Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:61 - ಕನ್ನಡ ಸತ್ಯವೇದವು J.V. (BSI)

61 ಆದರೆ ಆತನು ಸುಮ್ಮನಿದ್ದು ಏನೂ ಉತ್ತರ ಹೇಳಲಿಲ್ಲ. ತಿರಿಗಿ ಮಹಾಯಾಜಕನು - ಭಗವಂತನ ಕುಮಾರನಾದ ಕ್ರಿಸ್ತನೋ ನೀನು? ಎಂದು ಆತನನ್ನು ಕೇಳಲಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

61 ಆದರೆ ಯೇಸು ಏನೂ ಉತ್ತರ ಕೊಡದೆ ಮೌನವಾಗಿದ್ದನು. ಪುನಃ ಮಹಾಯಾಜಕನು, “ನೀನು ಕ್ರಿಸ್ತನೋ, ಸ್ತುತಿಗೆ ಪಾತ್ರನಾದ ದೇವರ ಕುಮಾರನೋ?” ಎಂದು ಆತನನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

61 ಆದರೆ ಯೇಸು ಮೌನವಾಗಿದ್ದರು. ಯಾವ ಉತ್ತರವನ್ನೂ ಕೊಡಲಿಲ್ಲ. ಪ್ರಧಾನಯಾಜಕನು ಪುನಃ, “ಸ್ತುತ್ಯ ದೇವರ ಪುತ್ರ ಹಾಗೂ ಅಭಿಷಿಕ್ತನಾದ ಲೋಕೋದ್ಧಾರಕ ನೀನೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

61 ಆದರೆ ಯೇಸು ಮೌನವಾಗಿದ್ದನು. ಯಾವ ಉತ್ತರವನ್ನೂ ಕೊಡಲಿಲ್ಲ. ಪ್ರಧಾನಯಾಜಕನು ಯೇಸುವಿಗೆ, “ಮಹಾದೇವರ ಮಗನಾದ ಕ್ರಿಸ್ತನು ನೀನೋ?” ಎಂಬ ಇನ್ನೊಂದು ಪ್ರಶ್ನೆಯನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

61 ಆದರೆ ಯೇಸು ಏನೂ ಉತ್ತರ ಕೊಡದೆ ಮೌನವಾಗಿದ್ದರು. ತಿರುಗಿ ಮಹಾಯಾಜಕನು, “ನೀನು ಭಾಗ್ಯವಂತನ ದೇವರ ಪುತ್ರನಾಗಿರುವ ಕ್ರಿಸ್ತನೋ?” ಎಂದು ಯೇಸುವನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

61 ಖರೆ ಜೆಜು ಎಕ್ಬಿ ಶಬ್ದ್ ಬೊಲಿನಸ್ತಾನಾ ಗಪ್ಪುಚ್ ಇಬೆ ರ್‍ಹಾಲೊ. ಅನಿ ಫಿಡೆ ಮಹಾಯಾಜಕಾನ್ ತೆಕಾ “ತಿಯಾ ಆರಾದನೆಕ್ ಯೊಗ್ಯ್ಅಸಲ್ಲ್ಯಾಚೊ ಲೆಕ್ ಮೆಸ್ಸಿಯಾ ಕಾಯ್?” ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:61
30 ತಿಳಿವುಗಳ ಹೋಲಿಕೆ  

ಪಿಲಾತನು ಆತನನ್ನು - ನೀನು ಯೆಹೂದ್ಯರ ಅರಸನು ಹೌದೋ ಎಂದು ಕೇಳಲು ಆತನು - ನೀನೇ ಹೇಳಿದ್ದೀ ಎಂದು ಉತ್ತರಕೊಟ್ಟನು.


ಅವನು ಬಾಧೆಗೆ ಒಳಗಾಗಿ ತನ್ನನ್ನು ತಗ್ಗಿಸಿಕೊಂಡನು, ಬಾಯಿ ತೆರೆಯಲಿಲ್ಲ; ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆಯೂ ಉಣ್ಣೆ ಕತ್ತರಿಸುವವರ ಮುಂದೆ ಮೌನವಾಗಿರುವ ಕುರಿಯ ಹಾಗೂ ಇದ್ದನು, ಬಾಯಿ ತೆರೆಯಲೇ ಇಲ್ಲ.


ಯೆಹೂದ್ಯರು ಅವನಿಗೆ - ನಮಗೆ ಒಂದು ನೇಮ ಉಂಟು, ಆ ನೇಮದ ಪ್ರಕಾರ ಇವನು ಸಾಯತಕ್ಕವನು; ಯಾಕಂದರೆ ಅವನು ತನ್ನನ್ನು ದೇವರ ಮಗನಾಗಿ ಮಾಡಿಕೊಂಡಿದ್ದಾನೆ ಎಂದು ಉತ್ತರಕೊಟ್ಟರು.


ಆತನು ಬಾಧೆಯನ್ನನುಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವಾತನಿಗೆ ತನ್ನ ಕಾರ್ಯವನ್ನು ಒಪ್ಪಿಸಿದನು.


ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ನಾನು ದೇವರ ಮಗನಾಗಿದ್ದೇನೆಂದು ಹೇಳಿದ್ದಕ್ಕೆ ನೀನು ದೇವದೂಷಣೆ ಮಾಡುತ್ತೀ ಅನ್ನುತ್ತೀರೋ?


ನಾನು ಅದನ್ನು ನೋಡಿ ಈತನೇ ದೇವಕುಮಾರನೆಂದು ಸಾಕ್ಷಿಕೊಟ್ಟಿದ್ದೇನೆ ಅಂದನು.


ನೀನು ಬರಬೇಕಾಗಿರುವ ಕ್ರಿಸ್ತನು, ಜೀವಸ್ವರೂಪನಾದ ದೇವರ ಕುಮಾರನು ಎಂದು ಉತ್ತರಕೊಟ್ಟನು.


ಅವರು - ದೇವರ ಮಗನೇ, ನಮ್ಮ ಗೊಡವೆ ನಿನಗೇಕೆ? ಕಾಲ ಬರುವದಕ್ಕಿಂತ ಮುಂಚೆ ನಮ್ಮನ್ನು ಕಾಡುವದಕ್ಕೆ ಇಲ್ಲಿಗೆ ಬಂದಿಯಾ ಎಂದು ಕೂಗಿದರು.


ಆಗ - ಈತನು ಪ್ರಿಯನಾಗಿರುವ ನನ್ನ ಮಗನು, ಈತನನ್ನು ನಾನು ಮೆಚ್ಚಿದ್ದೇನೆ ಎಂದು ಆಕಾಶವಾಣಿ ಆಯಿತು.


ಸ್ತುತಿಪಾತ್ರನಾದ ಯೆಹೋವನೇ, ನಿನ್ನ ನಿಬಂಧನೆಗಳನ್ನು ನನಗೆ ಕಲಿಸು.


ನೀನೇ ಇದನ್ನು ಬರಮಾಡಿದ್ದರಿಂದ ನಾನು ಏನೂ ಹೇಳದೆ ಮೌನವಾಗಿರುವೆನು.


ನಾನು ಯೆಹೋವನ ಆಜ್ಞೆಯನ್ನು ತಿಳಿಸುತ್ತೇನೆ, ಕೇಳಿರಿ; ಆತನು ನನಗೆ - ನನಗೆ ನೀನು ಮಗನು; ನಾನೇ ಈಹೊತ್ತು ನಿನ್ನನ್ನು ಪಡೆದಿದ್ದೇನೆ.


ಭಾಗ್ಯವಂತನಾದ ಏಕಾಧಿಪತಿಯು ತನ್ನ ಕ್ಲುಪ್ತ ಸಮಯದಲ್ಲೇ ಆತನನ್ನು ಪ್ರತ್ಯಕ್ಷಪಡಿಸುವನು. ಆ ಏಕಾಧಿಪತಿಯು ರಾಜಾಧಿರಾಜನೂ ಕರ್ತರ ಕರ್ತನೂ


ಈ ಬೋಧೆ ಭಾಗ್ಯವಂತನಾದ ದೇವರ ಮಹಿಮೆಯನ್ನು ಪ್ರದರ್ಶಿಸುವ ಸುವಾರ್ತೆಗೆ ಅನುಸಾರವಾಗಿದೆ.


ಅವನು ಓದುತ್ತಿದ್ದ ಶಾಸ್ತ್ರವಚನವು ಯಾವದಂದರೆ - ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆ ಆತನು ಒಯ್ಯಲ್ಪಟ್ಟನು; ಕುರಿಮರಿಯು ಉಣ್ಣೆ ಕತ್ತರಿಸುವವನ ಮುಂದೆ ಮೌನವಾಗಿರುವಂತೆ ಆತನು ಬಾಯಿ ತೆರೆಯಲೇ ಇಲ್ಲ.


ತಿರಿಗಿ ಅರಮನೆಯೊಳಕ್ಕೆ ಹೋಗಿ - ನೀನು ಎಲ್ಲಿಂದ ಬಂದವನು ಎಂದು ಯೇಸುವನ್ನು ಕೇಳಿದನು. ಆದರೆ ಯೇಸು ಅವನಿಗೆ ಉತ್ತರಕೊಡಲಿಲ್ಲ.


ಅದಕ್ಕೆ ಪಿಲಾತನು - ಹಾಗಾದರೆ ನೀನು ಅರಸನು ಹೌದಲ್ಲವೇ ಅಂದನು. ಯೇಸು ಅವನಿಗೆ - ನನ್ನನ್ನು ಅರಸನೆಂದು ನೀನೇ ಹೇಳಿದ್ದೀ. ನಾನು ಸತ್ಯದ ವಿಷಯದಲ್ಲಿ ಸಾಕ್ಷಿ ಹೇಳುವದಕ್ಕೋಸ್ಕರ ಹುಟ್ಟಿದವನು, ಅದಕ್ಕೋಸ್ಕರವೇ ಈ ಲೋಕಕ್ಕೆ ಬಂದಿದ್ದೇನೆ. ಸತ್ಯಪರರೆಲ್ಲರು ನನ್ನ ಮಾತಿಗೆ ಕಿವಿಕೊಡುತ್ತಾರೆ ಎಂದು ಉತ್ತರಕೊಟ್ಟನು.


ಇನ್ನು ಎಷ್ಟು ಕಾಲ ನಮ್ಮಲ್ಲಿ ಅನುಮಾನ ಹುಟ್ಟಿಸುತ್ತೀ? ನೀನು ಕ್ರಿಸ್ತನಾಗಿದ್ದರೆ ಅದನ್ನು ನಮಗೆ ಸ್ಪಷ್ಟವಾಗಿ ಹೇಳು ಅಂದರು.


ಆಗ ಮಹಾಯಾಜಕನು ಎದ್ದು ನಡುವೆ ನಿಂತು - ನೀನೇನೂ ಉತ್ತರಹೇಳುವದಿಲ್ಲವೋ? ಇವರು ನಿನ್ನ ಮೇಲೆ ಹೇಳುವ ಈ ಸಾಕ್ಷಿ ಏನು? ಎಂದು ಯೇಸುವನ್ನು ಪ್ರಶ್ನಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು