Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 4:11 - ಕನ್ನಡ ಸತ್ಯವೇದವು J.V. (BSI)

11 ಆತನು ಅವರಿಗೆ - ದೇವರ ರಾಜ್ಯದ ಗುಟ್ಟು ನಿಮಗೇ ಕೊಟ್ಟಿದೆ; ಹೊರಗಿನವರಿಗೆ ಎಲ್ಲವೂ ಸಾಮ್ಯದ ಮರೆಯಲ್ಲಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆತನು ಅವರಿಗೆ, “ದೇವರ ರಾಜ್ಯದ ರಹಸ್ಯ ನಿಮಗೆ ದೊರೆತಿದೆ; ಆದರೆ ಹೊರಗಿನವರಿಗೆ ಎಲ್ಲವನ್ನು ಸಾಮ್ಯಗಳ ರೂಪದಲ್ಲಿ ಹೇಳಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅದಕ್ಕೆ ಯೇಸು, “ದೇವರ ಸಾಮ್ರಾಜ್ಯದ ರಹಸ್ಯವನ್ನು ನಿಮಗೆ ತಿಳಿಸಲಾಗಿದೆ. ಮಿಕ್ಕವರಿಗಾದರೋ ಅದೆಲ್ಲವೂ ಸಾಮತಿಗಳ ರೂಪದಲ್ಲಿ ಮರೆಯಾಗಿದೆ. ಏಕೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೇಸು, “ದೇವರ ರಾಜ್ಯದ ಸತ್ಯದ ಗುಟ್ಟನ್ನು ನೀವು ಮಾತ್ರ ತಿಳಿದುಕೊಳ್ಳತಕ್ಕದ್ದು. ಆದರೆ ಇತರ ಎಲ್ಲಾ ಜನರಿಗೆ ನಾನು ಸಾಮ್ಯಗಳ ಮೂಲಕವಾಗಿ ಎಲ್ಲವನ್ನೂ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅದಕ್ಕೆ ಯೇಸು, “ದೇವರ ರಾಜ್ಯದ ರಹಸ್ಯವನ್ನು ತಿಳಿದುಕೊಳ್ಳುವ ಜ್ಞಾನ ನಿಮಗೆ ಕೊಡಲಾಗಿದೆ. ಆದರೆ ಹೊರಗಿನವರಿಗೆ ಎಲ್ಲವೂ ಸಾಮ್ಯದ ರೂಪದಲ್ಲಿ ಹೇಳಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತನ್ನಾ ಜೆಜುನ್ “ದೆವಾಚ್ಯಾ ರಾಜಾಚೊ ಖರೊ ಘುಟ್, ತುಮ್ಕಾ ದಿಲ್ಲೊ ಹಾಯ್, ಖರೆ, ದುಸ್ರಿ ಲೊಕಾ ತೆ, ಕಾನಿಚ್ಯಾ ವೈನಾ ಆಯಿಕ್ತ್ಯಾತ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 4:11
20 ತಿಳಿವುಗಳ ಹೋಲಿಕೆ  

ಆ ಸಮಯದಲ್ಲಿ ಯೇಸು ಹೇಳಿದ್ದೇನಂದರೆ - ತಂದೆಯೇ, ಪರಲೋಕ ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ಮಾತುಗಳನ್ನು ಮರೆಮಾಡಿ ಬಾಲಕರಿಗೆ ಪ್ರಕಟಮಾಡಿದ್ದೀ ಎಂದು ನಿನ್ನನ್ನು ಕೊಂಡಾಡುತ್ತೇನೆ.


ಆತನು - ದೇವರ ರಾಜ್ಯದ ಗುಟ್ಟುಗಳನ್ನು ತಿಳಿಯುವ ವರವು ನಿಮಗೇ ಕೊಟ್ಟದೆ, ಉಳಿದವರಿಗೆ ಕಣ್ಣಿದ್ದರೂ ನೋಡದಂತೆಯೂ, ಕಿವಿಯಿದ್ದರೂ ತಿಳುಕೊಳ್ಳದಂತೆಯೂ ಸಾಮ್ಯರೂಪವಾಗಿ ಹೇಳಲಾಗುತ್ತದೆ.


ದೇವರ ಮಗನು ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ಮತ್ತು ನಾವು ದೇವರ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಆತನು ಸತ್ಯದೇವರೂ ನಿತ್ಯಜೀವವೂ ಆಗಿದ್ದಾನೆ.


ಹೀಗಿದ್ದರೆ ನೀವು ಹೊರಗಿನವರ ಎದುರಿನಲ್ಲಿ ಸಜ್ಜನರಾಗಿ ನಡೆದುಕೊಳ್ಳುವಿರಿ ಮತ್ತು ನಿಮಗೆ ಯಾವದಕ್ಕೂ ಕೊರತೆಯಿರುವದಿಲ್ಲ.


ಸಮಯವನ್ನು ಸುಮ್ಮನೆ ಕಳಕೊಳ್ಳದೆ ಅದನ್ನು ಬೆಲೆಯುಳ್ಳದ್ದೆಂದು ಉಪಯೋಗಿಸಿ ಹೊರಗಿನವರ ಮುಂದೆ ಜ್ಞಾನವುಳ್ಳವರಾಗಿ ನಡೆದುಕೊಳ್ಳಿರಿ.


ಇದಲ್ಲದೆ ಅವನು ಹೊರಗಣವರಿಂದ ಒಳ್ಳೆಯವನೆನಿಸಿಕೊಂಡಿರಬೇಕು; ಇಲ್ಲದಿದ್ದರೆ ನಿಂದೆಗೆ ಗುರಿಯಾಗುವನು ಮತ್ತು ಸೈತಾನನ ಉರ್ಲಿನೊಳಗೆ ಸಿಕ್ಕಿಬಿದ್ದಾನು.


ತಾನು ಕಾಲವು ಪರಿಪೂರ್ಣವಾದಾಗ ನಿರ್ವಹಿಸಬೇಕಾದ ಒಂದು ಕೃಪೆಯುಳ್ಳ ಸಂಕಲ್ಪವನ್ನು ಆತನು ಕ್ರಿಸ್ತನಲ್ಲಿ ಮೊದಲೇ ನಿಷ್ಕರ್ಷೆಮಾಡಿಕೊಂಡಿದ್ದನು. ಅದೇನಂದರೆ ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ಕ್ರಿಸ್ತನಲ್ಲಿ ಒಂದಾಗಿ ಕೂಡಿಸಬೇಕೆಂಬದೇ. ಕ್ರಿಸ್ತನಲ್ಲಿಯೇ ಸಮಸ್ತವು ಒಂದಾಗುವದು.


ಯಾಕಂದರೆ ಕತ್ತಲೆಯೊಳಗಿಂದ ಬೆಳಕು ಹೊಳೆಯಲಿ ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.


ಅದಕ್ಕೆ ಯೇಸು - ಯೋನನ ಮಗನಾದ ಸೀಮೋನನೇ, ನೀನು ಧನ್ಯನು; ಈ ಗುಟ್ಟು ನಿನಗೆ ತಿಳಿಸಿದವನು ನರಮನುಷ್ಯನಲ್ಲ, ಪರಲೋಕದಲ್ಲಿರುವ ನನ್ನ ತಂದೆಯೇ ತಿಳಿಸಿದನು.


ಆದರೆ ನಿಮ್ಮ ಕಣ್ಣು ಕಾಣುತ್ತವೆ, ನಿಮ್ಮ ಕಿವಿ ಕೇಳುತ್ತವೆ; ಆದದರಿಂದ ನೀವು ಧನ್ಯರು.


ನಿನಗೂ ಇತರರಿಗೂ ತಾರತಮ್ಯ ಮಾಡಿದವರು ಯಾರು? ದೇವರಿಂದ ಹೊಂದದಿರುವಂಥದು ನಿನ್ನಲ್ಲಿ ಒಂದಾದರೂ ಉಂಟೋ? ಹೊಂದಿದ ಮೇಲೆ ಹೊಂದದವನಂತೆ ನೀನು ಯಾಕೆ ಹಿಗ್ಗಿಕೊಳ್ಳುತ್ತೀ?


ಆತನು ಅವರನ್ನು ಹತ್ತಿರಕ್ಕೆ ಕರೆದು ಅವರಿಗೆ ಸಾಮ್ಯರೂಪವಾಗಿ ಹೇಳಿದ್ದೇನಂದರೆ - ಸೈತಾನನು ಸೈತಾನನನ್ನು ಬಿಡಿಸುವದುಂಟೇ?


ಆ ಜನರೆಲ್ಲರು ಸಮುದ್ರದ ಹತ್ತರ ನೆಲದ ಮೇಲೆ ಇದ್ದರು. ಆಗ ಆತನು ಅವರಿಗೆ ಸಾಮ್ಯರೂಪವಾಗಿ ಅನೇಕ ಸಂಗತಿಗಳನ್ನು ಉಪದೇಶ ಮಾಡಿದನು. ಆ ಉಪದೇಶದಲ್ಲಿ ಅವರಿಗೆ ಹೇಳಿದ್ದೇನಂದರೆ -


ಆತನು ಒಬ್ಬನೇ ಇದ್ದಾಗ ಆತನ ಹತ್ತಿರ ಇದ್ದವರು ಹನ್ನೆರಡು ಮಂದಿ ಶಿಷ್ಯರ ಕೂಡ ಆ ಸಾಮ್ಯಗಳ ವಿಷಯದಲ್ಲಿ ಆತನನ್ನು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು