ಮಾರ್ಕ 15:40 - ಕನ್ನಡ ಸತ್ಯವೇದವು J.V. (BSI)40-41 ಇದಲ್ಲದೆ ಅಲ್ಲಿ ಸ್ತ್ರೀಯರು ಸಹ ದೂರದಿಂದ ನೋಡುತ್ತಿದ್ದರು; ಇವರಲ್ಲಿ, ಆತನು ಗಲಿಲಾಯದಲ್ಲಿದ್ದಾಗ ಆತನನ್ನು ಹಿಂಬಾಲಿಸಿ ಸೇವೆ ಮಾಡುತ್ತಿದ್ದವರಾದ ಮಗ್ದಲದ ಮರಿಯ, ಚಿಕ್ಕ ಯಾಕೋಬನ ಮತ್ತು ಯೋಸೆಯ ತಾಯಿಯಾದ ಮರಿಯ, ಸಲೋಮೆ ಎಂಬವರೂ ಆತನ ಸಂಗಡ ಯೆರೂಸಲೇವಿುಗೆ ಬಂದಿದ್ದ ಇನ್ನೂ ಅನೇಕ ಸ್ತ್ರೀಯರೂ ಇದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940-41 ಇದಲ್ಲದೆ ಅಲ್ಲಿ ಸ್ತ್ರೀಯರು ಸಹ ದೂರದಿಂದ ನೋಡುತ್ತಿದ್ದರು. ಅವರಲ್ಲಿ, ಆತನು ಗಲಿಲಾಯದಲ್ಲಿದ್ದಾಗ ಆತನನ್ನು ಹಿಂಬಾಲಿಸಿ ಸೇವೆಮಾಡುತ್ತಿದ್ದವರಾದ ಮಗ್ದಲದ ಮರಿಯಳು, ಚಿಕ್ಕ ಯಾಕೋಬನ ಮತ್ತು ಯೋಸೆಯನ ತಾಯಿಯಾದ ಮರಿಯಳು, ಸಲೋಮೆ ಎಂಬುವರು ಹಾಗೂ ಆತನ ಸಂಗಡ ಯೆರೂಸಲೇಮಿಗೆ ಬಂದಿದ್ದ ಇನ್ನೂ ಅನೇಕ ಸ್ತ್ರೀಯರು ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ಇದನ್ನೆಲ್ಲಾ ದೂರದಿಂದ ನೋಡುತ್ತಿದ್ದ ಕೆಲವು ಮಹಿಳೆಯರಲ್ಲಿ ಮಗ್ದಲದ ಮರಿಯಳು, ಚಿಕ್ಕ ಯಕೋಬ ಮತ್ತು ಯೋಸೆಯ ತಾಯಿ ಮರಿಯಳು ಹಾಗೂ ಸಲೋಮೆ ಇದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್40 ಕೆಲವು ಸ್ತ್ರೀಯರು ಶಿಲುಬೆಯಿಂದ ದೂರದಲ್ಲಿ ನಿಂತುಕೊಂಡು ನೋಡುತ್ತಾ ಇದ್ದರು. ಈ ಸ್ತ್ರೀಯರಲ್ಲಿ ಕೆಲವರೆಂದರೆ, ಮಗ್ದಲದ ಮರಿಯಳು, ಸಲೋಮೆ ಮತ್ತು ಯಾಕೋಬ ಯೋಸೆಯರ ತಾಯಿಯಾದ ಮರಿಯಳು (ಯಾಕೋಬನು ಅವಳ ಕಿರಿಯ ಮಗ.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ಅಲ್ಲಿ ಸ್ತ್ರೀಯರು ದೂರದಿಂದ ನೋಡುತ್ತಿದ್ದರು. ಅವರಲ್ಲಿ ಮಗ್ದಲದ ಮರಿಯಳು, ಚಿಕ್ಕ ಯಾಕೋಬನ ಮತ್ತು ಯೋಸೆಯ ತಾಯಿ ಮರಿಯಳು, ಸಲೋಮೆಯು ಇದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್40 ಎಕ್ ಉಲ್ಲ್ಯಾ ಬಾಯ್ಕೊಮನ್ಸಾ ಉಲ್ಲೆಸೆ ದುರ್ ಇಬೆ ರವ್ನ್ ಬಗುನ್ಗೆತ್ ಹೊತ್ತ್ಯಾ, ಮರಿ ಮಾಗ್ದೆಲಿನ್, ಜಾಕೊಬ್ ಅನಿ ಜೊಸೆಂಚಿ ಬಾಯ್ ಮರಿ ಜಾಕೊಬ್ ತಿಚೊ ಧಾಕ್ಲೊ ಲೆಕ್ ಅನಿ ಸಲೊಮಿ. ಅಧ್ಯಾಯವನ್ನು ನೋಡಿ |