ಮಾರ್ಕ 3:27 - ಕನ್ನಡ ಸತ್ಯವೇದವು J.V. (BSI)27 ಅದಲ್ಲದೆ ಒಬ್ಬನು ಮೊದಲು ಬಲಿಷ್ಠನನ್ನು ಕಟ್ಟಿಹಾಕದೆ ಆ ಬಲಿಷ್ಠನ ಮನೆಯನ್ನು ಹೊಕ್ಕು ಅವನ ಸೊತ್ತನ್ನು ಸುಲುಕೊಳ್ಳುವದಕ್ಕಾಗುವದಿಲ್ಲ; ಕಟ್ಟಿಹಾಕಿದ ಮೇಲೆ ಅವನ ಮನೆಯನ್ನು ಸುಲುಕೊಂಡಾನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಅದಲ್ಲದೆ ಒಬ್ಬನು ಮೊದಲು ಬಲಿಷ್ಠನನ್ನು ಕಟ್ಟಿಹಾಕದೆ ಆ ಬಲಿಷ್ಠನ ಮನೆಯನ್ನು ನುಗ್ಗಿ ಅವನ ಆಸ್ತಿಯನ್ನು ಕದಿಯಲು ಸಾಧ್ಯವಿಲ್ಲ; ಕಟ್ಟಿಹಾಕಿದ ಮೇಲೆ ಅವನ ಮನೆಯನ್ನು ಕೊಳ್ಳೆಹೊಡೆಯಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಒಬ್ಬನು ಬಲಿಷ್ಠನ ಮನೆಯನ್ನು ನುಗ್ಗಿ ಅವನನ್ನು ಕಟ್ಟಿಹಾಕದೆ ಅವನ ಸೊತ್ತನ್ನು ಸೂರೆಮಾಡಲಾಗದು. ಮೊದಲು ಅವನನ್ನು ಕಟ್ಟಬೇಕು. ಬಳಿಕ ಅವನ ಮನೆಯನ್ನು ಕೊಳ್ಳೆಹೊಡೆಯಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 “ಒಬ್ಬ ವ್ಯಕ್ತಿಯು ಬಲಾಢ್ಯನ ಮನೆಗೆ ಪ್ರವೇಶಿಸಿ ಅವನ ವಸ್ತುಗಳನ್ನು ಕದಿಯಲು ಇಚ್ಛಿಸಿದರೆ, ಮೊದಲು ಅವನು ಬಲಾಢ್ಯನನ್ನು ಕಟ್ಟಿಹಾಕಬೇಕು. ಆಗ ಅವನು ಬಲಾಢ್ಯನ ಮನೆಯಿಂದ ವಸ್ತುಗಳನ್ನು ಕದಿಯಲು ಸಾಧ್ಯವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಒಬ್ಬನು ಬಲಿಷ್ಠನ ಮನೆಗೆ ನುಗ್ಗಿ ಮೊದಲು ಅವನನ್ನು ಕಟ್ಟಿಹಾಕದೆ ಅವನ ಸೊತ್ತನ್ನು ಸೂರೆ ಮಾಡಲಾಗುವುದಿಲ್ಲ. ಮೊದಲು ಅವನನ್ನು ಕಟ್ಟಿದ ನಂತರ ಅವನ ಮನೆಯನ್ನು ಕೊಳ್ಳೆ ಹೊಡೆಯಬಹುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್27 ಎಕ್ ಘಟ್ಮುಟ್ ಮಾನ್ಸಾಚ್ಯಾ ಘರಾತ್ಲಿ ಸಾಮಾನಾ, ಚೊರುಚೆ ಮಟ್ಲ್ಯಾರ್, ಅದ್ದಿ ತ್ಯಾ ಮಾನ್ಸಾಕ್, ಘಟ್ ಭಾಂದುಕ್ ಪಾಜೆ, ತನ್ನಾ ತ್ಯಾ ಮಾನ್ಸಾಚ್ಯಾ ಘರಾತ್ಲೆ ಚೊರುನ್ ಘೆವ್ನ್ ಜಾವ್ಕ್ ಹೊತಾ. ಅಧ್ಯಾಯವನ್ನು ನೋಡಿ |