Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 15:15 - ಕನ್ನಡ ಸತ್ಯವೇದವು J.V. (BSI)

15 ಅದಕ್ಕೆ ಪಿಲಾತನು ಜನರ ಮನಸ್ಸನ್ನು ಸಮಾಧಾನಪಡಿಸಬೇಕೆಂದು ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ ಶಿಲುಬೆಗೆ ಹಾಕುವದಕ್ಕೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅದಕ್ಕೆ ಪಿಲಾತನು ಜನಸಮೂಹವನ್ನು ಮೆಚ್ಚಿಸಬೇಕೆಂದು ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ, ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಪಿಲಾತನು ಜನಸಮೂಹವನ್ನು ಮೆಚ್ಚಿಸುವ ಸಲುವಾಗಿ ಬರಬ್ಬನನ್ನು ಬಿಡುಗಡೆ ಮಾಡಿದನು. ಯೇಸುವನ್ನು ಕೊರಡೆಗಳಿಂದ ಹೊಡೆಸಿ, ಶಿಲುಬೆಗೇರಿಸುವುದಕ್ಕೆ ಒಪ್ಪಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಪಿಲಾತನು ಜನರನ್ನು ಸಂತೋಷಪಡಿಸಲು ಬಯಸಿ ಅವರಿಗಾಗಿ ಬರಬ್ಬನನ್ನು ಬಿಡುಗಡೆ ಮಾಡಿದನು ಮತ್ತು ಕೊರಡೆಗಳಿಂದ ಹೊಡೆದು ಶಿಲುಬೆಗೇರಿಸುವುದಕ್ಕಾಗಿ ಯೇಸುವನ್ನು ಸೈನಿಕರಿಗೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಪಿಲಾತನು ಜನರನ್ನು ಮೆಚ್ಚಿಸಲು ಮನಸ್ಸುಳ್ಳವನಾಗಿ ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡೆಸಿ ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಲೊಕಾಕ್ನಿ ಕುಶಿ ಕರುಕ್ ಮನುನ್ ಪಿಲಾತಾನ್ ಬಾರಾಬ್ಬಾಸಾಕ್ ತೆಂಚೆ ಸಾಟ್ನಿ ಸೊಡುನ್ ದಿಲ್ಯಾನ್. ಮಾನಾ ಜೆಜುಕ್ ಬಾರ್‍ಕೊಲಾನಿ ಮಾರುನ್ ಕುರ್ಸಾರ್ ಮಾರುಕ್ ಮನುನ್ ಸಯ್ನಿಕಾಂಚ್ಯಾ ಹಾತಾತ್ ಒಪಸ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 15:15
17 ತಿಳಿವುಗಳ ಹೋಲಿಕೆ  

ಆಮೇಲೆ ಪಿಲಾತನು ಯೇಸುವನ್ನು ಕೊರಡೆಯಿಂದ ಹೊಡಿಸಿದನು.


ಆಗ ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ ಶಿಲುಬೆಗೆ ಹಾಕುವದಕ್ಕೆ ಒಪ್ಪಿಸಿದನು.


ಹೊಡೆಯುವವರಿಗೆ ಬೆನ್ನುಕೊಟ್ಟು ಕೂದಲುಕೀಳುವವರಿಗೆ ಗಡ್ಡವನ್ನು ಒಡ್ಡಿದೆನು; ಉಗುಳಿಸಿಕೊಳ್ಳುವ ಅವಮಾನಕ್ಕೆ ನನ್ನ ಮುಖವನ್ನು ಮರೆಮಾಡಲಿಲ್ಲ.


ಇವರು ಅವನನ್ನು ಅಪಹಾಸ್ಯಮಾಡುವರು, ಅವನ ಮೇಲೆ ಉಗುಳುವರು, ಅವನನ್ನು ಕೊರಡೆಗಳಿಂದ ಹೊಡೆಯುವರು, ಕೊಂದುಹಾಕುವರು. ಅವನು ಮೂರು ದಿನದ ಮೇಲೆ ಜೀವಿತನಾಗಿ ಎದ್ದು ಬರುವನು ಎಂದು ಹೇಳಿದನು.


ಮನುಷ್ಯನ ಭಯ ಉರುಲು; ಯೆಹೋವನ ಭರವಸ ಉದ್ಧಾರ.


ಉಳುವವರು ನಮ್ಮ ಬೆನ್ನಿನ ಮೇಲೆ ಉತ್ತುತ್ತು ಉದ್ದವಾದ ಗೆರೆಗಳನ್ನು ಮಾಡಿದರು;


ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಮರಣದ ಕಂಬವನ್ನು ಏರಿದನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.


ಆಗ ಅವನು ಆತನನ್ನು ಶಿಲುಬೆಗೆ ಹಾಕಿಸುವದಕ್ಕೆ ಅವರ ವಶಕ್ಕೆ ಕೊಟ್ಟನು.


ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ; ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ.


ಕರ್ತನ ತಮ್ಮನಾದ ಯಾಕೋಬನನ್ನಲ್ಲದೆ ಅಪೊಸ್ತಲರಲ್ಲಿ ಬೇರೆ ಯಾರನ್ನೂ ಕಾಣಲಿಲ್ಲ.


ಫೆಸ್ತನು ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಿಕೊಳ್ಳಬೇಕೆಂದು ಅಪೇಕ್ಷಿಸಿ, ಪೌಲನನ್ನು - ನೀನು ಯೆರೂಸಲೇವಿುಗೆ ಹೋಗಿ ಅಲ್ಲಿ ಈ ಕಾರ್ಯಗಳ ವಿಷಯವಾಗಿ ನನ್ನ ಮುಂದೆ ವಿಚಾರಿಸಲ್ಪಡುವದಕ್ಕೆ ನಿನಗೆ ಇಷ್ಟವುಂಟೋ? ಎಂದು ಕೇಳಲು


ಎರಡು ವರುಷಗಳು ತುಂಬಿದ ಮೇಲೆ ಫೇಲಿಕ್ಸನ ಸ್ಥಾನಕ್ಕೆ ಪೋರ್ಕಿಯ ಫೆಸ್ತನು ಬಂದನು. ಫೇಲಿಕ್ಸನು ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಬೇಕೆಂಬ ಕೋರಿಕೆಯಿಂದ ಪೌಲನನ್ನು ಹಾಗೆಯೇ ಸೆರೆಯಲ್ಲಿ ಬಿಟ್ಟುಹೋದನು.


ಮತ್ತು ಮೂರನೆಯ ದಿನದಲ್ಲಿ ಅವನು ಜೀವಿತನಾಗಿ ಎದ್ದು ಬರುವನು ಎಂದು ಹೇಳಿದನು.


ಅವರು ಅವನಿಗೆ ಮರಣದಂಡನೆಯನ್ನು ವಿಧಿಸಿ ಅವನನ್ನು ಅಪಹಾಸ್ಯ ಮಾಡುವದಕ್ಕೂ ಕೊರಡೆಗಳಿಂದ ಹೊಡೆಯುವದಕ್ಕೂ ಶಿಲುಬೆಗೆ ಹಾಕುವದಕ್ಕೂ ಅನ್ಯರ ಕೈಗೆ ಒಪ್ಪಿಸುವರು; ಅವನು ಸತ್ತ ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡುವನು ಎಂದು ಹೇಳಿದನು.


ಪಿಲಾತನು - ಯಾಕೆ? ಕೆಟ್ಟದ್ದೇನು ಮಾಡಿದನು? ಅಂದನು. ಆದರೆ ಅವರು - ಅವನನ್ನು ಶಿಲುಬೆಗೆ ಹಾಕಿಸು ಎಂದು ಬಹಳವಾಗಿ ಆರ್ಭಟಿಸಿದರು.


ಆದದರಿಂದ ನಾನು ಇವನನ್ನು ಹೊಡಿಸಿ ಬಿಟ್ಟುಬಿಡುತ್ತೇನೆ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು