Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 5:26 - ಕನ್ನಡ ಸತ್ಯವೇದವು J.V. (BSI)

26 ಆಕೆಯು ಅನೇಕ ವೈದ್ಯರಿಂದ ಬಹು ಕಷ್ಟವನ್ನು ಅನುಭವಿಸಿ ಕೈಯಲ್ಲಿದ್ದದ್ದನ್ನೆಲ್ಲಾ ಕಳಕೊಂಡರೂ ರೋಗವು ಹೆಚ್ಚುತ್ತಾ ಬಂದದ್ದೇ ಹೊರತು ಮತ್ತೇನು ಪ್ರಯೋಜನವನ್ನೂ ಹೊಂದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅನೇಕ ವೈದ್ಯರ ಚಿಕಿತ್ಸೆಯಿಂದ ಆಕೆಯು ಬಹು ಕಷ್ಟವನ್ನು ಅನುಭವಿಸಿ, ಕೈಯಲ್ಲಿದ್ದ ಹಣವನ್ನೆಲ್ಲಾ ವ್ಯಯಮಾಡಿದ್ದರೂ ಅವಳ ರೋಗ ಮಾತ್ರ ಹೆಚ್ಚುತ್ತಾ ಬಂದಿತ್ತೇ ಹೊರತು ಸ್ವಲ್ಪವೂ ಗುಣಮುಖ ಆಗುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅನೇಕ ವೈದ್ಯರಿಂದ ಚಿಕಿತ್ಸೆಪಡೆದಿದ್ದರೂ ಕೈಯಲ್ಲಿದ್ದ ಹಣವನ್ನೆಲ್ಲಾ ವ್ಯಯಮಾಡಿದ್ದರೂ ಅವಳ ರೋಗ ಮಾತ್ರ ಉಲ್ಬಣ ಆಗುತ್ತಿತ್ತೇ ಹೊರತು ಸ್ವಲ್ಪವೂ ಗುಣಮುಖ ಆಗುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆಕೆಯು ಬಹಳ ಸಂಕಟಪಟ್ಟಿದ್ದಳು. ಅವಳಿಗೆ ಸಹಾಯ ಮಾಡಲು ಅನೇಕ ವೈದ್ಯರು ಪ್ರಯತ್ನಿಸಿದ್ದರು. ಆಕೆಯಲ್ಲಿದ್ದ ಹಣವೆಲ್ಲವೂ ವೆಚ್ಚವಾಯಿತು. ಆದರೆ ಆಕೆಗೆ ವಾಸಿಯಾಗಲಿಲ್ಲ. ಅವಳ ಕಾಯಿಲೆಯು ಇನ್ನೂ ಹೆಚ್ಚಾಗುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆಕೆ ಅನೇಕ ವೈದ್ಯರ ಚಿಕಿತ್ಸೆಯಿಂದ ಬಹು ಶ್ರಮಪಟ್ಟು, ತನಗಿದ್ದದ್ದೆಲ್ಲವನ್ನು ಖರ್ಚು ಮಾಡಿದ್ದರೂ ಸ್ವಲ್ಪವೂ ಪ್ರಯೋಜನವಾಗದೆ ಆ ರೋಗವು ಇನ್ನೂ ಹೆಚ್ಚಾಗುತ್ತಾ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ತೆನಿ, ಲೈ ಕಸ್ಟ್ ಸೊಸಲ್ಲಿನ್, ಸಗ್ಳ್ಯಾ ವಗ್ದುಳ್ಯಾನಿಕ್ನಿ, ತಿ ಗೆಲಿ, ಖರೆ, ಕಾಯ್ಬಿ ಪ್ರಯೊಜನ್ ಹೊವಕ್ನಾ. ತಿಚೆಕ್ಡೆ ಹೊತ್ತೆ, ಸಗ್ಳೆ ಪೈಸೆ ತೆನಿ ಸಾರ್ಲಿನ್, ಖರೆ, ತಿಚೊ ರೊಗ್ ಅನಿ ಉಲ್ಲೊ ಜಾಸ್ತಿಚ್ ಹೊಯ್, ಖರೆ, ಕಮಿ ಹೊಯ್ನಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 5:26
8 ತಿಳಿವುಗಳ ಹೋಲಿಕೆ  

ಗಿಲ್ಯಾದಿನಲ್ಲಿ ಔಷಧವಿಲ್ಲವೋ? ಅಲ್ಲಿ ವೈದ್ಯನು ಸಿಕ್ಕನೋ? ನನ್ನ ಪ್ರಜೆಯೆಂಬಾಕೆಗೆ ಏಕೆ ಗುಣವಾಗಲಿಲ್ಲ?


ನಮಗೆ ಕೈಕೊಟ್ಟು ಶತ್ರುಬಾಧೆಯಿಂದ ಪಾರುಮಾಡು. ಮನುಷ್ಯರ ಸಹಾಯವು ವ್ಯರ್ಥ.


ಬಾಬೆಲ್ ತಟ್ಟನೆ ಬಿದ್ದು ಹಾಳಾಯಿತು! ಅದಕ್ಕಾಗಿ ಅರಿಚಿರಿ; ಅದರ ನೋವನ್ನು ನೀಗಿಸುವದಕ್ಕೆ ಔಷಧವನ್ನು ಸಂಪಾದಿಸಿರಿ, ಗುಣವಾದೀತು.


ನೀವಾದರೋ ಸುಳ್ಳನ್ನು ಮೆತ್ತುವವರಾಗಿದ್ದೀರಿ, ನೀವೆಲ್ಲರೂ ವ್ಯರ್ಥವೈದ್ಯರೇ.


ಆಗ ಹನ್ನೆರಡು ವರುಷದಿಂದ ರಕ್ತ ಕುಸುಮರೋಗವಿದ್ದ ಒಬ್ಬ ಹೆಂಗಸು ಬಂದಳು.


ಆ ಹೆಂಗಸು ಯೇಸುವಿನ ಸಮಾಚಾರವನ್ನು ಕೇಳಿ - ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ನೆಟ್ಟಗಾಗುವೆನು ಎಂದು ಆಲೋಚಿಸಿ


ಆಗ ಹನ್ನೆರಡು ವರುಷದಿಂದ ರಕ್ತಕುಸುಮ ರೋಗವಿದ್ದ ಒಬ್ಬ ಹೆಂಗಸು ಬಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು