Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 2:12 - ಕನ್ನಡ ಸತ್ಯವೇದವು J.V. (BSI)

12 ಅವನು ಎದ್ದು ಕೂಡಲೆ ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟು ಹೋದನು. ಅದಕ್ಕೆ ಎಲ್ಲರು ಬೆರಗಾಗಿ - ಇದುವರೆಗೆ ನಾವು ಇಂಥದನ್ನು ಎಂದಿಗೂ ನೋಡಿದ್ದೇ ಇಲ್ಲವೆಂದು ಹೇಳುತ್ತಾ ದೇವರನ್ನು ಕೊಂಡಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವನು ಕೂಡಲೆ ಎದ್ದು ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟುಹೋದನು. ಅದನ್ನು ನೋಡಿದವರೆಲ್ಲರು ಆಶ್ಚರ್ಯಚಕಿತರಾದರು, “ಇದುವರೆಗೆ ನಾವು ಇಂಥದನ್ನು ಎಂದಿಗೂ ನೋಡಿದ್ದೇ” ಇಲ್ಲವೆಂದು ಹೇಳುತ್ತಾ ದೇವರಿಗೆ ಮಹಿಮೆ ಸಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಎಲ್ಲರೂ ನೋಡುತ್ತಿದ್ದ ಹಾಗೆ ಅವನು ಎದ್ದುನಿಂತನು; ತನ್ನ ಹಾಸಿಗೆಯನ್ನು ತಾನೇ ಎತ್ತಿಕೊಂಡು ಹೊರಟುಹೋದನು. ನೆರೆದಿದ್ದ ಎಲ್ಲರೂ ಆಶ್ಚರ್ಯಚಕಿತರಾಗಿ, “ಇಂಥ ಕಾರ್ಯವನ್ನು ನಾವು ನೋಡಿದ್ದೇ ಇಲ್ಲ!", ಎಂದು ದೇವರನ್ನು ಕೊಂಡಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆ ಕೂಡಲೇ ರೋಗಿಯು ಎದ್ದುನಿಂತು, ತನ್ನ ಹಾಸಿಗೆಯನ್ನು ತೆಗೆದುಕೊಂಡು ಅಲ್ಲಿಂದ ಹೊರಗೆ ಹೋದನು. ಇದನ್ನು ಕಂಡ ಆ ಜನರೆಲ್ಲರೂ ಆಶ್ಚರ್ಯಚಕಿತರಾಗಿ, “ನಾವು ಹಿಂದೆಂದೂ ಇಂಥ ಸಂಗತಿಯನ್ನು ನೋಡಿಯೇ ಇಲ್ಲ” ಎಂದು ಹೇಳಿ ದೇವರನ್ನು ಕೊಂಡಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಕೂಡಲೇ ಅವನು ಎದ್ದು, ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟುಹೋದನು. ಆಗ ಎಲ್ಲರು ವಿಸ್ಮಯಗೊಂಡು, “ಇಂಥದ್ದನ್ನು ನಾವು ಹಿಂದೆಂದೂ ಕಂಡಿರಲಿಲ್ಲ!” ಎಂದು ಹೇಳುತ್ತಾ ದೇವರನ್ನು ಮಹಿಮೆಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ತನ್ನಾ ತಾಬೊಡ್ತೊಬ್ ತೊ ಮಾನುಸ್ ಉಟುನ್ ಇಬೆ ರ್‍ಹಾಲೊ, ಅನಿ ಅಪ್ನಾಚೆ ಹಾತ್ರಾನ್ ಘೆವ್ನ್ ಸಗ್ಳ್ಯಾಂಚ್ಯಾ ಇದ್ರಾಕ್ನಾಚ್ ಚಲುನ್ಗೆತ್ ಗೆಲೊ, ಹೆ ಬಗಟಲ್ಲಿ ಸಗ್ಳಿ ಲೊಕಾ ಅಜಾಪ್ ಹೊಲಿ, ಅನಿ “ದೆವಾ, ಹೆ ಕಸ್ಲೆ ಅಜಾಪ್ ಅಮಿ ಬಗಿ ಸರ್ಕೆ ಕರ್‍ಲೆ!” ಮನುನ್ ದೆವಾಕ್ ಹೊಗಳ್ಳ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 2:12
13 ತಿಳಿವುಗಳ ಹೋಲಿಕೆ  

ಆತನು ದೆವ್ವಬಿಡಿಸಿದ ಮೇಲೆ ಆ ಮೂಕನು ಮಾತಾಡುವವನಾದನು. ಅದಕ್ಕೆ ಆ ಜನರು - ಇಸ್ರಾಯೇಲ್ ಜನರಲ್ಲಿ ಇಂಥ ಕಾರ್ಯವನ್ನು ಇದುವರೆಗೆ ಯಾರೂ ನೋಡಲಿಲ್ಲವೆಂದು ಬೆರಗಾದರು.


ಜನರು ಇದನ್ನು ನೋಡಿ ಭಯಪಟ್ಟು ದೇವರು ಮನುಷ್ಯರಿಗೆ ಅಂಥ ಅಧಿಕಾರವನ್ನು ಕೊಟ್ಟದ್ದಕ್ಕೆ ಆತನನ್ನು ಕೊಂಡಾಡಿದರು.


ಎಲ್ಲರು ಭಯಹಿಡಿದವರಾಗಿ - ಮಹಾ ಪ್ರವಾದಿಯು ನಮ್ಮಲ್ಲಿ ಎದ್ದಿದ್ದಾನೆ, ದೇವರು ತನ್ನ ಜನರಿಗೆ ದರ್ಶನವನ್ನು ಅನುಗ್ರಹಿಸಿದ್ದಾನೆ ಎಂದು ದೇವರನ್ನು ಕೊಂಡಾಡುವವರಾದರು.


ನಡೆದಿದ್ದ ಕಾರ್ಯಕ್ಕೋಸ್ಕರ ಜನರೆಲ್ಲರು ದೇವರನ್ನು ಕೊಂಡಾಡುತ್ತಾ ಇದ್ದ ಕಾರಣ ಅವರ ದೆಸೆಯಿಂದ ಸಭಿಕರು ಅಪೊಸ್ತಲರನ್ನು ದಂಡಿಸತಕ್ಕ ಉಪಾಯವನ್ನು ಕಾಣದೆ ಅವರನ್ನು ಇನ್ನಷ್ಟು ಬೆದರಿಸಿ ಬಿಟ್ಟುಬಿಟ್ಟರು.


ಹುಟ್ಟುಕುರುಡನಿಗೆ ಯಾರಾದರೂ ಕಣ್ಣು ಕೊಟ್ಟ ಸಂಗತಿಯನ್ನು ಲೋಕಾದಿಯಿಂದ ಒಬ್ಬರೂ ಕೇಳಿದ್ದಿಲ್ಲ;


ಜನರಲ್ಲಿ ಅನೇಕರು ಆತನನ್ನು ನಂಬಿ - ಕ್ರಿಸ್ತನು ಬಂದಾಗ ಈತನು ಮಾಡಿದ್ದಕ್ಕಿಂತ ಹೆಚ್ಚು ಸೂಚಕಕಾರ್ಯಗಳನ್ನು ಮಾಡಾನೋ ಎಂದು ಹೇಳಿದರು.


ಅವರಲ್ಲಿ ಒಬ್ಬನು ತನಗೆ ಗುಣವಾದದ್ದನ್ನು ನೋಡಿ ಮಹಾಶಬ್ಧದಿಂದ ದೇವರನ್ನು ಕೊಂಡಾಡುತ್ತಾ ಹಿಂತಿರುಗಿ ಬಂದು


ಇಟ್ಟಕೂಡಲೆ ಆಕೆ ನೆಟ್ಟಗಾದಳು, ದೇವರನ್ನು ಕೊಂಡಾಡಿದಳು.


ನೋಡಿದವರೆಲ್ಲರು ಬೆರಗಾಗಿ ದೇವರನ್ನು ಕೊಂಡಾಡಿದರು; ಮತ್ತು ಅವರು ಭಯದಿಂದ ತುಂಬಿದವರಾಗಿ - ನಾವು ಈ ಹೊತ್ತು ಅಪೂರ್ವ ಸಂಗತಿಯನ್ನು ಕಂಡೆವು ಅಂದರು.


ಅದಕ್ಕೆ ಎಲ್ಲರು ಬೆರಗಾಗಿ - ಇದೇನಿರಬಹುದು? ಇದು ಹೊಸ ಉಪದೇಶ. ಈತನು ಅಧಿಕಾರದಿಂದ ದೆವ್ವಗಳಿಗೂ ಅಪ್ಪಣೆಕೊಡುತ್ತಾನೆ; ಅವು ಆತನ ಮಾತನ್ನು ಕೇಳುತ್ತವೆ ಎಂದು ತಮ್ಮ ತಮ್ಮೊಳಗೆ ವಿಚಾರಮಾಡಿಕೊಂಡರು.


ಮೂಕರಾಗಿದ್ದವರು ಮಾತಾಡಿದ್ದನ್ನೂ ಕೈಕಾಲಿಲ್ಲದವರು ಸ್ವಸ್ಥವಾದದ್ದನ್ನೂ ಕುಂಟರಿಗೆ ಕಾಲುಬಂದದ್ದನ್ನೂ ಕುರುಡರಿಗೆ ಕಣ್ಣು ಬಂದದ್ದನ್ನೂ ಜನರು ಕಂಡು ಆಶ್ಚರ್ಯಪಟ್ಟು ಇಸ್ರಾಯೇಲ್ ಜನರ ದೇವರನ್ನು ಕೊಂಡಾಡಿದರು.


ಅದಕ್ಕೆ ಜನರೆಲ್ಲರೂ ಬೆರಗಾಗಿ - ಈತನು ದಾವೀದಕುಮಾರನೇನು ಎಂದು ಮಾತಾಡುತ್ತಿದ್ದರು.


ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗೆಂದು ನಿನಗೆ ಹೇಳುತ್ತೇನೆ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು