Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 3:6 - ಕನ್ನಡ ಸತ್ಯವೇದವು J.V. (BSI)

6 ಫರಿಸಾಯರು ಹೊರಕ್ಕೆ ಹೋಗಿ ಕೂಡಲೆ ಹೆರೋದ್ಯರನ್ನು ಕೂಡಿಕೊಂಡು ಇವನನ್ನು ಯಾವ ಉಪಾಯದಿಂದ ಕೊಲ್ಲೋಣ ಎಂದು ಆತನಿಗೆ ವಿರೋಧವಾಗಿ ಆಲೋಚನೆ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ತಕ್ಷಣ ಫರಿಸಾಯರು ಹೊರಕ್ಕೆ ಹೋಗಿ ಹೆರೋದ್ಯರನ್ನು ಕೂಡಿಕೊಂಡು ಯಾವ ಉಪಾಯದಿಂದ ಯೇಸುವನ್ನು ಕೊಲ್ಲಬಹುದು ಎಂದು ಆತನಿಗೆ ವಿರೋಧವಾಗಿ ಒಳಸಂಚುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಫರಿಸಾಯರು ಅಲ್ಲಿಂದ ಹೊರಗೆಹೋದರು. ಕೂಡಲೇ ಹೆರೋದಿಯರೊಡನೆ ಸೇರಿಕೊಂಡು ಯೇಸುವನ್ನು ಕೊಲೆಮಾಡಲು ಒಳಸಂಚು ಹೂಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆಗ ಫರಿಸಾಯರು ಹೊರಗೆ ಹೋಗಿ, ಹೆರೋದ್ಯರನ್ನು ಕೂಡಿಕೊಂಡು ಯೇಸುವನ್ನು ಯಾವ ರೀತಿ ಕೊಲ್ಲಬೇಕೆಂದು ಆಲೋಚಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಫರಿಸಾಯರು ಅಲ್ಲಿಂದ ಹೊರಗೆ ಹೋಗಿ ಕೂಡಲೇ ಹೆರೋದ್ಯರೊಂದಿಗೆ ಸೇರಿಕೊಂಡು ಯೇಸುವನ್ನು ಹೇಗೆ ಕೊಲ್ಲಬೇಕೆಂದು ಅವರ ವಿರೋಧವಾಗಿ ಒಳಸಂಚು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತನ್ನಾ ಫಾರಿಜೆವಾ ಭಾಯ್ರ್ ಗೆಲಿ, ಅನಿ ಹೆರೊದಾಚ್ಯಾ ಪಕ್ಷಾಚ್ಯಾ ಲೊಕಾಂಚ್ಯಾ ವಾಂಗ್ಡಾ ಮಿಳುನ್, ಜೆಜುಕ್ ಕಶೆ ಕರುನ್ ಜಿವಾನಿ ಮಾರ್‍ತಲೆ ಮನುನ್ ಯವ್ಜನ್ ಘಾಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 3:6
10 ತಿಳಿವುಗಳ ಹೋಲಿಕೆ  

ಆಮೇಲೆ ಅವರು ಆತನನ್ನು ಮಾತಿನಲ್ಲಿ ಹಿಡಿಯುವದಕ್ಕೆ ಫರಿಸಾಯರಲ್ಲಿಯೂ ಹೆರೋದ್ಯರಲ್ಲಿಯೂ ಕೆಲವರನ್ನು ಆತನ ಬಳಿಗೆ ಕಳುಹಿಸಿದರು.


ಆತನ ಬಳಿಗೆ ತಮ್ಮ ಶಿಷ್ಯರನ್ನು ಹೆರೋದಿಯರ ಕೂಡ ಕಳುಹಿಸಿದರು. ಇವರು ಬಂದು - ಗುರುವೇ, ನೀನು ಸತ್ಯವಂತನು, ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನು, ಯಾರಿಗೂ ಹೆದರದವನು; ನೀನು ಜನರ ಮುಖದಿಚ್ಫೆಗೆ ಮಾತಾಡುವವನಲ್ಲ ಎಂದು ಬಲ್ಲೆವು.


ಆದರೆ ಫರಿಸಾಯರು ಹೊರಕ್ಕೆ ಹೋಗಿ ಇವನನ್ನು ಯಾವ ಉಪಾಯದಿಂದ ಕೊಲ್ಲೋಣ ಎಂದು ಆತನಿಗೆ ವಿರೋಧವಾಗಿ ಆಲೋಚನೆಮಾಡಿಕೊಂಡರು.


ಯೇಸು ಅವರಿಗೆ - ಎಚ್ಚರಿಕೆ, ಫರಿಸಾಯರ ಮತ್ತು ಹೆರೋದನ ಹುಳಿಹಿಟ್ಟಿನ ವಿಷಯದಲ್ಲಿ ನೋಡಿಕೊಳ್ಳಿರಿ ಎಂದು ಖಂಡಿತವಾಗಿ ಹೇಳಲು


ಆ ದಿನದಿಂದ ಆತನನ್ನು ಕೊಲ್ಲುವದಕ್ಕೆ ಆಲೋಚಿಸುತ್ತಿದ್ದರು.


ಆದರೆ ಅವರಲ್ಲಿ ದುರ್ಬುದ್ಧಿ ತುಂಬಿದ್ದದರಿಂದ - ಈ ಯೇಸುವಿಗೆ ಏನು ಮಾಡೋಣ ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.


ಮಹಾಯಾಜಕರೂ ಶಾಸ್ತ್ರಿಗಳೂ ಯೇಸುವನ್ನು ಕೊಲ್ಲಬೇಕೆಂದಿದ್ದು ಜನರಿಗೆ ಹೆದರಿ ತಕ್ಕ ಮಾರ್ಗವನ್ನು ಹುಡುಕುತ್ತಿದ್ದರು.


ನೀನು ಪವಿತ್ರಾತ್ಮ ಮೂಲಕವಾಗಿ ನಿನ್ನ ಸೇವಕನಾಗಿದ್ದ ನಮ್ಮ ಪಿತೃವಾದ ದಾವೀದನ ಬಾಯಿಂದ - ಅನ್ಯಜನಗಳು ಯಾಕೆ ರೇಗಿದರು? ಜನಾಂಗಗಳವರು ವ್ಯರ್ಥಕಾರ್ಯಗಳನ್ನು ಯಾಕೆ ಯೋಚಿಸಿದರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು