ಮಾರ್ಕ 15:32 - ಕನ್ನಡ ಸತ್ಯವೇದವು J.V. (BSI)32 ಇಸ್ರಾಯೇಲ್ಯರ ಅರಸನಾದ ಈ ಕ್ರಿಸ್ತನು ಈಗ ಶಿಲುಬೆಯಿಂದ ಇಳಿದು ಬರಲಿ; ಇಳಿದುಬಂದರೆ ನಾವು ನೋಡಿ ನಂಬೇವು ಎಂದು ತಮ್ಮತಮ್ಮೊಳಗೆ ಹಾಸ್ಯದಿಂದ ಮಾತಾಡುತ್ತಿದ್ದರು. ಆತನ ಸಂಗಡ ಶಿಲುಬೆಗೆ ಹಾಕಲ್ಪಟ್ಟವರು ಸಹ ಆತನನ್ನು ನಿಂದಿಸುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಇಸ್ರಾಯೇಲರ ಅರಸನಾದ ಈ ಕ್ರಿಸ್ತನು ಈಗ ಶಿಲುಬೆಯಿಂದ ಇಳಿದು ಬರಲಿ; ಇಳಿದು ಬಂದರೆ ನಾವು ನೋಡಿ ನಂಬುತ್ತೇವೆ” ಎಂದು ತಮ್ಮತಮ್ಮೊಳಗೆ ಅಣಕಿಸುತ್ತಾ ಮಾತನಾಡುತ್ತಿದ್ದರು. ಆತನೊಂದಿಗೆ ಶಿಲುಬೆಗೆ ಹಾಕಲ್ಪಟ್ಟವರು ಸಹ ಆತನನ್ನು ನಿಂದಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಇಸ್ರಯೇಲರ ಅರಸನಾದ ಈ ಕ್ರಿಸ್ತನು ಶಿಲುಬೆಯಿಂದ ಇಳಿದುಬರಲಿ; ಆಗ ನೋಡಿ ನಂಬುತ್ತೇವೆ,” ಎಂದು ಪರಸ್ಪರ ಮಾತನಾಡಿಕೊಂಡರು. ಯೇಸುವಿನೊಡನೆ ಶಿಲುಬೆಗೇರಿಸಲಾಗಿದ್ದವರು ಸಹ ಅವರನ್ನು ಹಂಗಿಸುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಅವನು ನಿಜವಾಗಲೂ ಇಸ್ರೇಲರ ರಾಜನಾದ ಕ್ರಿಸ್ತನಾಗಿದ್ದರೆ, ಈಗ ಶಿಲುಬೆಯಿಂದ ಕೆಳಗಿಳಿದು ಬಂದು ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ. ಆಗ ನಾವು ಅವನನ್ನು ನಂಬುತ್ತೇವೆ” ಎಂದು ಅಪಹಾಸ್ಯ ಮಾಡಿದರು. ಯೇಸುವಿನ ಪಕ್ಕದ ಶಿಲುಬೆಗಳಿಗೆ ಹಾಕಲ್ಪಟ್ಟಿದ್ದ ಕಳ್ಳರು ಸಹ ಆತನನ್ನು ಗೇಲಿಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಇಸ್ರಾಯೇಲರ ಅರಸನಾದ ಈ ಕ್ರಿಸ್ತನು ಈಗ ಶಿಲುಬೆಯಿಂದ ಇಳಿದು ಬರಲಿ; ಆಗ ನಾವು ಕಂಡು ನಂಬುತ್ತೇವೆ,” ಎಂದು ತಮ್ಮಲ್ಲಿ ಪರಸ್ಪರ ಮಾತನಾಡಿಕೊಂಡರು. ಯೇಸುವಿನೊಂದಿಗೆ ಶಿಲುಬೆಗೆ ಹಾಕಲಾಗಿದ್ದವರೂ ಅವರನ್ನು ನಿಂದಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್32 ಮೆಸ್ಸಿಯಾ, ಇಸ್ರಾಯೆಲಾಚೊ ರಾಜಾ ಅತ್ತಾ ಕುರ್ಸಾ ವೈನಾ ಉತ್ರುನ್ ಯೆಂವ್ದಿ ಬಗುವಾ, ತನ್ನಾ ತೆಚ್ಯಾ ವರ್‍ತಿ ಅಮಿ ವಿಶ್ವಾಸ್ ಥವ್ತಾವ್”. ಮಟ್ಲ್ಯಾನಿ, ಜೆಜುಚ್ಯಾ ಅಜು-ಬಾಜುಕ್ ಕುರ್ಸಾರ್ ಮಾರಲ್ಲ್ಯಾ ಚೊರಾನಿಬಿ ತಸೆಚ್ ಎಡ್ಸಡ್ಲ್ಯಾನಿ. ಅಧ್ಯಾಯವನ್ನು ನೋಡಿ |