ಮಾರ್ಕ 2:15 - ಕನ್ನಡ ಸತ್ಯವೇದವು J.V. (BSI)15 ಅನಂತರ ಆತನು ಅವನ ಮನೆಯೊಳಗೆ ಊಟಕ್ಕೆ ಕೂತಿರುವಲ್ಲಿ, ಬಹು ಮಂದಿ ಸುಂಕದವರೂ ಪಾಪಿಗಳೂ ಯೇಸುವಿನ ಮತ್ತು ಆತನ ಶಿಷ್ಯರ ಪಂಙ್ತಿಯಲ್ಲೇ ಕೂತುಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅನಂತರ ಯೇಸುವು ಆ ಲೇವಿಯನ ಮನೆಯೊಳಗೆ ಊಟಮಾಡುತ್ತಿರುವಾಗ, ಬಹು ಮಂದಿ ಸುಂಕದವರೂ, ಪಾಪಿಗಳೂ ಯೇಸುವಿನ ಮತ್ತು ಆತನ ಶಿಷ್ಯರ ಸಂಗಡ ಊಟಕ್ಕೆ ಕುಳಿತುಕೊಂಡರು. ಇಂಥವರಲ್ಲಿ ಬಹು ಮಂದಿ ಯೇಸುವನ್ನು ಹಿಂಬಾಲಿಸಿದವರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ತದನಂತರ ಯೇಸು ಲೇವಿಯ ಮನೆಯಲ್ಲಿ ಊಟಕ್ಕೆ ಕುಳಿತಿದ್ದರು. ಬಹುಮಂದಿ ಸುಂಕದವರು, ಪಾಪಿಷ್ಠರು, ಅಲ್ಲಿಗೆ ಬಂದರು. ಇವರೆಲ್ಲರೂ ಯೇಸು ಮತ್ತು ಅವರ ಶಿಷ್ಯರ ಪಂಕ್ತಿಯಲ್ಲೇ ಊಟಕ್ಕೆ ಕುಳಿತರು. ಇಂಥವರು ಬಹುಮಂದಿ ಯೇಸುವನ್ನು ಹಿಂಬಾಲಿಸುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಅಂದು ಸ್ವಲ್ಪ ಹೊತ್ತಾದ ಬಳಿಕ ಯೇಸು ಲೇವಿಯ ಮನೆಯಲ್ಲಿ ಊಟಮಾಡುತ್ತಿದ್ದನು. ಅಲ್ಲಿ ಅನೇಕ ಸುಂಕದ ಅಧಿಕಾರಿಗಳು ಮತ್ತು ಇತರ ಕೆಟ್ಟ ಜನರು ಸಹ ಯೇಸು ಮತ್ತು ಆತನ ಶಿಷ್ಯರ ಸಂಗಡ ಊಟಮಾಡುತ್ತಿದ್ದರು. ಈ ಜನರಲ್ಲಿ ಅನೇಕರು ಯೇಸುವಿನ ಹಿಂಬಾಲಕರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಯೇಸು ಲೇವಿಯ ಮನೆಯಲ್ಲಿ ಊಟಕ್ಕೆ ಕುಳಿತಿದ್ದಾಗ, ಬಹುಮಂದಿ ಸುಂಕದವರೂ ತಿರಸ್ಕಾರ ಹೊಂದಿದ ಪಾಪಿಗಳೂ ಬಂದು ಯೇಸುವಿನೊಂದಿಗೂ ಅವರ ಶಿಷ್ಯರೊಂದಿಗೂ ಕುಳಿತುಕೊಂಡರು. ಬಹುಜನರು ಅವರನ್ನು ಹಿಂಬಾಲಿಸುತ್ತಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಹೆಚ್ಯಾ ಮಾನಾ, ಜೆಜು ಲೆವಿಚ್ಯಾ ಘರಾತ್ ಜೆವಾನ್ ಕರುಕ್ ಲಾಗಲ್ಲೊ. ಥೈ ಸುಮಾರ್ ತೆರ್‍ಗಿ ವಸುಲಿ ಕರ್‍ತಲಿ ಲೊಕಾ ಅನಿ ಪಾಪಿ ಲೊಕಾ ಜೆಜುಚ್ಯಾ ಫಾಟ್ನಾ ಹೊತ್ತಿ. ತ್ಯಾತುರ್‍ಲಿ ಉಲ್ಲಿ ಲೊಕಾ, ಜೆಜು ಅನಿ ತೆಚ್ಯಾ ಶಿಸಾಂಚ್ಯಾ ವಾಂಗ್ಡಾ ಜೆವ್ನಾಚ್ಯಾ ಪಂಗ್ತಿರ್ ಬಸುನ್ ಜೆವಾನ್ ಕರುಕ್ ಲಾಗಲ್ಲಿ. ಅಧ್ಯಾಯವನ್ನು ನೋಡಿ |