಆದರೂ ಇದು ನನ್ನ ಚಿತ್ತದಂತಲ್ಲ ನಿನ್ನ ಚಿತ್ತದಂತೆಯೇ ಆಗಲಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಅನಂತರ, “ಅಪ್ಪಾ, ಪಿತನೇ, ನಿಮಗೆ ಎಲ್ಲವೂ ಸಾಧ್ಯ. ಈ ಕಷ್ಟದ ಕೊಡವನ್ನು ನನ್ನಿಂದ ತೆಗೆದುಬಿಡಿ. ಆದರೂ ನನ್ನ ಚಿತ್ತದಂತೆ ಅಲ್ಲ, ನಿಮ್ಮ ಚಿತ್ತವಿದ್ದಂತೆಯೇ ಆಗಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಬಳಿಕ ಯೇಸು, “ಅಪ್ಪಾ, ತಂದೆಯೇ! ನಿನಗೆ ಎಲ್ಲವೂ ಸಾಧ್ಯ. ಈ ಸಂಕಟದ ಪಾತ್ರೆಯನ್ನು ನನ್ನಿಂದ ತೊಲಗಿಸು. ಆದರೆ ನನ್ನ ಚಿತ್ತದಂತೆ ಮಾಡದೆ, ನಿನ್ನ ಚಿತ್ತದಂತೆಯೇ ಮಾಡು” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 “ಅಪ್ಪಾ, ತಂದೆಯೇ, ಎಲ್ಲವೂ ನಿಮಗೆ ಸಾಧ್ಯ, ಈ ಪಾತ್ರೆಯನ್ನು ನನ್ನಿಂದ ತೆಗೆದುಬಿಡು. ಆದರೂ ನನ್ನ ಚಿತ್ತದಂತಲ್ಲ, ನಿಮ್ಮ ಚಿತ್ತದಂತೆಯೇ ಆಗಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ಜೆಜು ಮಾಗುನ್ಗೆತ್ “ಬಾಬಾ” “ಮಾಜ್ಯಾ ಬಾಬಾ! ತುಕಾ ಸಗ್ಳೆ ಸಂಗ್ತಿಯಾ ಕರುಕ್ ಸಾದ್ಯ್ ಹಾಯ್, ಹೆ ಸಂಕಟಾಚೆ ಅಯ್ದಾನ್ ಮಾಜೆಕ್ನಾ ದುರ್ ಕರ್, ಖರೆ ಮಿಯಾ ಯವಜ್ತಾ ತಸೆ ನ್ಹಯ್, ತಿಯಾ ಯವಜಲ್ಲ್ಯಾ ಸರ್ಕೆಚ್ ಕರ್” ಮನುಲಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:36
22 ತಿಳಿವುಗಳ ಹೋಲಿಕೆ  

ನೀವು ಪುತ್ರರಾಗಿರುವದರಿಂದ ದೇವರು ಅಪ್ಪಾ ತಂದೆಯೇ ಎಂದು ಕೂಗುವ ತನ್ನ ಮಗನ ಆತ್ಮನನ್ನು ನಮ್ಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು.


ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು; ತಂದೆ ಹೇಳಿದ್ದನ್ನು ಕೇಳಿ ನ್ಯಾಯತೀರಿಸುತ್ತೇನೆ; ಮತ್ತು ಸ್ವಂತ ಚಿತ್ತ ನೆರವೇರಬೇಕೆಂದು ಅಪೇಕ್ಷಿಸದೆ ನನ್ನನ್ನು ಕಳುಹಿಸಿದಾತನ ಚಿತ್ತ ನೆರವೇರಬೇಕೆಂದು ಅಪೇಕ್ಷಿಸುವದರಿಂದ ನಾನು ಮಾಡುವ ತೀರ್ಪು ನ್ಯಾಯವಾಗಿದೆ.


ನಾವು ಅಪನಂಬಿಗಸ್ತರಾಗಿದ್ದರೂ ಆತನು ನಂಬಿಗಸ್ತನಾಗಿಯೇ ಇರುವನು; ತನ್ನ ಸ್ವಭಾವಕ್ಕೆ ವಿರುದ್ಧವಾಗಿ ಏನೂ ಮಾಡಲಾರನು.


ಈಗ ನನ್ನ ಪ್ರಾಣವು ತತ್ತರಿಸುತ್ತದೆ; ಮತ್ತು ನಾನೇನು ಹೇಳಲಿ? ತಂದೆಯೇ, ಈ ಕಾಲದೊಳಗಿಂದ ನನ್ನನ್ನು ತಪ್ಪಿಸು. ಆದರೆ ಇದಕ್ಕಾಗಿಯೇ ಈ ಕಾಲ ಸೇರಿದೆನು.


ಹೀಗೆ ಆತನು ಆಕಾರದಲ್ಲಿ ಮನುಷ್ಯನಾಗಿ ಕಾಣಿಸಿಕೊಂಡಿದ್ದಾಗ ತನ್ನನ್ನು ತಗ್ಗಿಸಿಕೊಂಡು ಮರಣವನ್ನು ಅಂದರೆ ಶಿಲುಬೆಯ ಮರಣವನ್ನಾದರೂ ಹೊಂದುವಷ್ಟು ವಿಧೇಯನಾದನು.


ಆಗ ಯೇಸು ಪೇತ್ರನಿಗೆ - ಕತ್ತಿಯನ್ನು ಒರೆಯಲ್ಲಿ ಹಾಕು; ತಂದೆ ನನಗೆ ಕೊಟ್ಟಿರುವ ಪಾತ್ರೆಯಲ್ಲಿ ನಾನು ಕುಡಿಯಬಾರದೋ ಎಂದು ಹೇಳಿದನು.


ಯೇಸು ಅವರನ್ನು ದೃಷ್ಟಿಸಿ ನೋಡಿ - ಇದು ಮನುಷ್ಯರಿಗೆ ಅಸಾಧ್ಯ; ದೇವರಿಗೆ ಅಸಾಧ್ಯವಲ್ಲ; ದೇವರಿಗೆ ಎಲ್ಲವು ಸಾಧ್ಯವೇ ಅಂದನು.


ಯೇಸು ಅವರಿಗೆ - ನನ್ನನ್ನು ಕಳುಹಿಸಿದಾತನ ಚಿತ್ತದಂತೆ ಮಾಡಿ ಆತನ ಕೆಲಸವನ್ನು ಪೂರೈಸುವದೇ ನನ್ನ ಆಹಾರವು.


ಸ್ವಲ್ಪ ಮುಂದೆ ಹೋಗಿ ಬೋರಲಬಿದ್ದು - ನನ್ನ ತಂದೆಯೇ, ಸಾಧ್ಯವಾಗಿದ್ದರೆ ಈ ಪಾತ್ರೆಯು ನನ್ನನ್ನು ಬಿಟ್ಟುಹೋಗಲಿ; ಹೇಗೂ ನನ್ನ ಚಿತ್ತದಂತಾಗದೆ ನಿನ್ನ ಚಿತ್ತದಂತೆಯೇ ಆಗಲಿ ಎಂದು ದೇವರನ್ನು ಪ್ರಾರ್ಥಿಸಿದನು.


ಆದದರಿಂದ ನೀವು ಹೀಗೆ ಪ್ರಾರ್ಥನೆಮಾಡತಕ್ಕದ್ದು -


ಇಗೋ, ನಾನು ಯೆಹೋವನು, ನರಪ್ರಾಣಿಗೆಲ್ಲಾ ದೇವರು; ನನಗೆ ಅಸಾಧ್ಯವಾದದ್ದುಂಟೋ?


ನನ್ನ ದೇವರೇ, ನಿನ್ನ ಚಿತ್ತವನ್ನು ಅನುಸರಿಸುವದೇ ನನ್ನ ಸಂತೋಷವು; ನಿನ್ನ ಧರ್ಮೋಪದೇಶವು ನನ್ನ ಅಂತರಂಗದಲ್ಲಿದೆ ಅಂದೆನು.


ಯೆಹೋವನಿಗೆ ಅಸಾಧ್ಯವಾದದ್ದುಂಟೋ? ನಾನು ಹೇಳಿದಂತೆಯೇ ಬರುವ ವರುಷದ ಇದೇ ಕಾಲದಲ್ಲಿ ನಾನು ನಿನ್ನ ಬಳಿಗೆ ಬಂದಾಗ ಸಾರಳಿಗೆ ಮಗನಿರುವನು ಎಂದು ಹೇಳಿದನು.


ಆಶ್ರಯವನ್ನು ಹೊಂದಬೇಕೆಂದು ಓಡಿಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಂಡವರಾದ ನಮಗೆ ಎರಡು ನಿಶ್ಚಲವಾದ ಆಧಾರಗಳು ಇರುವ ಕಾರಣ ಬಲವಾದ ಧೈರ್ಯವುಂಟಾಯಿತು.


ತಿರಿಗಿ ಎರಡನೆಯ ಸಾರಿ ಹೋಗಿ - ನನ್ನ ತಂದೆಯೇ, ನಾನು ಕುಡಿದ ಹೊರತು ಈ ಪಾತ್ರೆ ಬಿಟ್ಟು ಹೋಗಕೂಡದಾಗಿದ್ದರೆ ನಿನ್ನ ಚಿತ್ತವೇ ಆಗಲಿ ಎಂದು ಪ್ರಾರ್ಥನೆಮಾಡಿದನು.


ಆಮೇಲೆ ಆತನು ಬಂದು ಅವರು ನಿದ್ದೆಮಾಡುವದನ್ನು ಕಂಡು ಪೇತ್ರನಿಗೆ - ಸೀಮೋನನೇ, ನಿದ್ದೆಮಾಡುತ್ತೀಯಾ? ಒಂದು ಗಳಿಗೆಯಾದರೂ ಎಚ್ಚರವಾಗಿರಲಾರೆಯಾ?


ಆಗ ಯೇಸು ಅವರಿಗೆ - ನಾನು ಕುಡಿಯುವ ಪಾತ್ರೆಯಲ್ಲಿ ಕುಡಿಯುವಿರಿ; ನನಗಾಗುವ ಸ್ನಾನವು ನಿಮಗಾಗುವದು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು