Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 5:36 - ಕನ್ನಡ ಸತ್ಯವೇದವು J.V. (BSI)

36 ಅವರು ಆಡಿದ ಮಾತನ್ನು ಯೇಸು ಲಕ್ಷ್ಯಮಾಡದೆ ಸಭಾಮಂದಿರದ ಅಧಿಕಾರಿಗೆ - ಅಂಜಬೇಡ, ನಂಬಿಕೆ ಮಾತ್ರ ಇರಲಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಅವರು ಆಡಿದ ಮಾತನ್ನು ಯೇಸು ಗಣನೆಗೆ ತಂದುಕೊಳ್ಳದೆ ಸಭಾಮಂದಿರದ ಅಧಿಕಾರಿಗೆ, “ಅಂಜಬೇಡ, ನಂಬಿಕೆ ಮಾತ್ರ ಇರಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಅವರು ಹೇಳಿದ ಮಾತುಗಳನ್ನು ಯೇಸು ಕೇಳಿಯೂ ಅವನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳದೆ ಯಾಯೀರನಿಗೆ, “ಭಯಪಡಬೇಡ, ನಿನ್ನಲ್ಲಿ ವಿಶ್ವಾಸ ಒಂದಿದ್ದರೆ ಸಾಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಆದರೆ ಯೇಸು ಅವರ ಮಾತನ್ನು ಗಣನೆಗೆ ತಂದುಕೊಳ್ಳದೆ, ಸಭಾಮಂದಿರದ ಅಧಿಕಾರಿಗೆ, “ಹೆದರಬೇಡ, ನಂಬಿಕೆ ಮಾತ್ರ ಇರಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಆದರೆ ಯೇಸು ಅವರು ಹೇಳಿದ ಮಾತನ್ನು ಲಕ್ಷ್ಯಮಾಡದೆ, ಆ ಸಭಾಮಂದಿರದ ಅಧಿಕಾರಿಗೆ, “ಭಯಪಡಬೇಡ ನಂಬಿಕೆ ಮಾತ್ರ ಇರಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ಖರೆ ಜೆಜುನ್ ತೆನಿ ಸಾಂಗ್ತಾಲ್ಲ್ಯಾಕ್ ಧ್ಯಾನ್ ದಿವ್ನಸ್ತಾನಾ ತ್ಯಾ ಅದಿಕಾರ್‍ಯಾ “ತಿಯಾ ಕಾಯ್ ಭಿಂವ್‍ನಕೊ, ವಿಶ್ವಾಸಾನ್ ರ್‍ಹಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 5:36
11 ತಿಳಿವುಗಳ ಹೋಲಿಕೆ  

ಆದರೆ ಯೇಸು ಅದನ್ನು ಕೇಳಿ ಅವನಿಗೆ - ಅಂಜಬೇಡ, ನಂಬಿಕೆ ಮಾತ್ರ ಇರಲಿ, ಆಕೆ ಬದುಕುವಳು ಎಂದು ಉತ್ತರಕೊಟ್ಟನು.


ಯೇಸು ಆಕೆಗೆ - ನೀನು ನಂಬಿದರೆ ದೇವರ ಮಹಿಮೆಯನ್ನು ಕಾಣುವಿ ಎಂದು ನಾನು ನಿನಗೆ ಹೇಳಲಿಲ್ಲವೇ ಎಂದು ಉತ್ತರಕೊಟ್ಟನು.


ಯೇಸು ಅವನಿಗೆ - ನಿನ್ನ ಕೈಲಿ ಆಗುವ ಹಾಗಿದ್ದರೆ ಅನ್ನುತ್ತೀಯೋ? ನಂಬುವವನಿಗೆ ಎಲ್ಲಾ ಆಗುವದು ಎಂದು ಹೇಳಿದನು.


ಆತನು ಆಕೆಗೆ - ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು; ಸಮಾಧಾನದಿಂದ ಹೋಗು; ನಿನ್ನನ್ನು ಕಾಡಿದ ರೋಗವು ಹೋಗಿ ನಿನಗೆ ಗುಣವಾಗಲಿ ಎಂದು ಹೇಳಿದನು.


ನಿಮ್ಮ ನಂಬಿಕೆ ಕಡಿಮೆಯಾಗಿರುವದರಿಂದಲೇ ಆಗಲಿಲ್ಲ; ನಿಮಗೆ ಸತ್ಯವಾಗಿ ಹೇಳುತ್ತೇನೆ, ಸಾಸಿವೇಕಾಳಷ್ಟು ನಂಬಿಕೆ ನಿಮಗೆ ಇರುವದಾದರೆ ನೀವು ಈ ಬೆಟ್ಟಕ್ಕೆ -


ಅವರು ಮರುದಿನ ಬೆಳಿಗ್ಗೆ ಎದ್ದು ತೆಕೋವ ಅರಣ್ಯಕ್ಕೆ ಹೊರಟರು. ಅವರು ಹೊರಡುವಾಗ ಯೆಹೋಷಾಫಾಟನು ನಿಂತು ಅವರಿಗೆ - ಯೆಹೂದ್ಯರೇ, ಯೆರೂಸಲೇವಿುನವರೇ, ನನ್ನ ಮಾತನ್ನು ಕೇಳಿರಿ. ಯೆಹೋವನಲ್ಲಿ ಭರವಸವಿಡಿರಿ, ಆಗ ಸುರಕ್ಷಿತರಾಗಿರುವಿರಿ; ಆತನ ಪ್ರವಾದಿಗಳನ್ನು ನಂಬಿರಿ, ಆಗ ಸಾರ್ಥಕರಾಗುವಿರಿ ಎಂದು ಹೇಳಿದನು.


ಹೀಗೆ ಆತನು ಅವರೊಂದಿಗೆ ಮಾತಾಡುತ್ತಿರುವಾಗ ಒಬ್ಬ ಅಧಿಕಾರಿ ಬಂದು ಆತನಿಗೆ ಅಡ್ಡಬಿದ್ದು - ನನ್ನ ಮಗಳು ಈಗಲೇ ತೀರಿಹೋದಳು; ಆದಾಗ್ಯೂ ನೀನು ಬಂದು ಆಕೆಯ ಮೇಲೆ ಕೈ ಇಟ್ಟರೆ ಬದುಕುವಳು ಎಂದು ಬೇಡಿಕೊಳ್ಳಲು


ಆಗ ಸಭಾಮಂದಿರದ ಅಧಿಕಾರಿಗಳಲ್ಲಿ ಒಬ್ಬನಾದ ಯಾಯೀರನೆಂಬವನು ಬಂದು ಯೇಸುವನ್ನು ಕಂಡು ಆತನ ಪಾದಗಳಿಗೆ ಬಿದ್ದು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು