Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 15:21 - ಕನ್ನಡ ಸತ್ಯವೇದವು J.V. (BSI)

21 ಆಗ ಹೊಲದಿಂದ ಹೊರಟು ಆ ಮಾರ್ಗವಾಗಿ ಬರುತ್ತಿದ್ದ ಒಬ್ಬನನ್ನು ಆತನ ಶಿಲುಬೆಯನ್ನು ಹೊರುವದಕ್ಕೆ ಬಿಟ್ಟೀಹಿಡಿದರು. ಇವನು ಯಾರಂದರೆ - ಅಲೆಕ್ಸಾಂದ್ರ ರೂಫ ಎಂಬವರ ತಂದೆಯಾದ ಕುರೇನೆ ಪಟ್ಟಣದ ಸೀಮೋನನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆಗ ಹೊಲದಿಂದ ಹೊರಟು ಆ ಮಾರ್ಗವಾಗಿ ಬರುತ್ತಿದ್ದ ಒಬ್ಬನನ್ನು ಆತನ ಶಿಲುಬೆಯನ್ನು ಹೊರುವುದಕ್ಕೆ ಒತ್ತಾಯಪಡಿಸಿದರು. ಅವನು ಯಾರೆಂದರೆ, ಅಲೆಕ್ಸಾಂದ್ರ ಹಾಗೂ ರೂಫ ಎಂಬುವರ ತಂದೆಯಾದ ಕುರೇನೆ ಪಟ್ಟಣದ ಸೀಮೋನನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆಗ ಸಿರೇನ್ ಪಟ್ಟಣದ ಸಿಮೋನ ಎಂಬವನು ಹಳ್ಳಿಯ ಕಡೆಯಿಂದ ಆ ಮಾರ್ಗವಾಗಿ ಬರುತ್ತಿದ್ದನು. ಈತನು ಅಲೆಕ್ಸಾಂಡರ್ ಹಾಗೂ ರೂಫ ಎಂಬವರ ತಂದೆ. ಯೇಸುಸ್ವಾಮಿಯ ಶಿಲುಬೆಯನ್ನು ಹೊರುವಂತೆ ಸೈನಿಕರು ಅವನನ್ನು ಬಲವಂತಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆಗ ಸಿರೇನ್ ಪಟ್ಟಣದ ಸಿಮೋನ ಎಂಬವನು ಹೊಲದಿಂದ ಬರುತ್ತಿದ್ದನು. ಅವನು ಅಲೆಕ್ಸಾಂಡರ್ ಮತ್ತು ರೂಫಸ್ ಎಂಬವರ ತಂದೆ. ಸೈನಿಕರು ಯೇಸುವಿನ ಶಿಲುಬೆಯನ್ನು ಹೊರುವಂತೆ ಸಿಮೋನನನ್ನು ಬಲವಂತ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅಲೆಕ್ಸಾಂದ್ರ ಮತ್ತು ರೂಫ ಎಂಬುವರ ತಂದೆಯಾದ ಕುರೇನೆದ ಸೀಮೋನನು ಗ್ರಾಮದಿಂದ ಹಾದು ಹೋಗುತ್ತಿರುವಾಗ, ಸೈನಿಕರು ಯೇಸುವಿನ ಶಿಲುಬೆಯನ್ನು ಹೊರುವಂತೆ ಅವನನ್ನು ಬಲವಂತ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತನ್ನಾ ಸಿರೆನ್ ಮನ್ತಲ್ಯಾ ಗಾಂವಾತ್ಲೊ ಸಿಮಾವ್ ಶೆತಾಕ್ನಾ ಯೆತಾನಾ ಸಯ್ನಿಕಾನಿ ತೆಕಾ ಜೆಜುಚೊ ಕುರಿಸ್ ವಾವುನ್ ಘೆವ್ನ್ ಜಾವ್ಕ್ ಒತ್ತಾಯ್ ಕರ್‍ಲ್ಯಾನಿ ಸಿಮಾವ್, ಅಲೆಕ್ಸಾಂಡರ್ ಅನಿ ರುಫಸ್ ತೆಂಚೊ ಬಾಬಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 15:21
12 ತಿಳಿವುಗಳ ಹೋಲಿಕೆ  

ಅವರು ಆತನನ್ನು ತೆಗೆದುಕೊಂಡು ಹೋಗುತ್ತಿರುವಾಗ ಹೊಲದಿಂದ ಬರುತ್ತಿದ್ದ ಕುರೇನೆಪಟ್ಟಣದ ಸೀಮೋನನೆಂಬವನನ್ನು ಹಿಡಿದು ಶಿಲುಬೆಯನ್ನು ಅವನ ಮೇಲೆ ಇಟ್ಟು ಯೇಸುವಿನ ಹಿಂದೆ ಹೊತ್ತುಕೊಂಡು ಬರುವ ಹಾಗೆ ಮಾಡಿದರು.


ಹೊರಕ್ಕೆ ಹೋಗುತ್ತಿರುವಾಗ ಕುರೇನೆ ಪಟ್ಟಣದ ಸೀಮೋನನೆಂಬವನನ್ನು ಕಂಡು ಅವನನ್ನು ಆತನ ಶಿಲುಬೆಯನ್ನು ಹೊರುವದಕ್ಕೆ ಬಿಟ್ಟೀಹಿಡಿದರು.


ಕರ್ತನ ಭಕ್ತರಲ್ಲಿ ಪ್ರಸಿದ್ಧನಾದ ರೂಫನಿಗೂ ನನಗೆ ತಾಯಿಯಂತಿರುವ ಅವನ ತಾಯಿಗೂ ವಂದನೆಗಳು.


ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಪ್ರವಾದಿಗಳೂ ಬೋಧಕರೂ ಇದ್ದರು; ಯಾರಾರಂದರೆ - ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಉಪರಾಜನಾದ ಹೆರೋದನ ಸಾಕತಮ್ಮನಾದ ಮೆನಹೇನ, ಸೌಲ ಇವರೇ.


ಅವರಲ್ಲಿ ಕುಪ್ರದ್ವೀಪದವರು ಕೆಲವರೂ ಕುರೇನ್ಯದವರು ಕೆಲವರೂ ಅಂತಿಯೋಕ್ಯಕ್ಕೆ ಬಂದು ಗ್ರೀಕರ ಸಂಗಡಲೂ ಮಾತಾಡಿ ಕರ್ತನಾದ ಯೇಸುವಿನ ವಿಷಯವಾದ ಸುವಾರ್ತೆಯನ್ನು ತಿಳಿಸಿದರು.


ಆದರೆ ಲಿಬೆರ್ತೀನರೆಂಬವರ ಸಮಾಜದವರಲ್ಲಿಯೂ ಕುರೇನ್ಯದವರ ಮತ್ತು ಅಲೆಕ್ಸಾಂದ್ರಿಯದವರ ಸಮಾಜದವರಲ್ಲಿಯೂ ಕಿಲಿಕ್ಯ ಆಸ್ಯ ಸೀಮೆಗಳಿಂದ ಬಂದವರ ಸಮಾಜದವರಲ್ಲಿಯೂ ಕೆಲವರು ಎದ್ದು ಸ್ತೆಫನನ ಸಂಗಡ ತರ್ಕಮಾಡುತ್ತಾ ಇರಲು


ಪಂಫುಲ್ಯ, ಐಗುಪ್ತ, ಕುರೇನೆಯ ಮಗ್ಗುಲಲ್ಲಿರುವ ಲಿಬ್ಯ, ಈ ಸೀಮೆಗಳಲ್ಲಿ ವಾಸವಾಗಿರುವವರೂ ರೋಮಾಪುರದಿಂದ ಬಂದು ಇಳಿದಿರುವ ಯೆಹೂದ್ಯರೂ ಯೆಹೂದ್ಯ ಮತಾವಲಂಬಿಗಳೂ ಕ್ರೇತ್ಯರೂ


ಯಾವನಾದರೂ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆ ಬಂದ ಹೊರತು ಅವನು ನನ್ನ ಶಿಷ್ಯನಾಗಿರಲಾರನು.


ಹೀಗೆ ಆತನನ್ನು ಪರಿಹಾಸ್ಯ ಮಾಡಿದ ಮೇಲೆ ಆ ಒಲ್ಲಿಯನ್ನು ತೆಗೆದು ಆತನ ಬಟ್ಟೆಗಳನ್ನು ಹೊದಿಸಿ ಆತನನ್ನು ಶಿಲುಬೆಗೆ ಹಾಕುವದಕ್ಕೆ ತೆಗೆದುಕೊಂಡು ಹೋದರು.


ಅವರು ಯೇಸುವನ್ನು ತೆಗೆದುಕೊಂಡು ಹೋದರು; ಆತನು ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು ಕಪಾಲಸ್ಥಳವೆಂಬ ಸ್ಥಾನಕ್ಕೆ ಹೋದನು. ಇದಕ್ಕೆ ಇಬ್ರಿಯ ಮಾತಿನಲ್ಲಿ ಗೊಲ್ಗೊಥಾ ಎಂದು ಹೆಸರು.


ಒಬ್ಬನು - ಒಂದು ಮೈಲು ದೂರ ಬಾ ಎಂದು ನಿನ್ನನ್ನು ಬಿಟ್ಟೀಹಿಡಿದರೆ ಅವನ ಸಂಗಡ ಎರಡು ಮೈಲು ಹೋಗು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು