Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 16:5 - ಕನ್ನಡ ಸತ್ಯವೇದವು J.V. (BSI)

5 ಅವರು ಸಮಾಧಿಯೊಳಕ್ಕೆ ಹೋಗಿ ಒಬ್ಬ ಯೌವನಸ್ಥನು ಬಿಳೀ ಅಂಗಿಯನ್ನು ತೊಟ್ಟುಕೊಂಡು ಬಲಗಡೆ ಕೂತಿರುವದನ್ನು ಕಂಡು ಬೆಚ್ಚಿ ಬೆರಗಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವರು ಸಮಾಧಿಯೊಳಗೆ ಹೋಗಿ, ಒಬ್ಬ ಯೌವನಸ್ಥನು ಬಿಳಿ ನಿಲುವಂಗಿಯನ್ನು ಧರಿಸಿಕೊಂಡು ಬಲ ಭಾಗದಲ್ಲಿ ಕುಳಿತಿರುವುದನ್ನು ಕಂಡು ಬೆಚ್ಚಿಬೆರಗಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸಮಾಧಿಯೊಳಕ್ಕೆ ಪ್ರವೇಶಿಸಿ ನೋಡುವಾಗ, ಬಿಳಿಯ ಬಟ್ಟೆ ಧರಿಸಿದ್ದ ಯುವಕನೊಬ್ಬನು ಅಲ್ಲಿ ಬಲಗಡೆ ಕುಳಿತಿರುವುದನ್ನು ಕಂಡು, ಅವರು ಬೆಚ್ಚಿಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆ ಸ್ತ್ರೀಯರು ಸಮಾಧಿಯೊಳಗೆ ಹೋದಾಗ ಬಿಳುಪಾದ ನಿಲುವಂಗಿ ಧರಿಸಿದ್ದ ಒಬ್ಬ ಯುವಕನು ಸಮಾಧಿಯ ಬಲಗಡೆ ಕುಳಿತಿರುವುದನ್ನು ಕಂಡು ಭಯಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವರು ಸಮಾಧಿಯೊಳಕ್ಕೆ ಪ್ರವೇಶಿಸಿದಾಗ, ಬಿಳಿ ಉಡುಪನ್ನು ತೊಟ್ಟುಕೊಂಡಿದ್ದ ಒಬ್ಬ ಯುವಕನು ಬಲಗಡೆಯಲ್ಲಿ ಕುಳಿತಿರುವುದನ್ನು ಕಂಡು ಭಯಭ್ರಾಂತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತೆನಿ ಸಮಾದಿತ್ ಭುತ್ತುರ್ ಗೆಲ್ಲ್ಯಾ ತನ್ನಾ ಉಜ್ವ್ಯಾ ಬಾಜುಕ್ ಫ್ಹಾಂಡ್ರೆ ಕಪ್ಡೆ ನೆಸುನ್ ಬಸಲ್ಲೊ ಎಕ್ ದಾನ್ಡಗೊ ಮಾನುಸ್ ತೆಂಕಾ ದಿಸ್ಲೊ, ತೆಕಾ ಬಗುನ್ ತೆನಿ ಭಿಯಾಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 16:5
14 ತಿಳಿವುಗಳ ಹೋಲಿಕೆ  

ಆಗ ಸಮಾಧಿಯ ಬಳಿಗೆ ಮೊದಲು ಬಂದಿದ್ದ ಆ ಮತ್ತೊಬ್ಬ ಶಿಷ್ಯನು ಸಹ ಒಳಕ್ಕೆ ಹೋಗಿ ನೋಡಿ ನಂಬಿದನು.


ಅವನ ಮುಖಭಾವವು ವಿುಂಚಿನಂತೆ ಇತ್ತು, ಅವನ ಉಡುಪು ಹಿಮದಂತೆ ಬೆಳ್ಳಗಿತ್ತು;


ಜಕರೀಯನು ಅವನನ್ನು ಕಂಡು ತತ್ತರಗೊಂಡು ಭಯಹಿಡಿದವನಾದನು.


ಕೂಡಲೆ ಆ ಗುಂಪಿನವರೆಲ್ಲರು ಯೇಸುವನ್ನು ಕಂಡು ಬಹು ಆಶ್ಚರ್ಯಪಟ್ಟು ಆತನ ಬಳಿಗೆ ಓಡಿ ಬಂದು ಆತನನ್ನು ವಂದಿಸಿದರು.


ಆಮೇಲೆ ಅವನು ನನಗೆ - ದಾನಿಯೇಲನೇ, ಭಯಪಡಬೇಡ, ನೀನು [ದೈವಸಂಕಲ್ಪವನ್ನು] ವಿಮರ್ಶಿಸುವದಕ್ಕೂ ನಿನ್ನನ್ನು ನಿನ್ನ ದೇವರ ಮುಂದೆ ತಗ್ಗಿಸಿಕೊಳ್ಳುವದಕ್ಕೂ ಮನಸ್ಸಿಟ್ಟ ಮೊದಲನೆಯ ದಿನದಲ್ಲಿಯೇ ನಿನ್ನ ವಿಜ್ಞಾಪನೆಯು ದೇವರಿಗೆ ಮುಟ್ಟಿತು; ಆ ವಿಜ್ಞಾಪನೆಯ ನಿವಿುತ್ತವೇ ನಾನು ಬಂದೆನು.


ಅದರಂತೆ ಅವನು ನನ್ನ ಬಳಿಗೆ ಬಂದನು; ಅವನು ಬರಲು ನಾನು ಭಯಭ್ರಾಂತನಾಗಿ ಅಡ್ಡಬಿದ್ದೆನು; ನನಗೆ ಅವನು - ನರಪುತ್ರನೇ, ಇದು ಮಂದಟ್ಟಾಗಿರಲಿ, ಇದು ಅಂತ್ಯಕಾಲದಲ್ಲಿ ನೆರವೇರುವ ಕನಸು ಎಂದು ಹೇಳಿದನು.


ಅದಕ್ಕೆ ಎಲ್ಲರು ಬೆರಗಾಗಿ - ಇದೇನಿರಬಹುದು? ಇದು ಹೊಸ ಉಪದೇಶ. ಈತನು ಅಧಿಕಾರದಿಂದ ದೆವ್ವಗಳಿಗೂ ಅಪ್ಪಣೆಕೊಡುತ್ತಾನೆ; ಅವು ಆತನ ಮಾತನ್ನು ಕೇಳುತ್ತವೆ ಎಂದು ತಮ್ಮ ತಮ್ಮೊಳಗೆ ವಿಚಾರಮಾಡಿಕೊಂಡರು.


ಬೆಚ್ಚಿಬೆರಗಾಗಿ ಮನಗುಂದಿದವನಾದನು.


ತಲೆಯೆತ್ತಿ ನೋಡಿ ಆ ಕಲ್ಲು ಉರುಳಿಸಲ್ಪಟ್ಟಿರುವದನ್ನು ಕಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು