Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 2:27 - ಕನ್ನಡ ಸತ್ಯವೇದವು J.V. (BSI)

27 ಮತ್ತು ಆತನು - ಸಬ್ಬತ್‍ದಿನವು ಮನುಷ್ಯರಿಗೋಸ್ಕರ ಉಂಟಾಯಿತೇ ಹೊರತು ಮನುಷ್ಯರು ಸಬ್ಬತ್ ದಿನಕ್ಕೋಸ್ಕರ ಉಂಟಾಗಲಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 “ಸಬ್ಬತ್ ದಿನವು ಮನುಷ್ಯರಿಗೋಸ್ಕರ ಮಾಡಲಾಯಿತೇ ಹೊರತು ಮನುಷ್ಯರನ್ನು ಸಬ್ಬತ್ ದಿನಕ್ಕಾಗಿ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಬಳಿಕ ಯೇಸು ಅವರಿಗೆ, “ಸಬ್ಬತ್‍ದಿನ ಇರುವುದು ಮನುಷ್ಯನಿಗಾಗಿ ಹೊರತು ಮನುಷ್ಯ ಇರುವುದು ಸಬ್ಬತ್ತಿಗಾಗಿ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ನಂತರ ಯೇಸು ಫರಿಸಾಯರಿಗೆ, “ಸಬ್ಬತ್‌ದಿನವನ್ನು ನಿರ್ಮಾಣ ಮಾಡಿರುವುದು ಜನರ ಸಹಾಯಕ್ಕಾಗಿ. ಆದರೆ ಜನರನ್ನು ಸೃಷ್ಟಿಸಿರುವುದು ಸಬ್ಬತ್‌ದಿನಕ್ಕೆ ಅವರು ಅಧೀನರಾಗಿರಲಿ ಎಂದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅನಂತರ ಯೇಸು ಅವರಿಗೆ, “ಮನುಷ್ಯನು ಸಬ್ಬತ್ ದಿನಕ್ಕಾಗಲಿ ಅಲ್ಲ, ಸಬ್ಬತ್ ದಿನವು ಮನುಷ್ಯನಿಗಾಗಿ ಮಾಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಮಾನಾ ಜೆಜುನ್ ಫಾರಿಜೆವಾಕ್ನಿ, “ಸಬ್ಬಾತಾಚೊ ದಿಸ್, ಮಾನ್ಸಾಕ್ ಮಜತ್ ಕರುಕ್ ಮನುನ್ ಕರಲ್ಲೊ ಹಾಯ್. ಸಬ್ಬತಾಚ್ಯಾ ದಿಸಾನ್ ಮಾನ್ಸಾಚ್ಯಾ ವರ್‍ತಿ ಅದಿಕಾರ್ ಚಾಲ್ವುಕ್ ಮನುನ್ ಕರಲ್ಲೊ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 2:27
13 ತಿಳಿವುಗಳ ಹೋಲಿಕೆ  

ಹೀಗಿರುವದರಿಂದ ತಿಂದು ಕುಡಿಯುವ ವಿಷಯದಲ್ಲಿಯೂ ಹಬ್ಬ ಅಮವಾಸ್ಯೆ ಸಬ್ಬತು ಎಂಬಿವುಗಳ ವಿಷಯದಲ್ಲಿಯೂ ನಿಮ್ಮನ್ನು ದೋಷಿಗಳೆಂದು ಯಾರೂ ಎಣಿಸಬಾರದು.


ಅವನು ಎದ್ದು ನಿಂತುಕೊಂಡನು. ಆಗ ಯೇಸು ಅವರಿಗೆ - ನಿಮ್ಮನ್ನು ಒಂದು ಮಾತು ಕೇಳುತ್ತೇನೆ; ಸಬ್ಬತ್‍ದಿನದಲ್ಲಿ ಯಾವದನ್ನು ಮಾಡುವದು ನ್ಯಾಯ? ಮೇಲನ್ನು ಮಾಡುವದೋ, ಕೇಡನ್ನು ಮಾಡುವದೋ? ಪ್ರಾಣವನ್ನು ಉಳಿಸುವದೋ, ಹಾಳುಮಾಡುವದೋ ಎಂದು ಹೇಳಿ


ಏಳನೆಯ ದಿನವು ನಿನ್ನ ದೇವರಾದ ಯೆಹೋವನಿಗೆ ಮೀಸಲಾದ ವಿಶ್ರಾಂತಿದಿನವಾಗಿದೆ; ಅದರಲ್ಲಿ ನೀನು ಯಾವ ಕೆಲಸವನ್ನೂ ಮಾಡಬಾರದು. ನಿನ್ನ ಗಂಡುಮಕ್ಕಳು ಹೆಣ್ಣುಮಕ್ಕಳು ಗಂಡಾಳು ಹೆಣ್ಣಾಳು ಎತ್ತು ಕತ್ತೆ ಪಶುಗಳು ನಿನ್ನ ಊರಲ್ಲಿರುವ ಅನ್ಯದೇಶದವರು ಯಾವ ಕೆಲಸವನ್ನೂ ಮಾಡಬಾರದು. ನಿನ್ನಂತೆಯೇ ನಿನ್ನ ಗಂಡಾಳು ಹೆಣ್ಣಾಳುಗಳಿಗೂ ವಿಶ್ರಾಂತಿದೊರೆಯಬೇಕು.


ಇದಲ್ಲದೆ ತಮ್ಮನ್ನು ದೇವಜನರನ್ನಾಗಿ ಮಾಡಿರುವ ಯೆಹೋವನು ನಾನೇ ಎಂದು ಅವರು ತಿಳುಕೊಳ್ಳುವಂತೆ ನನಗೂ ಅವರಿಗೂ ಗುರುತಾದ ಸಬ್ಬತ್ ದಿನಗಳನ್ನು ಅವರಿಗೆ ನೇವಿುಸಿದೆನು.


ನೀವು ಸಬ್ಬತ್ ದಿನವನ್ನು ಅಗಮ್ಯವಾದದ್ದೆಂದು ತಿಳಿದು ಆ ನನ್ನ ಪರಿಶುದ್ಧ ದಿವಸದಲ್ಲಿ ನಿಮ್ಮ ನಿತ್ಯದ ಕೆಲಸವನ್ನು ಮಾಡದೆ ಸ್ವೇಚ್ಫೆಯಾಗಿ ನಡೆಯದೆ ಸ್ವಕಾರ್ಯದಲ್ಲಿ ನಿರತರಾಗದೆ ಹರಟೆಹರಟದೆ ಯೆಹೋವನ ಸಬ್ಬತ್ತೆಂಬ ಪರಿಶುದ್ಧ ದಿನವು ಉಲ್ಲಾಸಕರವೂ ಮಾನ್ಯವೂ ಆದದ್ದೆಂದು ಘನಪಡಿಸಿದರೆ


ನಾನು ನೇವಿುಸಿದ ಸಬ್ಬತ್ ದಿನಗಳನ್ನು ನನ್ನ ದಿನಗಳೆಂದು ಆಚರಿಸಿರಿ; ನಾನು ನಿಮ್ಮ ದೇವರಾದ ಯೆಹೋವನು ಎಂದು ನೀವು ತಿಳುಕೊಳ್ಳುವಂತೆ ಅವು ನಿಮಗೂ ನನಗೂ ಗುರುತಾಗಿರುವವು ಎಂದು ಹೇಳಿದೆನು.


ಆರು ದಿವಸಗಳು ನಿಮ್ಮ ಕೆಲಸವನ್ನು ನಡಿಸಿ ಏಳನೆಯ ದಿನದಲ್ಲಿ ಯಾವ ಕೆಲಸವನ್ನೂ ಮಾಡದೆ ಇರಬೇಕು. ಆ ಹೊತ್ತು ನಿಮ್ಮ ಎತ್ತುಗಳೂ ಕತ್ತೆಗಳೂ ದಾಸದಾಸಿಯರೂ ಪರದೇಶಸ್ಥರೂ ವಿಶ್ರವಿುಸಿಕೊಳ್ಳಲಿ.


ಮೋಶೆಯ ನೇಮವನ್ನು ಮೀರಬಾರದೆಂದು ಒಬ್ಬನು ಸಬ್ಬತ್‍ದಿನದಲ್ಲಿ ಸುನ್ನತಿಮಾಡಿಸಿಕೊಳ್ಳುವದಾದರೆ ನಾನು ಸಬ್ಬತ್‍ದಿನದಲ್ಲಿ ಒಬ್ಬ ಮನುಷ್ಯನನ್ನು ಸಂಪೂರ್ಣವಾಗಿ ಸ್ವಸ್ಥಮಾಡಿದ್ದಕ್ಕೆ ನನ್ನ ಮೇಲೆ ಕೋಪಗೊಳ್ಳುತ್ತೀರೋ?


ಆ ಬಾಧೆಗಳೆಲ್ಲಾ ನಿಮ್ಮ ಹಿತಕ್ಕಾಗಿಯೇ ನಮಗೆ ಸಂಭವಿಸುತ್ತವೆ. ಅವುಗಳಲ್ಲಿ ಅಧಿಕವಾಗಿ ದೊರಕುವ ದೈವಕೃಪೆಯು ಬಹುಜನರೊಳಗೆ ಕೃತಜ್ಞತೆಯನ್ನು ಹುಟ್ಟಿಸುವದರಿಂದ ದೇವರಿಗೆ ಹೆಚ್ಚಾದ ಸ್ತೋತ್ರವನ್ನು ಉಂಟುಮಾಡುವದು.


ನಿನ್ನ ದೇವರಾದ ಯೆಹೋವನು ಆಜ್ಞಾಪಿಸಿದಂತೆ ನೀನು ಸಬ್ಬತ್ ದಿನವನ್ನು ದೇವರ ದಿನವೆಂದು ಆಚರಿಸಬೇಕು.


ಹೀಗಿರಲಾಗಿ ಮನುಷ್ಯಕುಮಾರನು ಸಬ್ಬತ್‍ದಿನಕ್ಕೂ ಒಡೆಯನಾಗಿದ್ದಾನೆ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು