Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 5:3 - ಕನ್ನಡ ಸತ್ಯವೇದವು J.V. (BSI)

3-4 ಅವನಿಗೆ ಸಮಾಧಿಯ ಗವಿಗಳೇ ವಾಸಸ್ಥಳವಾಗಿದ್ದವು. ಅವನನ್ನು ಅನೇಕಸಾರಿ ಬೇಡಿಗಳಿಂದಲೂ ಸರಪಣಿಗಳಿಂದಲೂ ಕಟ್ಟಿದ್ದರೂ ಅವನು ಸರಪಣಿಗಳನ್ನು ಕಿತ್ತು ಬೇಡಿಗಳನ್ನು ಮುರಿದುಹಾಕಿದ್ದನು; ಅವನನ್ನು ಇನ್ನು ಯಾರೂ ಸರಪಣಿಯಿಂದಾದರೂ ಕಟ್ಟಲಾರದೆ ಹೋದರು; ಅವನನ್ನು ಹತೋಟಿಗೆ ತರುವದಕ್ಕೆ ಯಾರಿಂದಲೂ ಆಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3-4 ಅವನಿಗೆ ಸಮಾಧಿಯಲ್ಲಿನ ಗವಿಗಳೇ ವಾಸಸ್ಥಳವಾಗಿತ್ತು. ಅವನನ್ನು ಅನೇಕಸಾರಿ ಬೇಡಿಗಳಿಂದ ಮತ್ತು ಸರಪಣಿಗಳಿಂದ ಕಟ್ಟಿದ್ದರೂ ಅವನು ಸರಪಣಿಗಳನ್ನು ಕಿತ್ತು ಬೇಡಿಗಳನ್ನು ತುಂಡುತುಂಡು ಮಾಡುಬಿಡುತಿದ್ದನು; ಅವನನ್ನು ಯಾರೂ ಯಾವ ಸರಪಣಿಯಿಂದಲೂ ಕಟ್ಟಲಾರದೆ ಹೋದರು; ಅವನನ್ನು ಹತೋಟಿಗೆ ತರುವುದಕ್ಕೆ ಯಾರಿಂದಲೂ ಆಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸಮಾಧಿಯ ಗುಹೆಗಳೇ ಅವನಿಗೆ ವಾಸಸ್ಥಳವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅವನು ಸಮಾಧಿಯ ಗವಿಗಳಲ್ಲಿ ವಾಸಿಸುತ್ತಿದ್ದನು. ಅವನನ್ನು ಕಟ್ಟಿಹಾಕಲು ಯಾರಿಗೂ ಸಾಧ್ಯವಿರಲಿಲ್ಲ. ಅವನನ್ನು ಸರಪಣಿಗಳಿಂದ ಕಟ್ಟಿದರೂ ಪ್ರಯೋಜನವಾಗುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವನು ಸಮಾಧಿಯ ಗುಹೆಗಳ ನಡುವೆ ವಾಸಿಸುತ್ತಿದ್ದನು ಮತ್ತು ಯಾರಿಗೂ ಅವನನ್ನು ಬಂಧಿಸಲು ಸಾಧ್ಯವಾಗುತ್ತಿರಲಿಲ್ಲ. ಸರಪಣಿಯಿಂದಲೂ ಅವನನ್ನು ಕಟ್ಟಿ ಹಾಕಲು ಆಗುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತೊ, ತ್ಯಾ ಮಸಂಕಿತುಚ್ ರ್‍ಹಾಯ್, ತೆಕಾ ಸರ್‍ಪೊಳ್ಯಾನಿ ಭಾಂದುನ್ ಘಾಲುಕ್ ಕೊನಾಚ್ಯಾನ್‍ಬಿ ಹೊಯ್ನಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 5:3
6 ತಿಳಿವುಗಳ ಹೋಲಿಕೆ  

ಗುಪ್ತಸ್ಥಳಗಳಲ್ಲಿ ರಾತ್ರಿಕಳೆಯುತ್ತಾ ಹಂದಿಯ ಬಾಡು ತಿನ್ನುತ್ತಾ ಅಸಹ್ಯಪದಾರ್ಥಗಳ ಸಾರನ್ನು ತಮ್ಮ ಗಂಗಳಗಳಲ್ಲಿ ಬಡಿಸಿಕೊಳ್ಳುತ್ತಾ ಅಲ್ಲಿ ನಿಂತಿರು,


ಯಾಕಂದರೆ - ಈ ಮನುಷ್ಯನನ್ನು ಬಿಟ್ಟುಹೋಗಬೇಕೆಂದು ಆತನು ಆ ದೆವ್ವಕ್ಕೆ ಅಪ್ಪಣೆಕೊಟ್ಟಿದ್ದನು. ಅದು ಬಹು ಕಾಲದಿಂದ ಅವನನ್ನು ಹಿಡಿದಿತ್ತು; ಇದಲ್ಲದೆ ಅವನನ್ನು ಕಾವಲಲ್ಲಿಟ್ಟು ಸರಪಣಿಗಳಿಂದಲೂ ಬೇಡಿಗಳಿಂದಲೂ ಕಟ್ಟಿದ್ದರೂ ಅವನು ಆ ಬಂಧಗಳನ್ನು ಮುರಿದುಹಾಕುತ್ತಿದ್ದನು; ಮತ್ತು ಆ ದೆವ್ವ ಅವನನ್ನು ಅರಣ್ಯಪ್ರದೇಶಗಳಿಗೆ ಓಡಿಸುತ್ತಿತ್ತು.


ಆತನು ದೋಣಿಯಿಂದ ಇಳಿದುಬಂದ ಕೂಡಲೆ ದೆವ್ವಹಿಡಿದವನೊಬ್ಬನು ಸಮಾಧಿಯ ಗವಿಗಳೊಳಗಿಂದ ಆತನೆದುರಿಗೆ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು