Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 5:31 - ಕನ್ನಡ ಸತ್ಯವೇದವು J.V. (BSI)

31 ಆತನ ಶಿಷ್ಯರು ಆತನಿಗೆ - ಜನರು ನಿನ್ನನ್ನು ನೂಕುವದನ್ನು ಕಂಡೂ ಕಂಡು ನನ್ನನ್ನು ಯಾರು ಮುಟ್ಟಿದರೆಂದು ಕೇಳುತ್ತೀಯಲ್ಲಾ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆತನ ಶಿಷ್ಯರು ಆತನಿಗೆ, “ನಿನ್ನ ಸುತ್ತಲೂ ಜನರು ಮುತ್ತಿಕೊಂಡು ನೂಕುವುದು ನಿನಗೆ ತಿಳಿದೇ ಇದೆ. ಆದರೂ ‘ನನ್ನನ್ನು ಮುಟ್ಟಿದವರು ಯಾರು’ ಎಂದು ಕೇಳುತ್ತೀಯಲ್ಲಾ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಅದಕ್ಕೆ ಶಿಷ್ಯರು, “ತಮ್ಮ ಸುತ್ತಲೂ ಜನರು ಮುತ್ತಿಕೊಂಡಿರುವುದು ತಮಗೆ ತಿಳಿದೇ ಇದೆ. ಆದರೂ ‘ನನ್ನನ್ನು ಮುಟ್ಟಿದವರು ಯಾರು’ ಎಂದು ಕೇಳುತ್ತೀರಲ್ಲಾ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಶಿಷ್ಯರು ಯೇಸುವಿಗೆ, “ಅನೇಕ ಜನರು ನಿನ್ನ ಮೇಲೆ ಬೀಳುತ್ತಿದ್ದಾರೆ. ಹೀಗಿರಲು ‘ನನ್ನನ್ನು ಸ್ಪರ್ಶಿಸಿದವರು ಯಾರು?’ ಎಂದು ಕೇಳುತ್ತಿರುವೆಯಲ್ಲಾ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಯೇಸುವಿನ ಶಿಷ್ಯರು ಅವರಿಗೆ, “ಇಷ್ಟು ದೊಡ್ಡ ಗುಂಪು ನಿಮ್ಮ ಸುತ್ತಲೂ ನೂಕುತ್ತಿರುವುದನ್ನು ನೀವೇ ಕಾಣುತ್ತಿರುವಲ್ಲಿ, ‘ನನ್ನನ್ನು ಮುಟ್ಟಿದವರು ಯಾರು,’ ಎಂದು ಕೇಳುತ್ತೀರಲ್ಲಾ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ತನ್ನಾ ಶಿಸಾನಿ, “ಸಗ್ಳಿ ಲೊಕಾ ತುಜ್ಯಾ ಆಂಗಾರ್ ಯೆವ್ನ್ ಪಡುಲ್ಯಾತ್, ಅನಿ ತುಕಾ ಕೊನ್ ಹಾತ್‍ಲಾವ್ಲ್ಯಾನಿ ಮನುನ್, ಇಚಾರುಲೆ ಅನಿ?” ಮನುನ್ ಸಾಂಗಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 5:31
5 ತಿಳಿವುಗಳ ಹೋಲಿಕೆ  

ಆಗ ಯೇಸು - ನನ್ನನ್ನು ಮುಟ್ಟಿದವರಾರು ಎಂದು ಕೇಳಿದನು. ಎಲ್ಲರು - ನಾನಲ್ಲ ನಾನಲ್ಲ ಅನ್ನಲು ಪೇತ್ರನು - ಗುರುವೇ ಎಷ್ಟೋ ಜನರು ನಿನ್ನನ್ನು ಒತ್ತೊತ್ತಿ ಮೈ ಮೇಲೆ ಬೀಳುತ್ತಿದ್ದಾರಲ್ಲಾ ಅಂದನು.


ಹೊತ್ತು ಇಳಿಯುತ್ತಾ ಬಂತು. ಆ ಹನ್ನೆರಡು ಮಂದಿ ಶಿಷ್ಯರು ಆತನ ಬಳಿಗೆ ಬಂದು - ಈ ಗುಂಪಿಗೆ ಅಪ್ಪಣೆಕೊಡು; ಇವರು ಸುತ್ತಲಿರುವ ಹಳ್ಳಿಪಳ್ಳಿಗಳಿಗೆ ಹೋಗಿ ಇಳುಕೊಂಡು ಊಟಕ್ಕೆ ಬೇಕಾದ ಪದಾರ್ಥಗಳನ್ನು ದೊರಕಿಸಿಕೊಳ್ಳಲಿ; ನಾವು ಇಲ್ಲಿ ಅಡವಿಯ ಸ್ಥಳದಲ್ಲಿ ಇದ್ದೇವಲ್ಲಾ ಎಂದು ಆತನಿಗೆ ಹೇಳಲಾಗಿ


ಆತನು ಅವನ ಸಂಗಡ ಹೋದನು; ಮತ್ತು ಬಹು ಜನರು ಆತನನ್ನು ನೂಕಿಕೊಂಡು ಹಿಂದೆ ಹೋದರು.


ಆ ಕ್ಷಣವೇ ಯೇಸು ತನ್ನಿಂದ ಶಕ್ತಿಯು ಹೊರಟಿತೆಂದು ತನ್ನಲ್ಲಿ ತಿಳುಕೊಂಡು ಗುಂಪಿನಲ್ಲಿ ಹಿಂತಿರುಗಿ - ನನ್ನ ಉಡುಪನ್ನು ಯಾರು ಮುಟ್ಟಿದರು? ಎಂದು ಕೇಳಲು


ಆದರೆ ಆತನು ಈ ಕೆಲಸ ಮಾಡಿದವಳನ್ನು ಕಾಣಬೇಕೆಂದು ಸುತ್ತಲು ನೋಡುತ್ತಾ ಇರಲಾಗಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು