Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 16:2 - ಕನ್ನಡ ಸತ್ಯವೇದವು J.V. (BSI)

2 ಮತ್ತು ವಾರದ ಮೊದಲನೆಯ ದಿನದ ಬೆಳಿಗ್ಗೆ ಹೊತ್ತು ಮೂಡುವಾಗ ಅವರು ಸಮಾಧಿಯ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಮತ್ತು ವಾರದ ಮೊದಲನೆಯ ದಿನದ ಬೆಳಿಗ್ಗೆ ಹೊತ್ತು ಮೂಡುವಾಗ ಅವರು ಸಮಾಧಿಯ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಭಾನುವಾರ ಮುಂಜಾನೆ ಬೇಗನೆ ಹೊರಟು ಸೂರ್ಯೋದಯ ಸಮಯಕ್ಕೆ ಸಮಾಧಿಯನ್ನು ತಲುಪಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ವಾರದ ಮೊದಲನೆಯ ದಿನ, ಮುಂಜಾನೆಯಲ್ಲಿಯೇ, ಅವರು ಸಮಾಧಿಗೆ ಹೊರಟರು. ಆಗ ಸೂರ್ಯೋದಯವಾಗಿದ್ದರೂ ಇನ್ನೂ ನಸುಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ವಾರದ ಮೊದಲನೆಯ ದಿನ ಮುಂಜಾನೆ ಸೂರ್ಯೋದಯವಾಗಲು ಅವರು ಸಮಾಧಿಯ ಬಳಿಗೆ ಬರುವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಅನಿ ಆಯ್ತಾರ್ ದಿಸ್; ದಿಸ್ ಉಜ್ವಾಡಲ್ಲ್ಯಾ ತನ್ನಾ ತೆನಿ ಸಮಾದಿಕ್ಡೆ ಗೆಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 16:2
6 ತಿಳಿವುಗಳ ಹೋಲಿಕೆ  

ವಾರದ ಮೊದಲನೆಯ ದಿನದಲ್ಲಿ ಮಗ್ದಲದ ಮರಿಯಳು ಮುಂಜಾನೆ ಇನ್ನೂ ಕತ್ತಲೆ ಇರುವಾಗಲೇ ಸಮಾಧಿಯ ಬಳಿಗೆ ಬಂದು ಸಮಾಧಿಯ ಕಲ್ಲು ಅಲ್ಲಿಂದ ತೆಗೆದಿರುವದನ್ನು ಕಂಡಳು.


ಆ ಸ್ತ್ರೀಯರು ಸಬ್ಬತ್‍ದಿನದಲ್ಲಿ ಧರ್ಮನಿಯಮದ ಪ್ರಕಾರ ವಿಶ್ರವಿುಸಿಕೊಂಡು ವಾರದ ಮೊದಲನೆಯ ದಿವಸದಲ್ಲಿ ಇನ್ನೂ ಮೊಬ್ಬಿರುವಾಗ ತಾವು ಸಿದ್ಧಮಾಡಿದ್ದ ಸುಗಂಧದ್ರವ್ಯಗಳನ್ನು ತೆಗೆದುಕೊಂಡು ಸಮಾಧಿಗೆ ಬಂದರು.


ಸಬ್ಬತ್‍ದಿನ ಆದ ಮೇಲೆ ವಾರದ ಮೊದಲನೆಯ ದಿವಸ ಬೆಳಗಾಗುವಾಗ ಮಗ್ದಲದ ಮರಿಯಳೂ ಆ ಬೇರೆ ಮರಿಯಳೂ ಸಮಾಧಿಯನ್ನು ನೋಡುವದಕ್ಕೆ ಬಂದರು.


ಸಬ್ಬತ್‍ದಿನ ಕಳೆದ ಮೇಲೆ, ಮಗ್ದಲದ ಮರಿಯಳೂ ಯಾಕೋಬನ ತಾಯಿ ಮರಿಯಳೂ ಸಲೋಮೆಯೂ ಆತನ ದೇಹಕ್ಕೆ ಹಚ್ಚುವದಕ್ಕಾಗಿ ಸುಗಂಧದ್ರವ್ಯಗಳನ್ನು ಕೊಂಡರು.


ಸಮಾಧಿಗೆ ಮುಚ್ಚಿದ್ದ ಕಲ್ಲು ಬಹಳ ದೊಡ್ಡದಾಗಿದ್ದದರಿಂದ ಅವರು - ಸಮಾಧಿಯ ಬಾಗಿಲಿಂದ ಆ ಕಲ್ಲನ್ನು ನಮಗೋಸ್ಕರ ಉರುಳಿಸುವವರು ಯಾರಿದ್ದಾರೆ ಎಂದು ತಮ್ಮತಮ್ಮೊಳಗೆ ಮಾತಾಡಿಕೊಳ್ಳುತ್ತಾ ಇರಲಾಗಿ


ಮಾರಣೆಯ ಬೆಳಿಗ್ಗೆ ರಾಜನು ಉದಯದಲ್ಲೇ ಎದ್ದು ಸಿಂಹಗಳ ಗವಿಯ ಬಳಿಗೆ ತ್ವರೆಯಾಗಿ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು