Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 5:15 - ಕನ್ನಡ ಸತ್ಯವೇದವು J.V. (BSI)

15 ಅಂದರೆ ದೆವ್ವಗಳ ದಂಡಿನಿಂದ ಹಿಡಿಯಲ್ಪಟ್ಟಿದ್ದವನು, ಬಟ್ಟೆಗಳನ್ನು ಹಾಕಿಕೊಂಡು ಸ್ವಸ್ಥಬುದ್ಧಿಯಿಂದ ಕೂತಿರುವದನ್ನು ನೋಡಿ ಹೆದರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆ ದೆವ್ವಹಿಡಿದಿದ್ದವನು ಅಂದರೆ ದೆವ್ವಗಳ ದಂಡಿನಿಂದ ಬಂಧಿಸಲ್ಪಟ್ಟವನು, ಬಟ್ಟೆಗಳನ್ನು ಹಾಕಿಕೊಂಡು ಸುಬುದ್ಧಿಯಿಂದ ಕುಳಿತಿರುವುದನ್ನು ನೋಡಿ ಹೆದರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ದೆವ್ವಗಣದಿಂದ ಪೀಡಿತನಾಗಿದ್ದವನು ಈಗ ಬಟ್ಟೆಯನ್ನು ತೊಟ್ಟುಕೊಂಡು, ಸ್ವಸ್ಥಬುದ್ಧಿಯುಳ್ಳವನಾಗಿ ಕುಳಿತಿರುವುದನ್ನು ಕಂಡು ಅವರೆಲ್ಲರೂ ಗಾಬರಿಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆಗ ಜನರು ನಡೆದ ಸಂಗತಿಯನ್ನು ನೋಡಲು ಯೇಸುವಿನ ಬಳಿಗೆ ಬಂದರು. ಅನೇಕ ದೆವ್ವಗಳಿಂದ ಪೀಡಿತನಾಗಿದ್ದ ಮನುಷ್ಯನು ಬಟ್ಟೆ ಹಾಕಿಕೊಂಡು ಅಲ್ಲಿ ಕುಳಿತಿರುವುದನ್ನು ಅವರು ಕಂಡರು. ಅವನು ಮತ್ತೆ ಸ್ವಸ್ಥ ಬುದ್ಧಿಯುಳ್ಳವನಾಗಿದ್ದನು. ಆ ಜನರು ಅವನನ್ನು ನೋಡಿ ಹೆದರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅವರು ಯೇಸುವಿನ ಬಳಿಗೆ ಬಂದಾಗ, ದೆವ್ವಗಳ ಸೇನೆಯಿಂದ ಪೀಡಿತನಾಗಿದ್ದವನು ಬಟ್ಟೆಗಳನ್ನು ಧರಿಸಿಕೊಂಡು ಸ್ವಸ್ಥಬುದ್ಧಿಯುಳ್ಳವನಾಗಿ ಕುಳಿತಿರುವುದನ್ನು ಕಂಡು ಭಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತೆನಿ, ಜೆಜುಕ್ಡೆ ಯೆಲ್ಲ್ಯಾ ತನ್ನಾ, ತ್ಯಾ ಗಿರ್‍ಯಾಂಚೊ ತಾಂಡೊ ಲಾಗಲ್ಲ್ಯಾ ಮಾನ್ಸಾಕ್ ಬಗಟ್ಲ್ಯಾನಿ, ತೊ ಥೈ ಬಸಲ್ಲೊ, ತೆನಿ ಬರೆ ಕಪ್ಡೆ ನೆಸಲ್ಲ್ಯಾನ್, ತೊ ಬರ್‍ಯಾ ಬುದ್ದಿನಿ ಬಸಲ್ಲೊ; ಅನಿ ತೆನಿ, ಸಗ್ಳೆ ಜಾನಾ ಭಿಂವ್ನ್ ಗೆಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 5:15
21 ತಿಳಿವುಗಳ ಹೋಲಿಕೆ  

ದೇವರು ನಮ್ಮನ್ನು ಅಂಧಕಾರದ ದೊರೆತನದಿಂದ ಬಿಡಿಸಿ ತನ್ನ ಪ್ರಿಯ ಕುಮಾರನ ರಾಜ್ಯದೊಳಗೆ ಸೇರಿಸಿದನು.


ದೇವರು ನಮಗೆ ಕೊಟ್ಟಿರುವ ಆತ್ಮವು ಬಲ ಪ್ರೀತಿ ಶಿಕ್ಷಣಗಳ ಆತ್ಮವೇ ಹೊರತು ಹೇಡಿತನದ ಆತ್ಮವಲ್ಲ.


ಆತನು ದಡಕ್ಕೆ ಇಳಿಯುತ್ತಲೇ ಆ ಊರಿನವನಾದ ಒಬ್ಬ ಮನುಷ್ಯನು ಆತನೆದುರಿಗೆ ಬಂದನು. ಅವನಿಗೆ ದೆವ್ವಗಳು ಹಿಡಿದಿದ್ದವು. ಬಹುಕಾಲದಿಂದ ಬಟ್ಟೆಯನ್ನೇ ಹಾಕಿಕೊಳ್ಳದೆ ಯಾವ ಮನೆಯಲ್ಲಿಯೂ ಇರದೆ ಸಮಾಧಿಯ ಗವಿಗಳಲ್ಲಿಯೇ ಇರುತ್ತಿದ್ದನು.


ಮತ್ತು - ನಿನ್ನ ಹೆಸರೇನೆಂದು ಅವನನ್ನು ಕೇಳಿದ್ದಕ್ಕೆ ಅವನು - ನನ್ನ ಹೆಸರು ದಂಡು; ಯಾಕಂದರೆ ನಾವು ಬಹು ಮಂದಿ ಇದ್ದೇವೆ ಎಂದು ಹೇಳಿ -


ಆಕೆಗೆ ಮರಿಯಳೆಂಬ ಒಬ್ಬ ತಂಗಿ ಇದ್ದಳು. ಈಕೆಯು ಸ್ವಾವಿುಯ ಪಾದಗಳ ಬಳಿಯಲ್ಲಿ ಕೂತುಕೊಂಡು ಆತನ ವಾಕ್ಯವನ್ನು ಕೇಳುತ್ತಿದ್ದಳು.


ಯೆಹೋವನು ಹೇಳಿದಂತೆಯೇ ಸಮುವೇಲನು ಬೇತ್ಲೆಹೇವಿುಗೆ ಹೋದನು. ಆ ಊರಿನ ಹಿರಿಯರು ನಡುಗುತ್ತಾ ಬಂದು ಅವನನ್ನು ಎದುರುಗೊಂಡು ನಿನ್ನ ಆಗಮನವು ನಮಗೆ ಶುಭಕರವಾಗಿದೆಯೇ ಎಂದು ಕೇಳಲು ಅವನು -


ಫಕ್ಕನೆ ಅವರು ಭಯಭ್ರಾಂತರಾಗುವರು; ಯಾಕಂದರೆ ದೇವರು ನೀತಿವಂತರ ಪಕ್ಷದಲ್ಲಿದ್ದಾನೆ.


ಆತನ ಶ್ರೇಷ್ಠತೆಯು ನಿಮ್ಮನ್ನು ಹೆದರಿಸುವದಿಲ್ಲವೋ? ಆತನ ಭಯವು ನಿಮ್ಮ ಮೇಲೆ ಬೀಳುವದಿಲ್ಲವೋ?


ನೀವು ಮೊದಲನೆಯ ಸಾರಿ ಇರಲಿಲ್ಲವಾದದರಿಂದ ನಮ್ಮ ದೇವರಾದ ಯೆಹೋವನು ತನ್ನ ಸನ್ನಿಧಿಗೆ ಧರ್ಮವಿಧಿ ವಿರೋಧವಾಗಿ ಬಂದ ನಮ್ಮಲ್ಲಿ ಒಬ್ಬನನ್ನು ಸಂಹರಿಸಿದನಷ್ಟೆ ಎಂದು ಹೇಳಲು


ಆತನು ದೋಣಿಯನ್ನು ಹತ್ತುವಾಗ ಆ ದೆವ್ವಹಿಡಿದಿದ್ದವನು - ನಾನು ನಿನ್ನ ಬಳಿಯಲ್ಲಿಯೇ ಇರುತ್ತೇನೆಂದು ಆತನನ್ನು ಬೇಡತೊಡಗಿದನು.


ನಡೆದ ಸಂಗತಿಯನ್ನು ನೋಡಿದ್ದವರು ಆ ದೆವ್ವಹಿಡಿದಿದ್ದವನಿಗೆ ಹೀಗೆ ಹೀಗಾಯಿತೆಂಬದನ್ನೂ ಹಂದಿಗಳ ವಿಷಯವನ್ನೂ ಅವರಿಗೆ ವಿವರಿಸಲು


ಇದಲ್ಲದೆ ಒಬ್ಬನು ಮೊದಲು ಬಲಿಷ್ಠನನ್ನು ಕಟ್ಟಿಹಾಕದೆ ಅ ಬಲಿಷ್ಠನ ಮನೆಯನ್ನು ಹೊಕ್ಕು ಅವನ ಸೊತ್ತನ್ನು ಸುಲುಕೊಳ್ಳುವದು ಹೇಗೆ? ಕಟ್ಟಿಹಾಕಿದ ಮೇಲೆ ಅವನ ಮನೆಯನ್ನು ಸುಲುಕೊಂಡಾನು.


ಆತನ ಸುದ್ದಿಯು ಸಿರಿಯ ದೇಶದಲ್ಲೆಲ್ಲಾ ಹಬ್ಬಿದ್ದರಿಂದ ಮೈಯಲ್ಲಿ ನೆಟ್ಟಗಿಲ್ಲದವರನ್ನು, ಅಂದರೆ ತರತರದ ರೋಗಬಾಧೆಗಳಿಂದ ಕಷ್ಟಪಡುವವರನ್ನೂ ದೆವ್ವ ಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯುವಿನವರನ್ನೂ ಆತನ ಬಳಿಗೆ ಕರತಂದರು; ಆತನು ಅವರನ್ನು ಸ್ವಸ್ಥಮಾಡಿದನು.


ಆತನು ದೆವ್ವಬಿಡಿಸಿದ ಮೇಲೆ ಆ ಮೂಕನು ಮಾತಾಡುವವನಾದನು. ಅದಕ್ಕೆ ಆ ಜನರು - ಇಸ್ರಾಯೇಲ್ ಜನರಲ್ಲಿ ಇಂಥ ಕಾರ್ಯವನ್ನು ಇದುವರೆಗೆ ಯಾರೂ ನೋಡಲಿಲ್ಲವೆಂದು ಬೆರಗಾದರು.


ಆ ದಿವಸ ದಾವೀದನು ದೇವರಿಗೆ ಭಯಪಟ್ಟು - ದೇವರ ಮಂಜೂಷವನ್ನು ನಾನಿರುವಲ್ಲಿಗೆ ತೆಗೆದುಕೊಂಡು ಹೋಗುವದು ಹೇಗೆ ಎಂದುಕೊಂಡು


ನಾನು ನನ್ನ ತಂದೆಯನ್ನು ಬೇಡಿಕೊಳ್ಳಲಾರೆನೆಂದೂ ಬೇಡಿಕೊಂಡರೆ ಆತನು ನನಗೆ ಈಗಲೇ ಹನ್ನೆರಡು ಗಣಗಳಿಗಿಂತ ಹೆಚ್ಚು ಮಂದಿ ದೇವದೂತರನ್ನು ಕಳುಹಿಸಿಕೊಡುವದಿಲ್ಲವೆಂದೂ ನೆನಸುತ್ತೀಯಾ?


ಅವುಗಳನ್ನು ಮೇಯಿಸುವವರು ಓಡಿಹೋಗಿ ಆ ಊರಲ್ಲಿಯೂ ಹಳ್ಳಿಗಳಲ್ಲಿಯೂ ತಿಳಿಸಲು ಜನರು ನಡೆದ ಸಂಗತಿ ಏನೆಂದು ನೋಡುವದಕ್ಕೆ ಹೊರಟು ಯೇಸುವಿದ್ದಲ್ಲಿಗೆ ಬಂದು ಆ ದೆವ್ವಹಿಡಿದಿದ್ದವನು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು