ಮಾರ್ಕ 16:14 - ಕನ್ನಡ ಸತ್ಯವೇದವು J.V. (BSI)14 ತರುವಾಯ ಹನ್ನೊಂದು ಮಂದಿ ಶಿಷ್ಯರು ಊಟಕ್ಕೆ ಕೂತಿದ್ದಾಗ ಆತನು ಅವರಿಗೂ ಕಾಣಿಸಿಕೊಂಡನು. ತಾನು ಜೀವಿತನಾಗಿ ಎದ್ದು ಬಂದ ಮೇಲೆ ತನ್ನನ್ನು ಕಂಡವರ ಮಾತನ್ನು ಅವರು ನಂಬಲಿಲ್ಲವಾದ ಕಾರಣ ಆತನು ಅವರ ಅಪನಂಬಿಕೆಗೂ ಅವರ ಮನಸ್ಸಿನ ಕಾಠಿಣ್ಯಕ್ಕೂ ಅವರನ್ನು ಗದರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅನಂತರ ಹನ್ನೊಂದು ಮಂದಿ ಶಿಷ್ಯರು ಊಟಕ್ಕೆ ಕುಳಿತಿದ್ದಾಗ ಆತನು ಅವರಿಗೂ ಕಾಣಿಸಿಕೊಂಡನು. ತಾನು ಜೀವಿತನಾಗಿ ಎದ್ದು ಬಂದ ಮೇಲೆ ತನ್ನನ್ನು ನೋಡಿದವರ ಮಾತನ್ನು ಅವರು ನಂಬಲಿಲ್ಲವಾದ ಕಾರಣ ಆತನು ಅವರ ಅಪನಂಬಿಕೆಗೂ ಅವರ ಮನಸ್ಸಿನ ಕಾಠಿಣ್ಯಕ್ಕೂ ಅವರನ್ನು ಗದರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅನಂತರ, ಹನ್ನೊಂದು ಮಂದಿ ಶಿಷ್ಯರು ಊಟಮಾಡುತ್ತಿದ್ದಾಗ ಯೇಸುಸ್ವಾಮಿ ಪ್ರತ್ಯಕ್ಷರಾದರು. ತಾವು ಪುನರುತ್ಥಾನ ಹೊಂದಿದ ಮೇಲೆ, ತಮ್ಮನ್ನು ಕಂಡವರ ಮಾತನ್ನು ಅವರು ನಂಬದಿದ್ದ ಕಾರಣ ಅವರ ಅವಿಶ್ವಾಸವನ್ನೂ ಹೃದಯ ಕಾಠಿಣ್ಯವನ್ನೂ ಯೇಸು ಖಂಡಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನಂತರ ಹನ್ನೊಂದು ಜನ ಶಿಷ್ಯರು ಊಟ ಮಾಡುತ್ತಿರುವಾಗ, ಯೇಸು ಅವರಿಗೆ ಕಾಣಿಸಿಕೊಂಡನು. ಶಿಷ್ಯರಲ್ಲಿ ಕೊಂಚ ನಂಬಿಕೆ ಇದ್ದುದರಿಂದ ಯೇಸು ಅವರನ್ನು ಖಂಡಿಸಿದನು. ಏಕೆಂದರೆ, ಯೇಸು ಸಾವಿನಿಂದ ಎದ್ದುಬಂದಿದ್ದಾನೆಂದು ದೃಢವಾಗಿ ಹೇಳಿದ ಮಾತನ್ನು ಅವರು ನಂಬಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ತರುವಾಯ ಊಟಕ್ಕೆ ಕುಳಿತಿದ್ದ ಹನ್ನೊಂದು ಮಂದಿಗೆ ಯೇಸು ಕಾಣಿಸಿಕೊಂಡರು. ತಾವು ಜೀವಿತರಾಗಿ ಎದ್ದು ಬಂದ ಮೇಲೆ ತಮ್ಮನ್ನು ಕಂಡವರ ಮಾತನ್ನು ಅವರು ನಂಬದಿದ್ದ ಕಾರಣ ಅವರ ಅಪನಂಬಿಕೆಯನ್ನೂ ಹೃದಯದ ಕಾಠಿಣ್ಯವನ್ನೂ ಯೇಸು ಗದರಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಆಕ್ರಿಕ್ ಅಕ್ರಾ ಜಾನಾ ಶಿಸಾ ಜೆವ್ತಾನಾ ಜೆಜು ತೆಂಕಾ ದಿಸ್ಲೊ, ಅನಿ ತೆಂಕಾ ಜೊರ್ ಕರ್‍ಲ್ಯಾನ್, ಕಶ್ಯಾಕ್ ಮಟ್ಲ್ಯಾರ್ ತೆಂಚ್ಯಾತ್ಲ್ಯಾನಿ ತೆಕಾ ಝಿತ್ತೊ ಹೊತ್ತೊ ಬಗಟಲ್ಲ್ಯಾನಿ, ಜಾಲ್ಯಾರ್‍ಬಿ ತೆಂಚಿ ಕಾಳ್ಜಾ ವಿಶ್ವಾಸ್ ಕರಿನಸ್ತಾನಾ ರಾವ್ಕ್ ಸರ್ಕಿ ಘಟ್ ಹೊಲ್ಲಿ. ಅಧ್ಯಾಯವನ್ನು ನೋಡಿ |