ಮಾರ್ಕ 2:17 - ಕನ್ನಡ ಸತ್ಯವೇದವು J.V. (BSI)17 ಯೇಸು ಅದನ್ನು ಕೇಳಿ - ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ; ಕ್ಷೇಮವಿಲ್ಲದವರಿಗೆ ಬೇಕು. ನಾನು ನೀತಿವಂತರನ್ನು ಕರೆಯುವದಕ್ಕೆ ಬಂದವನಲ್ಲ, ಪಾಪಿಗಳನ್ನು ಕರೆಯುವದಕ್ಕೆ ಬಂದವನು ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಯೇಸು ಅದನ್ನು ಕೇಳಿ ಅವರಿಗೆ, “ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ; ಕ್ಷೇಮವಿಲ್ಲದವರಿಗೆ ಬೇಕು. ನಾನು ನೀತಿವಂತರನ್ನು ಕರೆಯುವುದಕ್ಕೆ ಬಂದಾತನಲ್ಲ, ಪಾಪಿಗಳನ್ನು ಕರೆಯುವುದಕ್ಕೆ ಬಂದವನು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಇದನ್ನು ಕೇಳಿಸಿಕೊಂಡ ಯೇಸು ಅವರಿಗೆ, “ವೈದ್ಯನ ಅವಶ್ಯಕತೆ ಇರುವುದು ರೋಗಿಗಳಿಗೆ, ಆರೋಗ್ಯವಂತರಿಗಲ್ಲ, ನಾನು ಕರೆಯಲು ಬಂದಿರುವುದು ಧರ್ಮಿಷ್ಠರನ್ನಲ್ಲ, ಪಾಪಿಷ್ಠರನ್ನು,” ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಬಳಿಕ ಯೇಸು ಅವರಿಗೆ, “ಆರೋಗ್ಯವಂತರಿಗೆ ವೈದ್ಯನ ಅಗತ್ಯವಿಲ್ಲ, ಆರೋಗ್ಯವಿಲ್ಲದವರಿಗೆ ವೈದ್ಯನ ಅಗತ್ಯವಿದೆ. ನಾನು ನೀತಿವಂತರನ್ನು ಕರೆಯಲು ಬರಲಿಲ್ಲ, ಪಾಪಿಗಳನ್ನು ಕರೆಯಲು ಬಂದೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಯೇಸು ಇದನ್ನು ಕೇಳಿಸಿಕೊಂಡು ಅವರಿಗೆ, “ಆರೋಗ್ಯವಂತರಿಗೆ ವೈದ್ಯನು ಅವಶ್ಯವಿಲ್ಲ, ರೋಗಿಗಳಿಗೆ ವೈದ್ಯನು ಅವಶ್ಯ, ನಾನು ನೀತಿವಂತರನ್ನಲ್ಲ, ಪಾಪಿಗಳನ್ನು ಕರೆಯಲು ಬಂದಿದ್ದೇನೆ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಹೆ ಆಯ್ಕುನ್ ಜೆಜುನ್ “ಅರಾಮ್ ಹೊತ್ತ್ಯಾಕ್ನಿ ವಗ್ದುಳ್ಯಾಚಿ ಗರಜ್ ನಾ. ಅರಾಮ್ ನಸಲ್ಯಾಕ್ನಿ ವಗ್ದುಳ್ಯಾಚಿ ಗರಜ್ ರ್‍ಹಾತಾ. ಮಿಯಾ ಬರ್‍ಯಾ ಲೊಕಾಕ್ನಿ ನ್ಹಯ್, ಪಾಪಿ ಲೊಕಾಕ್ನಿ ಬಲ್ವುಕ್ ಮನುನ್ ಯೆಲಾ” ಮನುನ್ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿ |