Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 4:15 - ಕನ್ನಡ ಸತ್ಯವೇದವು J.V. (BSI)

15 ಕೆಲವರು ವಾಕ್ಯವನ್ನು ಕೇಳಿದ ಕೂಡಲೇ ಸೈತಾನನು ಬಂದು ಅವರಲ್ಲಿ ಬಿತ್ತಿದ್ದ ವಾಕ್ಯವನ್ನು ತೆಗೆದುಬಿಡುತ್ತಾನೆ. ಇವರೇ ವಾಕ್ಯವು ಬಿತ್ತಲ್ಪಟ್ಟ ದಾರಿಯ ಮಗ್ಗುಲಾಗಿರುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಕೆಲವರು ವಾಕ್ಯವನ್ನು ಕೇಳಿದ ಕೂಡಲೇ ಸೈತಾನನು ಬಂದು ಅವರಲ್ಲಿ ಬಿತ್ತಿದ್ದ ವಾಕ್ಯವನ್ನು ತೆಗೆದುಬಿಡುತ್ತಾನೆ. ಇವರೇ ದಾರಿಯ ಮಗ್ಗುಲಲ್ಲಿ ಬಿತ್ತಲ್ಪಟ್ಟ ಬೀಜವಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಕೆಲವರು ದೇವರ ಸಂದೇಶವನ್ನು ಕೇಳುತ್ತಾರೆ; ಸೈತಾನನು ತಕ್ಷಣವೇ ಬಂದು ಆ ಸಂದೇಶವನ್ನು ತೆಗೆದುಬಿಡುತ್ತಾನೆ. ಕಾಲ್ದಾರಿಯಲ್ಲಿ ಬಿದ್ದ ಬೀಜಕ್ಕೆ ಹೋಲಿಕೆಯಾಗಿರುವವರು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಕೆಲವು ಜನರು ದೇವರ ವಾಕ್ಯವನ್ನು ಕೇಳುತ್ತಾರೆ. ಆದರೆ ಅವರಲ್ಲಿ ಬಿತ್ತಿದ ವಾಕ್ಯವನ್ನು ಸೈತಾನನು ಬಂದು ತೆಗೆದುಬಿಡುತ್ತಾನೆ. ಈ ಜನರೇ ದಾರಿಯ ಮಗ್ಗುಲಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಕೆಲವರು ದಾರಿಯ ಪಕ್ಕದಲ್ಲಿ ಬಿದ್ದ ಬೀಜದಂತಿದ್ದಾರೆ. ಅವರು ವಾಕ್ಯ ಕೇಳಿದ ಕೂಡಲೇ ಸೈತಾನನು ಬಂದು ಅವರಲ್ಲಿ ಬಿತ್ತಿದ್ದ ದೇವರ ವಾಕ್ಯವನ್ನು ತೆಗೆದುಬಿಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಉಲ್ಲಿ ಲೊಕಾ ತ್ಯಾ ವಾಟೆಚ್ಯಾ ದಂಡೆರ್ ಪಡಲ್ಲ್ಯಾ ಭ್ಹಿಂಯಾ ಸರ್ಕಿ, ತೆನಿ ದೆವಾಚ್ಯಾ ಗೊಸ್ಟಿಯಾ ಆಯ್ಕಲ್ಲ್ಯಾ ತನ್ನಾಚ್, ಸೈತಾನ್ ಯೆತಾ, ಅನಿ ತ್ಯಾ ಗೊಸ್ಟಿಯಾ ಕಾಡುನ್ ಘೆವ್ನ್ ಜಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 4:15
28 ತಿಳಿವುಗಳ ಹೋಲಿಕೆ  

ಸ್ವಸ್ಥಚಿತ್ತರಾಗಿರಿ, ಎಚ್ಚರವಾಗಿರಿ; ನಿಮ್ಮ ವಿರೋಧಿಯಾಗಿರುವ ಸೈತಾನನು ಗರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.


ಸೈತಾನನು ನಮ್ಮನ್ನು ವಂಚಿಸಿ ನಷ್ಟಪಡಿಸಬಾರದು; ಅವನ ಯೋಚನೆಗಳನ್ನು ನಾವು ಅರಿಯದವರಲ್ಲವಲ್ಲಾ.


ಕೆಲವರು ವಾಕ್ಯವನ್ನು ಕೇಳಿದ ಕೂಡಲೆ ಸೈತಾನನು ಬಂದು ಅವರು ನಂಬಿ ರಕ್ಷಣೆ ಹೊಂದಬಾರದೆಂದು ವಾಕ್ಯವನ್ನು ಅವರ ಹೃದಯದಿಂದ ತೆಗೆದು ಬಿಡುತ್ತಾನೆ; ಇವರೇ ದಾರಿಯ ಮಗ್ಗುಲಾಗಿರುವವರು.


ಬಿತ್ತುವಾಗ ಕೆಲವು ಬೀಜ ದಾರಿಯ ಮಗ್ಗುಲಲ್ಲಿ ಬಿದ್ದವು; ಹಕ್ಕಿಗಳು ಬಂದು ಅವುಗಳನ್ನು ತಿಂದುಬಿಟ್ಟವು.


ಆಗ ಪೇತ್ರನು - ಅನನೀಯಾ, ಸೈತಾನನು ನಿನ್ನ ಹೃದಯದಲ್ಲಿ ತುಂಬಿಕೊಂಡದ್ದೇನು? ನೀನು ಯಾಕೆ ಆ ಹೊಲದ ಕ್ರಯದಲ್ಲಿ ಕೆಲವನ್ನು ಬಚ್ಚಿಟ್ಟುಕೊಂಡು ಪವಿತ್ರಾತ್ಮನನ್ನು ವಂಚಿಸಬೇಕೆಂದಿದ್ದೀ?


ನಾವು ಕೇಳಿದ ಸಂಗತಿಯನ್ನು [ನಮ್ಮಲ್ಲಿ] ಯಾರು ನಂಬಿದ್ದರು? ಯೆಹೋವನ ಬಾಹುವು ಯಾರಿಗೆ ಗೋಚರವಾಗಿತ್ತು?


ಇದಲ್ಲದೆ ಅವರನ್ನು ಮರುಳುಗೊಳಿಸಿದ ಸೈತಾನನು ಬೆಂಕಿ ಗಂಧಕಗಳುರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು. ಅಲ್ಲಿ ಮೃಗವೂ ಸುಳ್ಳು ಪ್ರವಾದಿಯೂ ಕೂಡ ಇದ್ದಾರೆ; ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆಪಡುತ್ತಿರುವರು.


ಆ ಸಾವಿರ ವರುಷಗಳು ತೀರಿದ ಮೇಲೆ ಸೈತಾನನಿಗೆ ಸೆರೆಯಿಂದ ಬಿಡುಗಡೆಯಾಗುವದು.


ಆದದರಿಂದ ನಾವು ಕೇಳಿದ ಸಂಗತಿಗಳಿಗೆ ತಪ್ಪಿಹೋದೇವೆಂದು ಭಯಪಟ್ಟು ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿರಬೇಕು.


ಆ ಅಧರ್ಮಸ್ವರೂಪನ ಪ್ರತ್ಯಕ್ಷತೆಯು ಸೈತಾನನ ಮಾಟಕ್ಕನುಗುಣವಾಗಿರುವದು. ಅದು ಮೋಸಗೊಳಿಸುವ ಸಕಲವಿಧವಾದ ಮಹತ್ಕಾರ್ಯ ಸೂಚಕಕಾರ್ಯ ಅದ್ಭುತಕಾರ್ಯ ಇವುಗಳಿಂದಲೂ ದುರ್ನೀತಿಯ ಎಲ್ಲಾ ವಂಚನೆಯಿಂದಲೂ ಕೂಡಿ ನಾಶನ ಮಾರ್ಗದಲ್ಲಿರುವವರಿಗೋಸ್ಕರ ಸಂಭವಿಸುವದು.


ಆದರೆ ಅವರು ಅಲಕ್ಷ್ಯಮಾಡಿ ಒಬ್ಬನು ತನ್ನ ಹೊಲಕ್ಕೆ ಒಬ್ಬನು ತನ್ನ ವ್ಯಾಪಾರಕ್ಕೆ ಹೋಗಿಬಿಟ್ಟರು;


ಭೂಲೋಕದವರನ್ನೆಲ್ಲಾ ಮರುಳುಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾತನ ಸರ್ಪವು ದೊಬ್ಬಲ್ಪಟ್ಟು ಭೂವಿುಗೆ ಬಿದ್ದನು;


ಯೇಸು ಅವನಿಗೆ - ಸೈತಾನನೇ, ನೀನು ತೊಲಗಿ ಹೋಗು. ನಿನ್ನ ದೇವರಾಗಿರುವ ಕರ್ತನಿಗೆ ಅಡ್ಡಬಿದ್ದು ಆತನೊಬ್ಬನನ್ನೇ ಆರಾಧಿಸಬೇಕು ಎಂಬದಾಗಿ ಬರೆದದೆ ಎಂದು ಹೇಳಿದನು.


ಅನಂತರ ಮಹಾಯಾಜಕನಾದ ಯೆಹೋಶುವನು ಯೆಹೋವನ ದೂತನ ಮುಂದೆ ನಿಂತಿರುವದನ್ನು ಯೆಹೋವನು ನನಗೆ ತೋರಿಸಿದನು; ಸೈತಾನನು ಯೆಹೋಶುವನಿಗೆ ಪ್ರತಿಕಕ್ಷಿಯಾಗಿ ಅವನ ಬಲಗಡೆಯಲ್ಲಿ ನಿಂತಿದ್ದನು.


ಆಗ ಲೋಟನು ಹೊರಕ್ಕೆ ಹೋಗಿ ತನ್ನ ಹೆಣ್ಣು ಮಕ್ಕಳನ್ನು ಗೊತ್ತುಮಾಡಿಕೊಂಡಿದ್ದ ಅಳಿಯಂದಿರಿಗೆ ಈ ಸಂಗತಿಯನ್ನು ತಿಳಿಸಿ - ನೀವೆದ್ದು ಈ ಸ್ಥಳವನ್ನು ಬಿಟ್ಟು ಹೋಗಿರಿ, ಯೆಹೋವನು ಈ ಊರನ್ನು ನಾಶಮಾಡುತ್ತಾನೆ ಎಂದು ಹೇಳಿದನು. ಆದರೆ ಅವನು ಅವರಿಗೆ ಗೇಲಿಮಾಡುವವನಾಗಿ ಕಾಣಿಸಿದನು.


ಯಾವ ಜಾರನಾಗಲಿ ಏಸಾವನಂಥ ಪ್ರಾಪಂಚಿಕನಾಗಲಿ ನಿಮ್ಮಲ್ಲಿ ಇರದಂತೆ ಜಾಗ್ರತೆಯಿಂದ ನೋಡಿಕೊಳ್ಳಿರಿ. ಆ ಏಸಾವನು ಒಂದೇ ಒಂದು ಊಟಕ್ಕೋಸ್ಕರ ತನ್ನ ಚೊಚ್ಚಲತನದ ಹಕ್ಕನ್ನು ಕೊಟ್ಟುಬಿಟ್ಟನು;


ಸತ್ತವರು ಎದ್ದುಬರುವ ವಿಷಯವನ್ನು ಕೇಳಿದಾಗ ಕೆಲವರು ಅಪಹಾಸ್ಯಮಾಡಿದರು; ಬೇರೆ ಕೆಲವರು - ನೀನು ಈ ವಿಷಯದಲ್ಲಿ ಹೇಳುವದನ್ನು ನಾವು ಇನ್ನೊಂದು ಸಾರಿ ಕೇಳುತ್ತೇವೆ ಅಂದರು.


ಆ ಬಿತ್ತುವವನು ವಾಕ್ಯವೆಂಬ ಬೀಜವನ್ನು ಬಿತ್ತುತ್ತಾನೆ.


ಅದೇ ಪ್ರಕಾರ ಬೇರೆ ಕೆಲವರು ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಸ್ವೀಕರಿಸುತ್ತಾರೆ; ತಮಗೆ ಬೇರಿಲ್ಲದ ಕಾರಣ ಇವರು ಸ್ವಲ್ಪ ಕಾಲ ಮಾತ್ರವೇ ಇದ್ದು ಬಳಿಕ ಆ ವಾಕ್ಯದ ನಿವಿುತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಬೇಗ ಎಡವಿಬೀಳುತ್ತಾರೆ; ಇವರೇ ಬೀಜಬಿದ್ದ ಬಂಡೆಯ ನೆಲವಾಗಿರುವವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು