Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 6:12 - ಕನ್ನಡ ಸತ್ಯವೇದವು J.V. (BSI)

12 ಅವರು ಹೊರಟುಹೋಗಿ ಜನರಿಗೆ - ದೇವರ ಕಡೆಗೆ ತಿರುಗಿಕೊಳ್ಳಬೇಕೆಂದು ಸಾರಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವರು ಹೊರಟು ಹೋಗಿ ಜನರಿಗೆ, “ನೀವು ನಿಮ್ಮ ಪಾಪಗಳನ್ನು ಬಿಟ್ಟು ಮಾನಸಾಂತರ ಹೊಂದಬೇಕು” ಎಂದು ಸಾರಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಶಿಷ್ಯರು ಹೊರಟುಹೋಗಿ, “ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗಿರಿ,” ಎಂದು ಜನರಿಗೆ ಸಾರಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಶಿಷ್ಯರು ಅಲ್ಲಿಂದ ಹೊರಟು, ಇತರ ಸ್ಥಳಗಳಿಗೆ ಹೋಗಿ ಜನರಿಗೆ, “ನಿಮ್ಮಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ” ಎಂದು ಉಪದೇಶಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಶಿಷ್ಯರು ಹೊರಟುಹೋಗಿ ಜನರಿಗೆ ದೇವರ ಕಡೆ ತಿರುಗಿಕೊಳ್ಳಿರಿ ಎಂದು ಸಾರಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಹೆಚೆ ಸಾಟ್ನಿ ತೆನಿ ಭಾಯ್ರ್ ಗಾಂವಾತ್ನಿ ಗೆಲ್ಯಾನಿ ಅನಿ ತೆನಿ ಲೊಕಾಕ್ನಿ ತುಮಿ ಪಾಪ್ ಕರ್‍ತಲೆ ಸೊಡಾ ಮನುನ್ ಸಾಂಗುಕ್ಲಾಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 6:12
23 ತಿಳಿವುಗಳ ಹೋಲಿಕೆ  

ಅಂದಿನಿಂದ ಯೇಸು - ಪರಲೋಕರಾಜ್ಯವು ಸಮೀಪಿಸಿತು; ದೇವರ ಕಡೆಗೆ ತಿರುಗಿಕೊಳ್ಳಿರಿ ಎಂದು ಸಾರಿ ಹೇಳುವದಕ್ಕೆ ಪ್ರಾರಂಭಿಸಿದನು.


ಯೆಹೂದ್ಯರಿಗೂ ಗ್ರೀಕರಿಗೂ ದೇವರ ಕಡೆಗೆ ತಿರುಗಬೇಕೆಂತಲೂ ನಮ್ಮ ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡಬೇಕೆಂತಲೂ ಖಂಡಿತವಾಗಿ ಬೋಧಿಸುವವನಾಗಿದ್ದೆನು; ಇದೆಲ್ಲಾ ನಿಮಗೇ ತಿಳಿದಿದೆ.


ಹೀಗೆಂದ ಮಾತುಗಳನ್ನು ಆ ಸುನ್ನತಿಯವರು ಕೇಳಿ ಆಕ್ಷೇಪಣೆ ಮಾಡುವದನ್ನು ಬಿಟ್ಟು - ಹಾಗಾದರೆ ದೇವರು ಅನ್ಯಜನರಿಗೂ ಜೀವಕೊಡಬೇಕೆಂದು ಅವರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿದ್ದಾನೆ ಎಂದು ದೇವರನ್ನು ಕೊಂಡಾಡಿದರು.


ಪೇತ್ರನು ಅವರಿಗೆ - ನಿಮ್ಮ ಪಾಪಗಳು ಪರಿಹಾರವಾಗುವದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನ ಮೇಲೆ ದೀಕ್ಷಾಸ್ನಾನಮಾಡಿಸಿಕೊಳ್ಳಿರಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ;


ಹಾಗೆ ಭಾವಿಸಕೂಡದೆಂದು ನಿಮಗೆ ಹೇಳುತ್ತೇನೆ. ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ನೀವೆಲ್ಲರೂ ಹಾಗೆಯೇ ಹಾಳಾಗಿ ಹೋಗುವಿರಿ.


ನ್ಯಾಯವಿಚಾರಣೆಯಲ್ಲಿ ನಿನೆವೆ ಪಟ್ಟಣದವರು ಈ ಸಂತತಿಯವರೊಂದಿಗೆ ನಿಂತು ಇವರನ್ನು ಅಪರಾಧಿಗಳೆಂದು ಹೇಳುವರು. ಅವರು ಯೋನನು ಸಾರಿದ ವಾಕ್ಯವನ್ನು ಕೇಳಿ ದೇವರ ಕಡೆಗೆ ತಿರುಗಿಕೊಂಡರು; ಆದರೆ ಇಲ್ಲಿ ಯೋನನಿಗಿಂತಲೂ ಹೆಚ್ಚಿನವನಿದ್ದಾನೆ.


ಹಾಗಾದರೆ ನಿಮ್ಮ ಮನಸ್ಸು ದೇವರ ಕಡೆಗೆ ತಿರುಗಿತೆಂಬದನ್ನು ತಕ್ಕ ಫಲದಿಂದ ತೋರಿಸಿರಿ.


ಪರಲೋಕರಾಜ್ಯವು ಸಮೀಪವಾಯಿತು; ದೇವರ ಕಡೆಗೆ ತಿರುಗಿಕೊಳ್ಳಿರಿ ಎಂದು ಯೂದಾಯದ ಅಡವಿಯಲ್ಲಿ ಸಾರಿ ಹೇಳುತ್ತಾ ಬಂದನು.


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪುಮಾಡುವೆನು; ಅಧರ್ಮವು ನಿಮ್ಮನ್ನು ನಾಶಮಾಡದಂತೆ ತಿರುಗಿಕೊಂಡು ನಿಮ್ಮ ಅಪರಾಧಗಳನ್ನೆಲ್ಲಾ ಬಿಟ್ಟುಬಿಡಿರಿ.


ಮೊದಲು ದಮಸ್ಕದವರಿಗೆ, ಆಮೇಲೆ ಯೆರೂಸಲೇವಿುನಲ್ಲಿಯೂ ಯೂದಾಯದ ಎಲ್ಲಾ ಸೀಮೆಯಲ್ಲಿಯೂ ಇರುವವರಿಗೆ ಮತ್ತು ಅನ್ಯಜನರಿಗೆ ಸಹ - ನೀವು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ ಮಾನಸಾಂತರಕ್ಕೆ ಯೋಗ್ಯವಾದ ಕೃತ್ಯಗಳನ್ನು ಮಾಡಬೇಕೆಂತಲೂ ಸಾರಿದೆನು.


ಆದದರಿಂದ ದೇವರು ನಿಮ್ಮ ಪಾಪಗಳನ್ನು ಅಳಿಸಿಬಿಡುವ ಹಾಗೆ ನೀವು ಪಶ್ಚಾತ್ತಾಪಪಟ್ಟು ಆತನ ಕಡೆಗೆ ತಿರುಗಿಕೊಳ್ಳಿರಿ. ತಿರುಗಿದರೆ ದೇವರ ಸನ್ನಿಧಾನದಿಂದ ವಿಶ್ರಾಂತಿಕಾಲಗಳು ಒದಗಿ


ಪಾಪಪರಿಹಾರಕ್ಕೋಸ್ಕರ ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಮಾತು ಯೆರೂಸಲೇಮು ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡುವದೆಂತಲೂ ಬರೆದದೆ.


ಅದರಂತೆ ಒಬ್ಬ ಪಾಪಿಯು ದೇವರ ಕಡೆಗೆ ತಿರುಗಿಕೊಳ್ಳುವ ವಿಷಯದಲ್ಲಿ ದೇವದೂತರ ಮುಂದೆ ಸಂತೋಷವಾಗುವದೆಂದು ನಿಮಗೆ ಹೇಳುತ್ತೇನೆ ಅಂದನು.


ಅದರಂತೆ ದೇವರ ಕಡೆಗೆ ತಿರುಗಿಕೊಳ್ಳುವದಕ್ಕೆ ಅವಶ್ಯವಿಲ್ಲದ ತೊಂಭತ್ತೊಂಭತ್ತು ಮಂದಿ ನೀತಿವಂತರಿಗಿಂತ ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಸಂತೋಷವುಂಟಾಗುವದೆಂದು ನಿಮಗೆ ಹೇಳುತ್ತೇನೆ.


ಹಾಗಲ್ಲವೆಂದು ನಿಮಗೆ ಹೇಳುತ್ತೇನೆ. ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ನೀವೆಲ್ಲರೂ ಅವರಂತೆ ಹಾಳಾಗಿ ಹೋಗುವಿರಿ ಎಂದು ಹೇಳಿದನು.


ಕಾಲ ಪರಿಪೂರ್ಣವಾಯಿತು, ದೇವರ ರಾಜ್ಯವು ಸಮೀಪಿಸಿತು, ದೇವರ ಕಡೆಗೆ ತಿರುಗಿಕೊಂಡು ಸುವಾರ್ತೆಯನ್ನು ನಂಬಿರಿ ಎಂದು ದೇವರ ಸುವಾರ್ತೆಯನ್ನು ಸಾರಿಹೇಳಿದನು.


ಆಗ ಆತನು ತನ್ನ ಮಹತ್ಕಾರ್ಯಗಳು ಬಹಳವಾಗಿ ನಡೆದ ಊರುಗಳು ದೇವರ ಕಡೆಗೆ ತಿರುಗಲಿಲ್ಲವೆಂದು ಅವುಗಳನ್ನು ಗದರಿಸತೊಡಗಿದನು.


ನೀವು ಹೋಗಿ - ನನಗೆ ಯಜ್ಞವು ಬೇಡ, ಕರುಣೆಯೇಬೇಕು ಎಂಬ ಮಾತಿನ ಅರ್ಥವನ್ನು ಕಲಿತುಕೊಳ್ಳಿರಿ. ನಾನು ನೀತಿವಂತರನ್ನು ಕರೆಯುವದಕ್ಕೆ ಬಂದವನಲ್ಲ, ಪಾಪಿಗಳನ್ನು ಕರೆಯುವದಕ್ಕೆ ಬಂದವನು ಅಂದನು.


ಆಗ ಅವರು ಹೊರಟುಹೋಗಿ ಎಲ್ಲೆಲ್ಲಿಯೂ ಸುವಾರ್ತೆಯನ್ನು ಸಾರುತ್ತಾ ರೋಗಿಗಳಿಗೆ ವಾಸಿಮಾಡುತ್ತಾ ಗ್ರಾಮಗಳಲ್ಲೆಲ್ಲಾ ಸಂಚರಿಸಿದರು.


ಕರ್ತನ ದಾರಿಯನ್ನು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆಮಾಡಿರಿ ಎಂದು ಅಡವಿಯಲ್ಲಿ ಕೂಗುವವನ ಶಬ್ದವದೆ ಎಂತಲೂ


ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಹೇಳಬೇಕಾದದ್ದನ್ನು ಹೇಳಿ ಮುಗಿಸಿದ ಬಳಿಕ ಅಲ್ಲಿಯವರ ಊರುಗಳಲ್ಲಿ ಉಪದೇಶಮಾಡುವದಕ್ಕೂ ಸುವಾರ್ತೆಯನ್ನು ಸಾರುವದಕ್ಕೂ ಅಲ್ಲಿಂದ ಹೊರಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು