Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:44 - ಕನ್ನಡ ಸತ್ಯವೇದವು J.V. (BSI)

44 ಇದಲ್ಲದೆ ಆತನನ್ನು ಹಿಡುಕೊಡುವವನು ಅವರಿಗೆ - ನಾನು ಯಾರಿಗೆ ಮುದ್ದಿಡುತ್ತೇನೋ ಅವನೇ ಆತನು; ಅವನನ್ನು ಹಿಡಿದು ಭದ್ರವಾಗಿ ತೆಗೆದುಕೊಂಡುಹೋಗಿರಿ ಎಂದು ಗುರುತು ಹೇಳಿಕೊಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಇದಲ್ಲದೆ ಆತನನ್ನು ಹಿಡಿದುಕೊಡುವವನು ಅವರಿಗೆ, “ನಾನು ಯಾರಿಗೆ ಮುದ್ದಿಡುವೆನೊ ಅವನೇ ಆತನು! ಅವನನ್ನು ಹಿಡಿದು ಭದ್ರವಾಗಿ ಕರೆದೊಯ್ಯಿರಿ” ಎಂದು ಮೊದಲೇ ಸೂಚನೆಕೊಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 ಗುರುದ್ರೋಹಿಯಾದ ಯೂದನು ಅವರಿಗೆ, “ನಾನು ಯಾರಿಗೆ ಮುದ್ದಿಡುತ್ತೇನೋ, ಆತನೇ ಆ ವ್ಯಕ್ತಿ, ಆತನನ್ನು ಬಂಧಿಸಿ, ಭದ್ರವಾಗಿ ಕರೆದೊಯ್ಯಿರಿ,” ಎಂದು ಮೊದಲೇ ಸೂಚನೆಕೊಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಯೇಸು ಯಾರೆಂಬುದನ್ನು ಜನರಿಗೆ ತೋರಿಸಲು ಯೂದನು ಒಂದು ಉಪಾಯ ಮಾಡಿದನು. ಯೂದನು ಅವರಿಗೆ, “ನಾನು ಯಾರಿಗೆ ಮುದ್ದಿಡುತ್ತೇನೋ ಅವನೇ ಯೇಸು. ಅವನನ್ನು ಸೆರೆಹಿಡಿದು ಎಚ್ಚರಿಕೆಯಿಂದ ಕಾಯುತ್ತಾ ಕರೆದುಕೊಂಡು ಹೋಗಿರಿ!” ಎಂದು ಹೇಳಿಕೊಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಯೇಸುವಿಗೆ ದ್ರೋಹಮಾಡುವುದಕ್ಕಿದ್ದವನು ಅವರಿಗೆ, “ನಾನು ಯಾರಿಗೆ ಮುದ್ದಿಡುತ್ತೇನೋ ಆತನೇ ಯೇಸು, ಆತನನ್ನು ಹಿಡಿದು, ಭದ್ರವಾಗಿ ತೆಗೆದುಕೊಂಡು ಹೋಗಿರಿ,” ಎಂದು ಗುರುತು ಹೇಳಿಕೊಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

44 ಧರುನ್ ದಿತಲ್ಯಾನ್ ತ್ಯಾ ಲೊಕಾಕ್ನಿ ಎಕ್ ಘುರ್ತ್ ದಿಲ್ಲ್ಯಾನ್, “ಮಿಯಾ ಕೊನಾಕ್ ಉಪ್ಪಾ ದಿತಾಕಿ ತೊಚ್ ತುಮ್ಕಾ ಪಾಜೆ ಹೊಲ್ಲೊ, ತೆಕಾ ತುಮಿ ಧರಾ ಅನಿ ಉಶಾರ್ಕಿನ್ ಘೆವ್ನ್ ಜಾವಾ” ಮನುನ್ ಸಾಂಗಲ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:44
13 ತಿಳಿವುಗಳ ಹೋಲಿಕೆ  

ವಿುತ್ರನು ಮಾಡುವ ಗಾಯಗಳು ಮೇಲಿಗಾಗಿಯೇ; ಶತ್ರುವಿನ ಮುದ್ದುಗಳು ಹೇರಳವಾಗಿವೆ.


[ನೀವು ಬಾಗಲಿಗೆ ಹಚ್ಚಿದ] ಆ ರಕ್ತವು ನೀವಿರುವ ಮನೆಗಳನ್ನು ಸೂಚಿಸುವದಾದ ಕಾರಣ ನಾನು ಅದನ್ನು ಕಂಡು ನಿಮಗೆ ಯಾವ ನಷ್ಟವನ್ನೂ ಮಾಡದೆ ಮುಂದಕ್ಕೆ ದಾಟಿ ಹೋಗುವೆನು. ನಾನು ಐಗುಪ್ತದವರನ್ನು ಸಂಹರಿಸುವಾಗ ನಿಮಗೆ ಯಾವ ಹಾನಿಯೂ ಉಂಟಾಗುವದಿಲ್ಲ.


ಪೌಲನೆಂಬ ನಾನು ಸ್ವಂತ ಕೈಯಿಂದ ವಂದನೆಯನ್ನು ಬರೆದಿದ್ದೇನೆ; ಎಲ್ಲಾ ಪತ್ರಿಕೆಗಳಲ್ಲಿಯೂ ಇದೇ ಗುರುತು; ಹೀಗೆಯೇ ನನ್ನ ಕೈಬರಹ.


ನೀವು ಹೀಗಿರುವದು ವಿರೋಧಿಗಳ ನಾಶನಕ್ಕೂ ನಿಮ್ಮ ರಕ್ಷಣೆಗೂ ದೇವರಿಂದಾದ ಪ್ರಮಾಣವಾಗಿದೆ.


ಆದದರಿಂದ ಈಗ ನೀವು ನನಗೆ ನಂಬತಕ್ಕ ಒಂದು ಗುರುತು ಕೊಟ್ಟು ನಾನು ನಿಮಗೆ ದಯೆತೋರಿಸಿದಂತೆ ನೀವೂ ನನ್ನ ತಂದೆಯ ಮನೆಯವರಿಗೆ ದಯೆತೋರಿಸುವದಾಗಿಯೂ


ಅವರಿಗೆ ಬಹಳ ಪೆಟ್ಟುಗಳನ್ನು ಹೊಡಿಸಿದ ಮೇಲೆ ಸೆರೆಮನೆಯೊಳಗೆ ಹಾಕಿಸಿ - ಇವರನ್ನು ಭದ್ರವಾಗಿ ಕಾಯಬೇಕೆಂದು ಸೆರೆಯ ಯಜಮಾನನಿಗೆ ಖಂಡಿತವಾಗಿ ಹೇಳಿದರು.


ಏಳಿರಿ, ಹೋಗೋಣ; ನನ್ನನ್ನು ಹಿಡುಕೊಡುವವನು ಹತ್ತಿರಕ್ಕೆ ಬಂದಿದ್ದಾನೆ ನೋಡಿರಿ ಎಂದು ಹೇಳಿದನು.


ಆತನು ಇನ್ನೂ ಮಾತಾಡುತ್ತಿರುವಾಗಲೇ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಬಂದನು. ಮಹಾಯಾಜಕರು ಶಾಸ್ತ್ರಿಗಳು ಹಿರಿಯರು ಇವರ ಕಡೆಯಿಂದ ಒಂದು ಗುಂಪು ಕತ್ತಿದೊಣ್ಣೆಗಳನ್ನು ಹಿಡುಕೊಂಡು ಅವನ ಸಂಗಡ ಬಂತು;


ಅಲ್ಲಿಗೆ ಬಂದ ಕೂಡಲೆ ಅವನು ಯೇಸುವಿನ ಬಳಿಗೆ ಹೋಗಿ - ಗುರುವೇ ಎಂದು ಹೇಳಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು