Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 16:6 - ಕನ್ನಡ ಸತ್ಯವೇದವು J.V. (BSI)

6 ಅವನು ಅವರಿಗೆ - ಬೆರಗಾಗಬೇಡಿರಿ. ಶಿಲುಬೆಗೆ ಹಾಕಲ್ಪಟ್ಟಿದ್ದ ನಜರೇತಿನ ಯೇಸುವನ್ನು ಹುಡುಕುತ್ತೀರಲ್ಲವೇ. ಆತನು ಜೀವಿತನಾಗಿ ಎದ್ದಿದ್ದಾನೆ; ಇಲ್ಲಿ ಇಲ್ಲ. ಆತನನ್ನು ಇಟ್ಟಿದ್ದ ಸ್ಥಳವು ಇದೇ, ನೋಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನು ಅವರಿಗೆ, “ಭಯಪಡಬೇಡಿರಿ, ಶಿಲುಬೆಗೆ ಹಾಕಲ್ಪಟ್ಟಿದ್ದ ನಜರೇತಿನ ಯೇಸುವನ್ನು ಹುಡುಕುತ್ತಿರಲ್ಲವೇ. ಆತನು ಇಲ್ಲಿ ಇಲ್ಲ, ಜೀವಿತನಾಗಿ ಎದ್ದಿದ್ದಾನೆ; ಆತನನ್ನು ಇಟ್ಟಿದ್ದ ಸ್ಥಳ ಇದೇ ನೋಡಿರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆತನು, “ಭಯಪಡಬೇಡಿ, ಶಿಲುಬೆಗೇರಿಸಿದ್ದ ನಜರೇತಿನ ಯೇಸುವನ್ನು ನೀವು ಹುಡುಕುತ್ತಾ ಇದ್ದೀರೆಂದು ನನಗೆ ತಿಳಿದಿದೆ. ಅವರು ಇಲ್ಲಿಲ್ಲ. ಪುನರುತ್ಥಾನ ಹೊಂದಿದ್ದಾರೆ. ನೋಡಿ, ಇದೇ ಅವರನ್ನು ಇಟ್ಟ ಸ್ಥಳ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದರೆ ಅವನು, “ಭಯಪಡಬೇಡಿ! ಶಿಲುಬೆಗೇರಿಸಲ್ಪಟ್ಟ ನಜರೇತಿನ ಯೇಸುವನ್ನು ನೀವು ಹುಡುಕುತ್ತಿದ್ದೀರಲ್ಲವೇ? ಆತನು ಜೀವಂತನಾಗಿ ಎದ್ದಿದ್ದಾನೆ. ಆತನು ಇಲ್ಲಿಲ್ಲ. ನೋಡಿರಿ, ಆತನ ದೇಹವನ್ನು ಇಟ್ಟಿದ್ದ ಸ್ಥಳ ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವನು ಅವರಿಗೆ, “ಭಯಪಡಬೇಡಿರಿ, ಶಿಲುಬೆಗೆ ಹಾಕಲಾದ ನಜರೇತಿನ ಯೇಸುವನ್ನು ಹುಡುಕುತ್ತಿದ್ದೀರೊ? ಅವರು ಜೀವಿತರಾಗಿ ಎದ್ದಿದ್ದಾರೆ! ಇಲ್ಲಿ ಇಲ್ಲ; ಅವರನ್ನು ಇಟ್ಟಿದ್ದ ಸ್ಥಳವನ್ನು ನೋಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತೆನಿ ತೆಂಕಾ “ಭಿಂವುನಕಾಶಿ, ಮಾಕಾ ಗೊತ್ತ್ ಹಾಯ್, ತುಮಿ ಹುಡಕ್ತಲೆ ಕುರ್ಸಾರ್ ಮಾರಲ್ಲ್ಯಾ ನಜರೆತಾಚ್ಯಾ ಜೆಜುಕ್, ತೊ ಹಿತ್ತೆ ನಾ, ತೊ ಝಿತ್ತೊ ಹೊವ್ನ್ ಉಟ್ಲಾ, ಹಿತ್ತೆ ಬಗಾ ತೆಕಾ ಥವಲ್ಲೊ ಜಾಗೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 16:6
23 ತಿಳಿವುಗಳ ಹೋಲಿಕೆ  

ಅವರಿಗೆ - ಕ್ರಿಸ್ತನು ಶ್ರಮೆಪಟ್ಟು ಸತ್ತು ಮೂರನೆಯ ದಿನದಲ್ಲಿ ಜೀವಿತನಾಗಿ ಎದ್ದುಬರುವನೆಂತಲೂ


ನಿಮ್ಮೆಲ್ಲರಿಗೂ ಇಸ್ರಾಯೇಲ್ ಜನರೆಲ್ಲರಿಗೂ ತಿಳಿಯಬೇಕಾದದ್ದೇನಂದರೆ - ನೀವು ಶಿಲುಬೆಗೆ ಹಾಕಿಸಿದಂಥ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂಥ ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದಲೇ ಈ ಮನುಷ್ಯನು ನಿಮ್ಮೆದುರಿನಲ್ಲಿ ಸ್ವಸ್ಥನಾಗಿ ನಿಂತಿರುತ್ತಾನೆ.


ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ, ಆತುರದಿಂದ ಹುಡುಕುವವರು ನನ್ನನ್ನು ಕಂಡುಕೊಳ್ಳುವರು.


ಆ ದೆವ್ವವು - ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡುವದಕ್ಕೆ ಬಂದೆಯಾ? ನಿನ್ನನ್ನು ಬಲ್ಲೆನು; ನೀನು ದೇವರು ಪ್ರತಿಷ್ಠಿಸಿದವನೇ ಎಂದು ಕೂಗಿ ಹೇಳಿತು.


ಅಂದರೆ ಯೋನನು ಹೇಗೆ ಮೂರು ದಿನ ರಾತ್ರಿಹಗಲು ದೊಡ್ಡ ಮೀನಿನ ಹೊಟ್ಟೆಯೊಳಗೆ ಇದ್ದನೋ, ಹಾಗೆಯೇ ಮನುಷ್ಯಕುಮಾರನು ಮೂರು ದಿನ ರಾತ್ರಿಹಗಲು ಭೂಗರ್ಭದೊಳಗೆ ಇರುವನು.


ನಮ್ಮನ್ನು ಅನೇಕ ಕಷ್ಟನಷ್ಟಗಳಿಗೆ ಗುರಿಮಾಡಿದ ನೀನೇ ಪುನಃ ಉಜ್ಜೀವಿಸಮಾಡು; ನಮ್ಮನ್ನು ಭೂವಿುಯ ಅಧೋಭಾಗದಿಂದ ಮೇಲೆತ್ತು.


ಇವರು ಅವನನ್ನು ಅಪಹಾಸ್ಯಮಾಡುವರು, ಅವನ ಮೇಲೆ ಉಗುಳುವರು, ಅವನನ್ನು ಕೊರಡೆಗಳಿಂದ ಹೊಡೆಯುವರು, ಕೊಂದುಹಾಕುವರು. ಅವನು ಮೂರು ದಿನದ ಮೇಲೆ ಜೀವಿತನಾಗಿ ಎದ್ದು ಬರುವನು ಎಂದು ಹೇಳಿದನು.


ಅದಕ್ಕೆ ಎಲ್ಲರು ಬೆರಗಾಗಿ - ಇದೇನಿರಬಹುದು? ಇದು ಹೊಸ ಉಪದೇಶ. ಈತನು ಅಧಿಕಾರದಿಂದ ದೆವ್ವಗಳಿಗೂ ಅಪ್ಪಣೆಕೊಡುತ್ತಾನೆ; ಅವು ಆತನ ಮಾತನ್ನು ಕೇಳುತ್ತವೆ ಎಂದು ತಮ್ಮ ತಮ್ಮೊಳಗೆ ವಿಚಾರಮಾಡಿಕೊಂಡರು.


ಕೂಡಲೆ ಆ ಗುಂಪಿನವರೆಲ್ಲರು ಯೇಸುವನ್ನು ಕಂಡು ಬಹು ಆಶ್ಚರ್ಯಪಟ್ಟು ಆತನ ಬಳಿಗೆ ಓಡಿ ಬಂದು ಆತನನ್ನು ವಂದಿಸಿದರು.


ಬೆಚ್ಚಿಬೆರಗಾಗಿ ಮನಗುಂದಿದವನಾದನು.


ಆತನನ್ನು ದೇವರು ಮರಣವೇದನೆಗಳಿಂದ ಬಿಡಿಸಿ ಎಬ್ಬಿಸಿದನು; ಯಾಕಂದರೆ ಮರಣವು ಆತನನ್ನು ಹಿಡುಕೊಂಡಿರುವದು ಅಸಾಧ್ಯವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು