Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 4:26 - ಕನ್ನಡ ಸತ್ಯವೇದವು J.V. (BSI)

26 ಇನ್ನೂ ಆತನು ಅವರಿಗೆ ಹೇಳಿದ್ದು - ಒಬ್ಬನು ಭೂವಿುಯಲ್ಲಿ ಬೀಜವನ್ನು ಹಾಕಿ ರಾತ್ರಿ ಮಲಗುತ್ತಾ ಹಗಲು ಎದ್ದಿರುತ್ತಾ ಇರಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಇದಲ್ಲದೆ ಆತನು ಅವರಿಗೆ ಮತ್ತೆ ಹೇಳಿದೇನಂದರೆ; “ಒಬ್ಬನು ಭೂಮಿಯಲ್ಲಿ ಬೀಜವನ್ನು ಬಿತ್ತಿದ ನಂತರ ಅವನು ರಾತ್ರಿಯಲ್ಲಿ ಮಲಗಿದ್ದಾಗಲೂ, ಹಗಲು ಎಚ್ಚರವಿರುವಾಗಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಯೇಸುಸ್ವಾಮಿ ಇನ್ನೊಂದು ಸಾಮತಿಯನ್ನು ಹೇಳಿದರು: “ದೇವರ ಸಾಮ್ರಾಜ್ಯವು ರೈತನೊಬ್ಬನು ತನ್ನ ಹೊಲದಲ್ಲಿ ಮಾಡಿದ ಬಿತ್ತನೆಗೆ ಹೋಲಿಕೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ನಂತರ ಯೇಸು, “ದೇವರ ರಾಜ್ಯವು ಭೂಮಿಯಲ್ಲಿ ಬೀಜ ಬಿತ್ತಿದ ಮನುಷ್ಯನಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಯೇಸು, “ದೇವರ ರಾಜ್ಯವು ಹೀಗಿದೆ: ಒಬ್ಬನು ತನ್ನ ಹೊಲದಲ್ಲಿ ಬೀಜವನ್ನು ಬಿತ್ತಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಅನಿ ಫಿಡೆ ಜೆಜುನ್ “ದೆವಾಚೆ ರಾಜ್ ಮಟ್ಲ್ಯಾರ್, ಅಶೆ, ಎಕ್ ಮಾನುಸ್ ಅಪ್ಲ್ಯಾ ಶೆತಾತ್ ಭ್ಹಿಂಯ್ ಪೆರ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 4:26
24 ತಿಳಿವುಗಳ ಹೋಲಿಕೆ  

ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು; ಅದೇನಂದರೆ - ಪರಲೋಕರಾಜ್ಯವು ಒಳ್ಳೆಯ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ್ದ ಒಬ್ಬ ಮನುಷ್ಯನಿಗೆ ಹೋಲಿಕೆಯಾಗಿದೆ.


ಈ ಸಾಮ್ಯದ ಅರ್ಥವೇನಂದರೆ - ಆ ಬೀಜವೆಂದರೆ ದೇವರ ವಾಕ್ಯ.


ಬಿತ್ತುವವನು ಬೀಜವನ್ನು ಬಿತ್ತುವದಕ್ಕೆ ಹೊರಟನು. ಅವನು ಬಿತ್ತುವಾಗ ಕೆಲವು ಬೀಜ ದಾರಿಯ ಮಗ್ಗುಲಲ್ಲಿ ಬಿದ್ದು ತುಳಿಯಲ್ಪಟ್ಟವು; ಆಕಾಶದಲ್ಲಿ ಹಾರಾಡುವ ಹಕ್ಕಿಗಳು ಅವುಗಳನ್ನು ತಿಂದುಬಿಟ್ಟವು.


ಸಮಾಧಾನಪಡಿಸುವವರು ಸಮಾಧಾನವೆಂಬ ಬೀಜವನ್ನು ಬಿತ್ತಿ ನೀತಿಯೆಂಬ ಫಲವನ್ನು ಕೊಯ್ಯುವರು.


ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಗೋದಿಯ ಕಾಳು ಭೂವಿುಯಲ್ಲಿ ಬಿದ್ದು ಸಾಯದಿದ್ದರೆ ಒಂದೇಯಾಗಿ ಉಳಿಯುವದು; ಸತ್ತರೆ ಬಹಳ ಫಲಕೊಡುವದು.


ನೀರಾವರಿಗಳಲ್ಲೆಲ್ಲಾ ಬೀಜಬಿತ್ತುತ್ತಲೂ ದನ ಕತ್ತೆಗಳನ್ನು [ಕಾವಲಿಗೆ] ಮೇಯಬಿಡುತ್ತಲೂ ಇರುವ ನೀವು ಧನ್ಯರೇ ಸರಿ!


ಮುಂಜಾನೆ ಬೀಜ ಬಿತ್ತು, ಸಂಜೆಯತನಕ ಕೈದೆಗೆಯಬೇಡ; ಇದು ಸಫಲವೋ, ಅದು ಸಫಲವೋ, ಒಂದು ವೇಳೆ ಎರಡೂ ಚೆನ್ನಾಗುವವೋ ನಿನಗೆ ತಿಳಿಯದು. ಬೆಳಕು ಇಂಪು; ಸೂರ್ಯನನ್ನು ಕಾಣುವದು ಕಣ್ಣಿಗೆ ಹಿತ.


ಗಾಳಿಯನ್ನು ನೋಡುತ್ತಲೇ ಇರುವವನು ಬೀಜ ಬಿತ್ತನು; ಮೋಡಗಳನ್ನು ಗಮನಿಸುತ್ತಲೇ ಇರುವವನು ಪೈರು ಕೊಯ್ಯನು .


ಅಧರ್ಮಿಯ ಸಂಬಳವು ಜೊಳ್ಳು; ಧರ್ಮವನ್ನು ಬಿತ್ತುವವನ ಲಾಭವು ಗಟ್ಟಿ.


ಆತನು ಹೇಳಿದ್ದೇನಂದರೆ - ದೇವರ ರಾಜ್ಯವು ಯಾವದಕ್ಕೆ ಹೋಲಿಕೆಯಾಗಿದೆ?


ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು; ಅದೇನಂದರೆ - ಪರಲೋಕ ರಾಜ್ಯವು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಹೆಂಗಸು ತಕ್ಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿಡಲು ಆ ಹಿಟ್ಟೆಲ್ಲಾ ಹುಳಿಯಾಯಿತು.


ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು; ಅದೇನಂದರೆ - ಪರಲೋಕರಾಜ್ಯವು ಸಾಸಿವೆಕಾಳಿಗೆ ಹೋಲಿಕೆಯಾಗಿದೆ. ಒಬ್ಬ ಮನುಷ್ಯನು ಅದನ್ನು ತೆಗೆದುಕೊಂಡು ಹೋಗಿ ತನ್ನ ಹೊಲದಲ್ಲಿ ಬಿತ್ತಿದನು.


ಅದಕ್ಕಾತನು ಅವರಿಗೆ - ಪರಲೋಕರಾಜ್ಯದ ಗುಟ್ಟುಗಳನ್ನು ತಿಳಿಯುವ ವರವು ನಿಮಗೇ ಕೊಟ್ಟದೆ; ಅವರಿಗೆ ಕೊಟ್ಟಿಲ್ಲ.


ಆಗ ಆತನು ಅವರಿಗೆ ಸಾಮ್ಯರೂಪವಾಗಿ ಅನೇಕ ಸಂಗತಿಗಳನ್ನು ಹೇಳಿದನು. ಹೇಗಂದರೆ -


ಅಂದಿನಿಂದ ಯೇಸು - ಪರಲೋಕರಾಜ್ಯವು ಸಮೀಪಿಸಿತು; ದೇವರ ಕಡೆಗೆ ತಿರುಗಿಕೊಳ್ಳಿರಿ ಎಂದು ಸಾರಿ ಹೇಳುವದಕ್ಕೆ ಪ್ರಾರಂಭಿಸಿದನು.


ಪರಲೋಕರಾಜ್ಯವು ಸಮೀಪವಾಯಿತು; ದೇವರ ಕಡೆಗೆ ತಿರುಗಿಕೊಳ್ಳಿರಿ ಎಂದು ಯೂದಾಯದ ಅಡವಿಯಲ್ಲಿ ಸಾರಿ ಹೇಳುತ್ತಾ ಬಂದನು.


ಇದ್ದವನಿಗೆ ಕೊಡಲ್ಪಡುವದು; ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವದು ಎಂದು ಹೇಳಿದನು.


ಅವನಿಗೆ ತಿಳಿಯದ ರೀತಿಯಲ್ಲಿ ಆ ಬೀಜವು ಹುಟ್ಟಿ ಬೆಳೆಯುವದು. ಇದರಂತೆ ದೇವರ ರಾಜ್ಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು