Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 4:16 - ಕನ್ನಡ ಸತ್ಯವೇದವು J.V. (BSI)

16-17 ಅದೇ ಪ್ರಕಾರ ಬೇರೆ ಕೆಲವರು ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಸ್ವೀಕರಿಸುತ್ತಾರೆ; ತಮಗೆ ಬೇರಿಲ್ಲದ ಕಾರಣ ಇವರು ಸ್ವಲ್ಪ ಕಾಲ ಮಾತ್ರವೇ ಇದ್ದು ಬಳಿಕ ಆ ವಾಕ್ಯದ ನಿವಿುತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಬೇಗ ಎಡವಿಬೀಳುತ್ತಾರೆ; ಇವರೇ ಬೀಜಬಿದ್ದ ಬಂಡೆಯ ನೆಲವಾಗಿರುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 “ಅದೇ ಪ್ರಕಾರ ಬೇರೆ ಕೆಲವರು ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಸ್ವೀಕರಿಸುತ್ತಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಇನ್ನೂ ಕೆಲವರು ದೇವರ ಸಂದೇಶವನ್ನು ಕೇಳಿದ ಕೂಡಲೆ ಅದನ್ನು ಸಂತಸದಿಂದ ಸ್ವೀಕರಿಸುತ್ತಾರೆ. ಆದರೆ ಅವರಲ್ಲಿ ಅದು ಆಳವಾಗಿ ಬೇರೂರದ ಕಾರಣ ಕೊಂಚಕಾಲ ಮಾತ್ರ ಉಳಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ಇನ್ನು ಕೆಲವರು ದೇವರ ವಾಕ್ಯವನ್ನು ಕೇಳುತ್ತಾರೆ ಮತ್ತು ಸಂತೋಷದಿಂದ ಅದನ್ನು ಬೇಗನೆ ಸ್ವೀಕರಿಸಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಇನ್ನೂ ಕೆಲವರು ಕಲ್ಲು ನೆಲದ ಮೇಲೆ ಬಿದ್ದ ಬೀಜದಂತಿರುವರು. ಅವರು ವಾಕ್ಯವನ್ನು ಕೇಳಿದ ಕೂಡಲೇ ಸಂತೋಷದಿಂದ ಅದನ್ನು ಸ್ವೀಕರಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಅನಿ ಉಲ್ಲೆ ಜಾನಾ ಗುಂಡ್ಯಾಚ್ಯಾ ತಳ್ಪಾರ್ ಪಡಲ್ಲ್ಯಾ ಬಿಂಯಾಂಚ್ಯಾ ಬಾಸೆನ್; ತೆನಿ, ಗೊಸ್ಟಿಯಾ ಆಯ್ಕಲ್ಲ್ಯಾ ತನ್ನಾ, ತ್ಯಾ ಗೊಸ್ಟಿಯಾ ಕುಶಿನ್ ಸ್ವಿಕಾರ್ ಕರ್‍ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 4:16
14 ತಿಳಿವುಗಳ ಹೋಲಿಕೆ  

ಕೆಲವರು ವಾಕ್ಯವನ್ನು ಕೇಳಿದಾಗಲೇ ಅದನ್ನು ಸಂತೋಷದಿಂದ ಅಂಗೀಕರಿಸುತ್ತಾರೆ; ಇವರಿಗೆ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರವೇ ನಂಬಿಕೊಂಡಿದ್ದು ಶೋಧನೆಯ ಕಾಲದಲ್ಲಿ ಬಿದ್ದುಹೋಗುತ್ತಾರೆ; ಇವರೇ ಬಂಡೆಯ ನೆಲವಾಗಿರುವವರು.


ಹೆರೋದನು ಯೋಹಾನನನ್ನು ನೀತಿವಂತನೆಂದೂ ದೇವಭಕ್ತನೆಂದೂ ತಿಳಿದು ಅಂಜಿಕೊಂಡು ಅವನಿಗೆ ಯಾವ ಅಪಾಯವೂ ಬಾರದಂತೆ ಇಟ್ಟಿದ್ದನು. ಇದಲ್ಲದೆ ಯೋಹಾನನು ಹೇಳಿದ್ದನ್ನು ಅವನು ಕೇಳಿದಾಗ ಮನಸ್ಸಿನಲ್ಲಿ ಬಹು ಗಲಿಬಿಲಿ ಹುಟ್ಟಿದರೂ ಅವನ ಮಾತನ್ನು ಸಂತೋಷದಿಂದ ಕೇಳುತ್ತಿದ್ದನು.


ಯೋಹಾನನು ಉರಿಯುವ ದೀಪದೋಪಾದಿಯಲ್ಲಿ ಪ್ರಕಾಶಿಸಿದನು. ಅವನು ಕೊಡುವ ಬೆಳಕಿನಲ್ಲಿ ಸ್ವಲ್ಪಕಾಲ ವಿನೋದಗೊಳ್ಳುವದಕ್ಕೆ ಮನಸ್ಸುಮಾಡಿದಿರಿ.


ಆಗ ಸೀಮೋನನು ಕೂಡ ನಂಬಿ ದೀಕ್ಷಾಸ್ನಾನಮಾಡಿಸಿಕೊಂಡು ಫಿಲಿಪ್ಪನ ಸಂಗಡ ಯಾವಾಗಲೂ ಇದ್ದು ಸೂಚಕಕಾರ್ಯಗಳೂ ಮಹತ್ಕಾರ್ಯಗಳೂ ಉಂಟಾಗುವದನ್ನು ನೋಡಿ ಬೆರಗಾದನು.


ಅದಕ್ಕೆ ಅಗ್ರಿಪ್ಪನು - ಅಲ್ಪಪ್ರಯತ್ನದಿಂದ ನನ್ನನ್ನು ಕ್ರೈಸ್ತನಾಗುವದಕ್ಕೆ ಒಡಂಬಡಿಸುತ್ತೀಯಾ? ಎಂದು ಹೇಳಲು


ಕೆಲವು ಬೀಜ ಬಹಳ ಮಣ್ಣಿಲ್ಲದ ಬಂಡೆಯ ನೆಲದಲ್ಲಿ ಬಿದ್ದವು; ಅಲ್ಲಿ ಮಣ್ಣು ತೆಳ್ಳಗಿದ್ದದರಿಂದ ಅವು ಬೇಗ ಮೊಳೆತವು;


ಕೆಲವರು ವಾಕ್ಯವನ್ನು ಕೇಳಿದ ಕೂಡಲೇ ಸೈತಾನನು ಬಂದು ಅವರಲ್ಲಿ ಬಿತ್ತಿದ್ದ ವಾಕ್ಯವನ್ನು ತೆಗೆದುಬಿಡುತ್ತಾನೆ. ಇವರೇ ವಾಕ್ಯವು ಬಿತ್ತಲ್ಪಟ್ಟ ದಾರಿಯ ಮಗ್ಗುಲಾಗಿರುವವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು