Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 5:2 - ಕನ್ನಡ ಸತ್ಯವೇದವು J.V. (BSI)

2 ಆತನು ದೋಣಿಯಿಂದ ಇಳಿದುಬಂದ ಕೂಡಲೆ ದೆವ್ವಹಿಡಿದವನೊಬ್ಬನು ಸಮಾಧಿಯ ಗವಿಗಳೊಳಗಿಂದ ಆತನೆದುರಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೇಸು ದೋಣಿಯಿಂದ ಇಳಿದು ಬಂದ ಕೂಡಲೆ ದೆವ್ವ ಹಿಡಿದ ಒಬ್ಬ ಮನುಷ್ಯನು ಸಮಾಧಿಯ ಗವಿಗಳೊಳಗಿಂದ ಬಂದು ಆತನನ್ನು ಸಂಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಯೇಸುಸ್ವಾಮಿ ದೋಣಿಯಿಂದ ಇಳಿಯುತ್ತಲೇ, ದೆವ್ವ ಹಿಡಿದಿದ್ದ ಒಬ್ಬನು ಸಮಾಧಿಯ ಗುಹೆಯೊಳಗಿಂದ ಅವರ ಎದುರಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೇಸು ದೋಣಿಯಿಂದ ಹೊರಕ್ಕೆ ಬಂದಾಗ, ಒಬ್ಬ ಮನುಷ್ಯನು ಸಮಾಧಿಯ ಗವಿಗಳಿಂದ ಆತನ ಬಳಿಗೆ ಬಂದನು. ಅವನಿಗೆ ದೆವ್ವಹಿಡಿದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೇಸು ದೋಣಿಯಿಂದ ಇಳಿದುಬರುವಾಗ, ಅಶುದ್ಧಾತ್ಮವುಳ್ಳ ಒಬ್ಬನು ಸಮಾಧಿಯ ಗುಹೆಯೊಳಗಿಂದ ಹೊರಬಂದು ಅವರನ್ನು ಸಂಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಜೆಜು, ಢೊನಿತ್ನಾ ಉತ್ರುನ್ ಯೆಲ್ಲ್ಯಾ ತನ್ನಾ, ಎಕ್ ಮಾನುಸ್ ಮಸಂಕಿತ್ನಾ ಭಾಯ್ರ್ ಯೆಲೊ, ಅನಿ ಜೆಜುಕ್ ಭೆಟ್ಲೊ. ತ್ಯಾ ಮಾನ್ಸಾಚ್ಯಾ ಆಂಗಾತ್ ಗಿರೊ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 5:2
13 ತಿಳಿವುಗಳ ಹೋಲಿಕೆ  

ಆಗ ಅವರ ಸಭಾಮಂದಿರದಲ್ಲಿ ದೆವ್ವಹಿಡಿದ ಒಬ್ಬ ಮನುಷ್ಯನಿದ್ದನು.


ಯಾಕಂದರೆ - ಎಲಾ ದೆವ್ವಾ, ಇವನನ್ನು ಬಿಟ್ಟುಹೋಗು ಎಂದು ಯೇಸು ಹೇಲಿದನು.


ಗುಪ್ತಸ್ಥಳಗಳಲ್ಲಿ ರಾತ್ರಿಕಳೆಯುತ್ತಾ ಹಂದಿಯ ಬಾಡು ತಿನ್ನುತ್ತಾ ಅಸಹ್ಯಪದಾರ್ಥಗಳ ಸಾರನ್ನು ತಮ್ಮ ಗಂಗಳಗಳಲ್ಲಿ ಬಡಿಸಿಕೊಳ್ಳುತ್ತಾ ಅಲ್ಲಿ ನಿಂತಿರು,


ಆ ಹುಡುಗನು ಇನ್ನೂ ಬರುತ್ತಿರುವಾಗ ಆ ದೆವ್ವವು ಅವನನ್ನು ನೆಲಕ್ಕೆ ಅಪ್ಪಳಿಸಿ ಬಹಳವಾಗಿ ಒದ್ದಾಡಿಸಿತು. ಆದರೆ ಯೇಸು ಆ ದೆವ್ವವನ್ನು ಗದರಿಸಿ ಆ ಹುಡುಗನಿಗೆ ವಾಸಿಮಾಡಿ ಅವನ ತಂದೆಯ ಕೈಗೆ ಕೊಟ್ಟನು.


ಆತನು ದಡಕ್ಕೆ ಇಳಿಯುತ್ತಲೇ ಆ ಊರಿನವನಾದ ಒಬ್ಬ ಮನುಷ್ಯನು ಆತನೆದುರಿಗೆ ಬಂದನು. ಅವನಿಗೆ ದೆವ್ವಗಳು ಹಿಡಿದಿದ್ದವು. ಬಹುಕಾಲದಿಂದ ಬಟ್ಟೆಯನ್ನೇ ಹಾಕಿಕೊಳ್ಳದೆ ಯಾವ ಮನೆಯಲ್ಲಿಯೂ ಇರದೆ ಸಮಾಧಿಯ ಗವಿಗಳಲ್ಲಿಯೇ ಇರುತ್ತಿದ್ದನು.


ಕೂಡಲೆ ಒಬ್ಬ ಹೆಂಗಸು ಆತನ ಸುದ್ದಿಯನ್ನು ಕೇಳಿ ಬಂದು ಆತನ ಪಾದಕ್ಕೆ ಬಿದ್ದಳು.


ಆತನು ತಿರಿಗಿ ಸಮುದ್ರದ ದಡದಲ್ಲಿ ಉಪದೇಶ ಮಾಡುತ್ತಿದ್ದನು. ಬಹುಜನರು ಆತನ ಬಳಿಗೆ ಕೂಡಿ ಬಂದದ್ದರಿಂದ ಆತನು ಸಮುದ್ರದಲ್ಲಿದ್ದ ದೋಣಿಹತ್ತಿ ಕೂತುಕೊಂಡನು;


ಆ ದೆವ್ವವು ಅವನನ್ನು ಒದ್ದಾಡಿಸಿ ಅಬ್ಬರಿಸಿಕೂಗಿ ಬಿಟ್ಟು ಹೋಯಿತು.


ಜನರು ಗುಂಪಾಗಿದ್ದದರಿಂದ ಮೈಮೇಲೆ ಬಿದ್ದು ನೂಕಾರೆಂದು ಆತನು ತನಗೆ ಒಂದು ದೋಣಿಯು ಸಿದ್ಧವಾಗಿರಲಿ ಎಂಬದಾಗಿ ಶಿಷ್ಯರಿಗೆ ಹೇಳಿದನು.


ಅವರು ಆ ಜನರ ಗುಂಪನ್ನು ಬಿಟ್ಟು ಆತನನ್ನು ಅದೇ ದೋಣಿಯಲ್ಲಿ ಹಾಗೆಯೇ ಕರಕೊಂಡುಹೋದರು.


ಅವನಿಗೆ ಸಮಾಧಿಯ ಗವಿಗಳೇ ವಾಸಸ್ಥಳವಾಗಿದ್ದವು. ಅವನನ್ನು ಅನೇಕಸಾರಿ ಬೇಡಿಗಳಿಂದಲೂ ಸರಪಣಿಗಳಿಂದಲೂ ಕಟ್ಟಿದ್ದರೂ ಅವನು ಸರಪಣಿಗಳನ್ನು ಕಿತ್ತು ಬೇಡಿಗಳನ್ನು ಮುರಿದುಹಾಕಿದ್ದನು; ಅವನನ್ನು ಇನ್ನು ಯಾರೂ ಸರಪಣಿಯಿಂದಾದರೂ ಕಟ್ಟಲಾರದೆ ಹೋದರು; ಅವನನ್ನು ಹತೋಟಿಗೆ ತರುವದಕ್ಕೆ ಯಾರಿಂದಲೂ ಆಗಲಿಲ್ಲ.


ಯೇಸು ತಿರಿಗಿ ದೋಣಿಯಲ್ಲಿ ಈಚೇದಡಕ್ಕೆ ಬಂದಾಗ ಜನರು ಬಹು ದೊಡ್ಡ ಗುಂಪಾಗಿ ಆತನ ಬಳಿಗೆ ಬಂದರು; ಆತನು ಸಮುದ್ರದ ದಡದಲ್ಲಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು