Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:55 - ಕನ್ನಡ ಸತ್ಯವೇದವು J.V. (BSI)

55 ಆಗ ಮಹಾಯಾಜಕರೂ ಹಿರೀಸಭೆಯವರೆಲ್ಲರೂ ಯೇಸುವನ್ನು ಕೊಲ್ಲಿಸಬೇಕೆಂದು ಆತನ ಮೇಲೆ ಸಾಕ್ಷಿಯನ್ನು ಹುಡುಕಿದರು; ಆದರೆ ಏನೂ ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

55 ಆಗ ಮುಖ್ಯಯಾಜಕರು ಮತ್ತು ಹಿರೀಸಭೆಯ ಸದಸ್ಯರೆಲ್ಲರೂ ಯೇಸುವನ್ನು ಮರಣದಂಡನೆಗೆ ಗುರಿಪಡಿಸುವ ಸಲುವಾಗಿ ಆತನ ವಿರುದ್ಧವಾಗಿ ಸಾಕ್ಷಿ ಹುಡುಕುತ್ತಾ ಇದ್ದರು. ಆದರೆ ಅವರಿಗೆ ಸರಿಯಾದ ಒಂದು ಸಾಕ್ಷ್ಯವೂ ದೊರಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

55 ಇತ್ತ ಮುಖ್ಯಯಾಜಕರು ಮತ್ತು ಉಚ್ಛನ್ಯಾಯಸಭೆಯ ಸದಸ್ಯರೆಲ್ಲರೂ ಯೇಸುವನ್ನು ಮರಣದಂಡನೆಗೆ ಗುರಿಪಡಿಸುವ ಸಲುವಾಗಿ ಅವರ ವಿರುದ್ಧ ಸಾಕ್ಷಿ ಹುಡುಕುತ್ತಾ ಇದ್ದರು. ಆದರೆ ಅವರಿಗೆ ಸರಿಯಾದ ಒಂದು ಸಾಕ್ಷ್ಯವೂ ದೊರಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

55 ಮಹಾಯಾಜಕರು ಹಾಗೂ ಹಿರಿಯ ಸಭೆಯವರೆಲ್ಲರು ಆತನನ್ನು ಕೊಲ್ಲಲು ಬೇಕಾದ ಒಂದು ತಪ್ಪನ್ನು ಆತನಲ್ಲಿ ಕಂಡುಹಿಡಿಯುವುದಕ್ಕೆ ಪ್ರಯತ್ನಿಸಿದರು. ಆದರೆ ಯೇಸುವನ್ನು ಕೊಲ್ಲಲು ಸರಿಯಾದ ಯಾವುದೇ ಆಧಾರವನ್ನು ಕಂಡುಹಿಡಿಯಲು ಸಮಿತಿಗೆ ಸಾಧ್ಯವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

55 ಮುಖ್ಯಯಾಜಕರೂ ಆಲೋಚನಾ ಸಭೆಯವರೆಲ್ಲರೂ ಯೇಸುವನ್ನು ಕೊಲ್ಲಿಸಬೇಕೆಂದು ಅವರ ವಿರೋಧವಾಗಿ ಸಾಕ್ಷಿಯನ್ನು ಹುಡುಕಿದರು. ಆದರೆ ಒಂದು ಸಾಕ್ಷಿಯೂ ಸಿಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

55 ಮುಖ್ಯ ಯಾಜಕಾನಿ ಅನಿ ಸಗ್ಳ್ಯಾ ಸಬೆತ್ಲ್ಯಾನಿ ಉಲ್ಲ್ಯಾ ಸಾಕ್ಷಿಯಾಂಚ್ಯಾ ವೈನಾ ತೆಚ್ಯಾತ್ ಚುಕ್ ಹುಡ್ಕುನ್ ತೆಕಾ ಮರ್‍ನಾಚಿ ಶಿಕ್ಷಾ ದಿವ್ಕ್ ಮನುನ್ ಬಗಟ್ಲ್ಯಾನಿ, ಖರೆ ತೆಂಕಾ ಕಾಯ್ಬಿ ಗಾವುಕ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:55
13 ತಿಳಿವುಗಳ ಹೋಲಿಕೆ  

ಆದರೆ ನಾನು ನಿಮಗೆ ಹೇಳುವದೇನಂದರೆ - ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿ ಮನುಷ್ಯನು ನ್ಯಾಯವಿಚಾರಣೆಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ - ಛೀ ನೀಚಾ ಅನ್ನುವವನು ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು; ಮೂರ್ಖಾ ಅನ್ನುವವನು ಅಗ್ನಿನರಕಕ್ಕೆ ಗುರಿಯಾಗುವನು.


ಹೀಗಿರಲು ಮುಖ್ಯಾಧಿಕಾರಿಗಳೂ ದೇಶಾಧಿಪತಿಗಳೂ ರಾಜ್ಯಭಾರದ ವಿಷಯವಾಗಿ ದಾನಿಯೇಲನ ಮೇಲೆ ತಪ್ಪುಹೊರಿಸುವದಕ್ಕೆ ಸಂದರ್ಭ ಹುಡುಕುತ್ತಿದ್ದರು; ಆದರೆ ತಪ್ಪುಹೊರಿಸುವ ಯಾವ ಸಂದರ್ಭವನ್ನೂ ಯಾವ ತಪ್ಪನ್ನೂ ಕಾಣಲಾರದೆ ಹೋದರು; ಅವನು ನಂಬಿಗಸ್ತನೇ ಆಗಿದ್ದನು, ಅವನಲ್ಲಿ ಆಲಸ್ಯವಾಗಲಿ ಅಕ್ರಮವಾಗಲಿ ಸಿಕ್ಕಲಿಲ್ಲ.


ನ್ಯಾಯವಿರುದ್ಧಸಾಕ್ಷಿಗಳು ನನಗೆ ವಿರೋಧವಾಗಿ ಎದ್ದಿದ್ದಾರೆ; ನಾನರಿಯದ ಸಂಗತಿಗಳ ವಿಷಯದಲ್ಲಿ ನನ್ನನ್ನು ವಿಚಾರಿಸುತ್ತಾರೆ.


ಸುಳ್ಳುಸಾಕ್ಷಿಗಳೂ ಬೆದರಿಸುವವರೂ ನನಗೆ ವಿರೋಧವಾಗಿ ಎದ್ದಿದ್ದಾರೆ; ಇಂಥ ವೈರಿಗಳ ವಶಕ್ಕೆ ನನ್ನನ್ನು ಕೊಡಬೇಡ.


ತರುವಾಯ ಇಬ್ಬರು ದುಷ್ಟರು ಬಂದು ಅವನ ಮುಂದೆ ಕೂತು ಇವನು ದೇವರನ್ನೂ ಅರಸನನ್ನೂ ಶಪಿಸಿದ್ದಾನೆಂಬದಾಗಿ ಜನರ ಎದುರಿನಲ್ಲಿ ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಿದರು. ಜನರು ಅವನನ್ನು ಊರಿನ ಹೊರಗೆ ಒಯ್ದು ಕಲ್ಲೆಸೆದು ಕೊಂದರು.


ಅವನು ದೇವರನ್ನೂ ಅರಸನನ್ನೂ ಶಪಿಸಿದವನು ಎಂಬದಾಗಿ ಇಬ್ಬರು ದುಷ್ಟ ಮನುಷ್ಯರಿಂದ ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಿಸಿ ಅವನನ್ನು ಹೊರಗೆ ಒಯ್ದು ಕಲ್ಲೆಸೆದು ಕೊಲ್ಲಿರಿ ಎಂದು ಬರೆದಿದ್ದಳು.


ಬಹುಮಂದಿ ಬಂದು ಆತನ ಮೇಲೆ ಸುಳ್ಳುಸಾಕ್ಷಿ ಹೇಳಿದರೂ ಅವರ ಸಾಕ್ಷಿ ಒಂದಕ್ಕೊಂದು ಸರಿಬೀಳಲಿಲ್ಲ.


ಅಷ್ಟರೊಳಗೆ ಮಹಾಯಾಜಕನು ಯೇಸುವನ್ನು ಆತನ ಶಿಷ್ಯರ ವಿಷಯವಾಗಿಯೂ ಉಪದೇಶದ ವಿಷಯವಾಗಿಯೂ ವಿಚಾರಿಸಿದನು.


ನನ್ನನ್ನು ಯಾಕೆ ವಿಚಾರಿಸುತ್ತೀ? ನಾನು ಏನೇನು ಮಾತಾಡಿದೆನೋ ಅದನ್ನು ಕೇಳಿದವರಲ್ಲಿ ವಿಚಾರಿಸು; ನಾನು ಹೇಳಿದ್ದು ಇವರಿಗೆ ತಿಳಿದಿದೆಯಲ್ಲಾ ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು