Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 2:26 - ಕನ್ನಡ ಸತ್ಯವೇದವು J.V. (BSI)

26 ಅವನು ಮಹಾಯಾಜಕನಾದ ಅಬಿಯಾತರನ ಕಾಲದಲ್ಲಿ ದೇವರಮಂದಿರದೊಳಕ್ಕೆ ಹೋಗಿ ಯಾಜಕರು ಹೊರತು ಮತ್ತಾರೂ ತಿನ್ನಬಾರದ ನೈವೇದ್ಯದ ರೊಟ್ಟಿಗಳನ್ನು ತಾನು ತಿಂದು ತನ್ನ ಸಂಗಡ ಇದ್ದವರಿಗೂ ಕೊಟ್ಟನಲ್ಲಾ? ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವನು ಮಹಾಯಾಜಕನಾದ ಅಬಿಯಾತರನ ಕಾಲದಲ್ಲಿ ದೇವಮಂದಿರದೊಳಕ್ಕೆ ಹೋಗಿ ಯಾಜಕರು ಹೊರತು ಮತ್ತಾರೂ ತಿನ್ನಬಾರದ ನೈವೇದ್ಯದ ರೊಟ್ಟಿಗಳನ್ನು ತಾನು ತಿಂದು ತನ್ನ ಸಂಗಡ ಇದ್ದವರಿಗೂ ಕೊಟ್ಟನಲ್ಲಾ?” ಎಂದು ನುಡಿಯುತ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಪ್ರಧಾನಯಾಜಕ ಅಬಿಯಾತರನ ಕಾಲದಲ್ಲಿ ಅವನು ದೇವಮಂದಿರದೊಳಕ್ಕೆ ಹೋಗಿ, ಯಾಜಕನ ಹೊರತು ಬೇರೆ ಯಾರೂ ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನೇ ತಿಂದ; ಅಲ್ಲದೆ, ತನ್ನ ಸಂಗಡ ಇದ್ದವರಿಗೂ ಕೊಟ್ಟನಲ್ಲವೇ?’ ಎಂದು ಅವರನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಅದು ಮಹಾಯಾಜಕನಾದ ಅಬಿಯಾತರನ ಕಾಲ. ದಾವೀದನು ದೇವಾಲಯಕ್ಕೆ ಹೋಗಿ, ದೇವರಿಗೆ ಅರ್ಪಿಸಿದ ರೊಟ್ಟಿಯನ್ನು ತಿಂದನು. ಯಾಜಕರು ಮಾತ್ರ ಆ ರೊಟ್ಟಿಯನ್ನು ತಿನ್ನತಕ್ಕದ್ದೆಂದು ಮೋಶೆಯ ಧರ್ಮಶಾಸ್ತ್ರ ಹೇಳುತ್ತದೆ. ದಾವೀದನು ತನ್ನೊಂದಿಗಿದ್ದ ಜನರಿಗೂ ಆ ರೊಟ್ಟಿಯನ್ನು ನೀಡಿದನು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅವನು ಮಹಾಯಾಜಕನಾದ ಅಬಿಯಾತರನ ಕಾಲದಲ್ಲಿ, ದೇವರ ಆಲಯದೊಳಗೆ ಹೋಗಿ ಯಾಜಕರ ಹೊರತು ಬೇರೆಯವರು ತಿನ್ನುವುದಕ್ಕೆ ನಿಯಮ ಸಮ್ಮತವಲ್ಲದ ನೈವೇದ್ಯದ ರೊಟ್ಟಿಯನ್ನು ತೆಗೆದುಕೊಂಡು ತಿಂದು, ತನ್ನ ಸಂಗಡಿಗರಿಗೂ ಕೊಟ್ಟನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಅಭಿಯಾತರ್ ಮಹಾಯಾಜಕ್ ಹೊತ್ತ್ಯಾ ಕಾಲಾತ್, ದಾವಿದ್ ದೆವಾಚ್ಯಾ ಗುಡಿತ್ ಗೆಲೊ ಅನಿ ಅಮ್ಚ್ಯಾ ಖಾಯ್ದ್ಯಾ ಪರ್‍ಕಾರ್ ಯಾಜಕಾನಿ ಸೊಡುನ್, ಅನಿ ಕೊನಾಕ್ಬಿ ಖಾವ್ಕ್ ಪರ್ವಾನ್ಗಿ ನಸಲ್ಲ್ಯಾ, ದೆವಾಕ್ ಭೆಟ್ವಲ್ಲ್ಯಾ ಭಾಕ್ರಿಯಾ ಖಾಲ್ಯಾನ್, ಅನಿ ಅಪ್ಲ್ಯಾ ವಾಂಗ್ಡಿಯಾಕ್ನಿಬಿ ಹಾನುನ್ ದಿಲ್ಯಾನ್.” ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 2:26
18 ತಿಳಿವುಗಳ ಹೋಲಿಕೆ  

ಅಹೀಟೂಬನ ಮಗನಾದ ಚಾದೋಕನೂ ಅಹೀಮೆಲೆಕನ ಮಗನಾದ ಎಬ್ಯಾತಾರನೂ ಅವನ ಯಾಜಕರು;


ನೆತನೇಲನ ಮಗನಾದ ಶೆಮಾಯನೆಂಬ ಲೇವಿಯ ಲೇಖಕನು ಅರಸನ ಮುಂದೆಯೂ ಅಧಿಪತಿಗಳು, ಯಾಜಕನಾದ ಚಾದೋಕ್, ಎಬ್ಯಾತಾರನ ಮಗನಾದ ಅಹೀಮೆಲೆಕ್, ಯಾಜಕರ ಮತ್ತು ಲೇವಿಯರ ಕುಟುಂಬ ಪ್ರಧಾನರು ಇವರ ಮುಂದೆಯೂ ಆ ವರ್ಗಗಳ ಪಟ್ಟಿಯನ್ನು ಬರೆದನು. ಎಲ್ಲಾಜಾರ್ಯರ ಒಂದು ವರ್ಗದವರಾದ ನಂತರ ಈತಾಮಾರ್ಯರ ಒಂದು ವರ್ಗದವರು ಸೇವಿಸಬೇಕೆಂದು ನೇವಿುಸಿ ಎಲ್ಲಾ ವರ್ಗಗಳ ಸರತಿಯನ್ನು ಚೀಟಿನಿಂದಲೇ ಗೊತ್ತುಮಾಡಿದರು.


ದಾವೀದನು ನೋಬ್ ಊರಲ್ಲಿದ್ದ ಯಾಜಕನಾದ ಅಹೀಮೆಲೆಕನ ಬಳಿಗೆ ಬಂದನು. ಅಹೀಮೆಲೆಕನು ದಾವೀದನನ್ನು ಭಯಭಕ್ತಿಯಿಂದ ಎದುರುಗೊಂಡು - ನಿನ್ನ ಜೊತೆಯಲ್ಲಿ ಒಬ್ಬನಾದರೂ ಇಲ್ಲವಲ್ಲಾ! ನೀನು ಒಬ್ಬನೇ ಬಂದದ್ದೇಕೆ ಎಂದು ಅವನನ್ನು ಕೇಳಲು ಅವನು -


ಯೆಹೋಯಾದಾವನ ಮಗನಾದ ಬೆನಾಯನು ಸೇನಾಪತಿ; ಎಬ್ಯಾತಾರ ಚಾದೋಕರು ಯಾಜಕರು;


ಆಗ ಅರಸನಾದ ಸೊಲೊಮೋನನು ತನ್ನ ತಾಯಿಗೆ - ಅದೋನೀಯನಿಗೋಸ್ಕರ ಶೂನೇಮ್ಯಳಾದ ಅಬೀಷಗ್ ಎಂಬಾಕೆಯನ್ನು ಮಾತ್ರ ಕೇಳುವದೇಕೆ? ಅವನಿಗೆ ರಾಜ್ಯವನ್ನೂ ಕೊಡಬೇಕೆಂದು ಕೇಳು; ಅವನು ನನ್ನ ಅಣ್ಣನಲ್ಲವೇ; ಯಾಜಕನಾದ ಎಬ್ಯಾತಾರನೂ ಚೆರೂಯಳ ಮಗನಾದ ಯೋವಾಬನೂ ಅವನ ಪಕ್ಷದವರಾಗಿದ್ದಾರೆ ಎಂದು ಉತ್ತರಕೊಟ್ಟನು.


ಅವನು ಚೆರೂಯಳ ಮಗನಾದ ಯೋವಾಬನನ್ನೂ ಯಾಜಕನಾದ ಎಬ್ಯಾತಾರನನ್ನೂ ತನ್ನ ಕಡೆಗೆ ಒಲಿಸಿಕೊಂಡನು. ಇವರು ಅವನಿಗೆ ಸಹಾಯಕರಾದರು.


ಶೆವನು ಲೇಖಕನು; ಚಾದೋಕ್ ಎಬ್ಯಾತಾರರು ಯಾಜಕರು;


ಅಲ್ಲಿ ನಿನ್ನ ಸಂಗಡ ಯಾಜಕರಾದ ಚಾದೋಕ್ ಎಬ್ಯಾತಾರರು ಇರುತ್ತಾರಲ್ಲಾ; ಅರಮನೆಯಲ್ಲಿ ನಿನಗೆ ಗೊತ್ತಾಗುವ ವರ್ತಮಾನವನ್ನೆಲ್ಲಾ ಆ ಇಬ್ಬರು ಯಾಜಕರಿಗೆ ತಿಳಿಸು.


ಆಗ ಚಾದೋಕನೂ ಎಬ್ಯಾತಾರನೂ ದೇವರ ಮಂಜೂಷವನ್ನು ಯೆರೂಸಲೇವಿುಗೆ ಒಯ್ದು ಅಲ್ಲೇ ವಾಸಿಸಿದರು.


ಚಾದೋಕನೂ ಅವನ ವಶದಲ್ಲಿದ್ದ ಎಲ್ಲಾ ಲೇವಿಯರೂ ದೇವರ ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಬಂದು ಅದನ್ನು ಜನರೆಲ್ಲರೂ ದಾಟಿಹೋಗುವವರೆಗೆ ಕೆಳಗಿಳಿಸಿದ್ದರು. ಎಬ್ಯಾತಾರನೂ ಬಂದಿದ್ದನು.


ಸೌಲನು ತನಗೆ ಕೇಡುಮಾಡಬೇಕೆಂದಿದ್ದಾನೆಂದು ದಾವೀದನು ತಿಳಿದು ಯಾಜಕನಾದ ಎಬ್ಯಾತಾರನಿಗೆ - ಏಫೋದನ್ನು ಇಲ್ಲಿಗೆ ತೆಗೆದುಕೊಂಡು ಬಾ ಎಂದು ಹೇಳಿ ತರಿಸಿ -


ದಾವೀದನ ಬಳಿಗೆ ಓಡಿಬಂದಿದ್ದ ಅಹೀಮೆಲೆಕನ ಮಗನಾದ ಎಬ್ಯಾತಾರನು ಕೆಯೀಲಕ್ಕೆ ಬರುವಾಗ ಏಫೋದನ್ನು ತಂದಿದ್ದನು. ದಾವೀದನು ಕೆಯೀಲದಲ್ಲಿದ್ದಾನೆಂಬ ವರ್ತಮಾನವು ಸೌಲನಿಗೆ ಮುಟ್ಟಿದಾಗ ಅವನು -


ಅವನು ದೇವರ ಮಂದಿರದೊಳಕ್ಕೆ ಹೋಗಿ ಯಾಜಕರು ಮಾತ್ರವೇ ಹೊರತು ತಾನಾಗಲಿ ತನ್ನ ಸಂಗಡ ಇದ್ದವರಾಗಲಿ ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನು ತಿಂದನಲ್ಲವೇ.


ಆತನು ಅವರಿಗೆ - ದಾವೀದನು ತಾನೂ ತನ್ನ ಸಂಗಡ ಇದ್ದವರೂ ಕೊರತೆಯುಳ್ಳವರಾಗಿ ಹಸಿದಾಗ ಏನು ಮಾಡಿದನೆಂಬದನ್ನು ನೀವು ಎಂದಾದರೂ ಓದಲಿಲ್ಲವೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು