Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 4:27 - ಕನ್ನಡ ಸತ್ಯವೇದವು J.V. (BSI)

27 ಅವನಿಗೆ ತಿಳಿಯದ ರೀತಿಯಲ್ಲಿ ಆ ಬೀಜವು ಹುಟ್ಟಿ ಬೆಳೆಯುವದು. ಇದರಂತೆ ದೇವರ ರಾಜ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅವನಿಗೆ ತಿಳಿಯದ ರೀತಿಯಲ್ಲಿ ಆ ಬೀಜದ ಸಸಿ ಮೊಳೆತು ಬೆಳೆಯುವುದು. ಇದರಂತೆ ದೇವರ ರಾಜ್ಯವೂ ಕೂಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಬಿತ್ತನೆಯಾದ ಬಳಿಕ ಅವನು ರಾತ್ರಿಯಲ್ಲಿ ಮಲಗಿರಲಿ, ಹಗಲಲ್ಲಿ ಎದ್ದಿರಲಿ, ಅವನಿಗೆ ಹೇಗೆಂದು ತಿಳಿಯದೆಯೇ ಆ ಬೀಜವು ಮೊಳೆತು ಬೆಳೆಯುತ್ತಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಬೀಜವು ಹಗಲಿರುಳು ಬೆಳೆಯುತ್ತದೆ. ರೈತನು ಮಲಗಿರುವಾಗಲೂ ಎಚ್ಚರದಿಂದಿರುವಾಗಲೂ ಬೀಜ ಬೆಳೆಯುತ್ತಲೇ ಇರುವುದು. ಬೀಜ ಹೇಗೆ ಬೆಳೆಯುತ್ತದೆಂಬುದು ರೈತನಿಗೆ ತಿಳಿಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ರಾತ್ರಿ ಅವನು ಮಲಗಿದ್ದರೂ ಹಗಲು ಎದ್ದಿದ್ದರೂ ಆ ಬೀಜವು ಅವನಿಗೆ ತಿಳಿಯದ ರೀತಿಯಲ್ಲಿ ಅಂಕುರಿಸಿ ಬೆಳೆಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ತೊ ರಾಚ್ಚೆ ನಿಜ್ತಲೆ, ದಿಸಾಂಚೆ ಉಟ್ತಲೆ ಕರಿತ್ ರ್‍ಹಾತಾ, ಖರೆ, ತೆ ಭ್ಹಿಂಯ್ ಉಗಾವ್ತಾ, ಅನಿ ವಾಡ್ತಾ, ಅನಿ ಹೆ ಕಶೆ ಹೊತಾ, ಮನುನ್ ತೆಕಾ ಗೊತ್ತ್ ರ್‍ಹಾಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 4:27
8 ತಿಳಿವುಗಳ ಹೋಲಿಕೆ  

ಗಾಳಿಯ ಗತಿಯನ್ನೂ ಗರ್ಭಿಣಿಯ ಗರ್ಭದೊಳಗೆ ಎಲುಬು ಬೆಳೆಯುವ ರೀತಿಯನ್ನೂ ನೀನು ಹೇಗೆ ತಿಳಿಯುವದಿಲ್ಲವೋ ಹಾಗೆ ಸರ್ವಕರ್ತನಾದ ದೇವರ ಕಾರ್ಯವನ್ನು ಅರಿಯೆ.


ಸಹೋದರರೇ, ನಾವು ಯಾವಾಗಲೂ ನಿಮ್ಮ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ಧರಾಗಿದ್ದೇವೆ. ಹಾಗೆ ಮಾಡುವದು ಯೋಗ್ಯ; ಯಾಕಂದರೆ ನಿಮ್ಮ ನಂಬಿಕೆಯು ಬಹಳ ಅಭಿವೃದ್ಧಿ ಹೊಂದುತ್ತಾ ಬರುತ್ತದೆ, ಪರಸ್ಪರವಾದ ಪ್ರೀತಿ ನಿಮ್ಮೆಲ್ಲರಲ್ಲಿಯೂ ಹೆಚ್ಚುತ್ತಾ ಬರುತ್ತದೆ.


ಲೋಕದಲ್ಲಿ ನಡೆಯುವದನ್ನು ಮನುಷ್ಯನು ಗ್ರಹಿಸಲಾರನು, ಎಷ್ಟು ಪ್ರಯಾಸಪಟ್ಟು ವಿಚಾರಿಸಿದರೂ ಗ್ರಹಿಸಲಾರನು; ಹೌದು, ಜ್ಞಾನಿಯು ಗ್ರಹಿಸಬಹುದೆಂದರೂ ಗ್ರಹಿಸಲಾರನು ಎಂಬದಾಗಿ ನಾನು ದೇವರ ಕೆಲಸವನ್ನೆಲ್ಲಾ ದೃಷ್ಟಿಸಿ ತಿಳಿದುಕೊಂಡೆನು.


ನೀವು ಕೃಪೆಯಲ್ಲಿಯೂ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನದಲ್ಲಿಯೂ ಅಭಿವೃದ್ಧಿಯನ್ನು ಹೊಂದುತ್ತಾ ಇರ್ರಿ. ಆತನಿಗೆ ಈಗಲೂ ಸದಾಕಾಲವೂ ಸ್ತೋತ್ರ. ಆಮೆನ್.


ಇನ್ನೂ ಆತನು ಅವರಿಗೆ ಹೇಳಿದ್ದು - ಒಬ್ಬನು ಭೂವಿುಯಲ್ಲಿ ಬೀಜವನ್ನು ಹಾಕಿ ರಾತ್ರಿ ಮಲಗುತ್ತಾ ಹಗಲು ಎದ್ದಿರುತ್ತಾ ಇರಲು


ಭೂವಿುಯು ಮೊದಲು ಗರಿಯನ್ನೂ, ಆಮೇಲೆ ಹೊಡೆಯನ್ನೂ, ತರುವಾಯ ತೆನೆಯಲ್ಲಿ ತುಂಬಾ ಕಾಳನ್ನೂ ತನ್ನಷ್ಟಕ್ಕೆ ತಾನೇ ಹುಟ್ಟಿಸುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು